ಸರಕು ಸಾಗಣೆ ವಾಹನಗಳಿಗೆ 60 ಕಿ.ಮೀ. ಸ್ಪೀಡ್‌ ಗವರ್ನರ್‌ ಕಡ್ಡಾಯ: ಉಡುಪಿ ಡಿಸಿ

KannadaprabhaNewsNetwork |  
Published : Jun 30, 2026, 02:45 AM IST
ಡಿಸಿ ಅಧ್ಯಕ್ಷತೆಯಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು | Kannada Prabha

ಸಾರಾಂಶ

ಜಿಲ್ಲೆಯ ಸರಕು ಸಾಗಣೆ ವಾಹನಗಳಿಗೆ ಗಂಟೆಗೆ 60 ಕಿ.ಮೀ. ವೇಗವನ್ನು ಮಿತಿಗೊಳಿಸುವ ಸ್ವೀಡ್ ಗವರ್ನರ್‌ಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಉಡುಪಿ: ಜಿಲ್ಲೆಯ ಸರಕು ಸಾಗಣೆ ವಾಹನಗಳಿಗೆ ಗಂಟೆಗೆ 60 ಕಿ.ಮೀ. ವೇಗವನ್ನು ಮಿತಿಗೊಳಿಸುವ ಸ್ವೀಡ್ ಗವರ್ನರ್‌ಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ರಸ್ತೆ ಅಪಘಾತಗಳು ಹೆಚ್ಚುತ್ತಿರುವುದರಿಂದ ಜಿಲ್ಲೆಯೊಳಗೆ ಸಂಚರಿಸುವ 6 ಚಕ್ರ ಮತ್ತು ಮೇಲ್ಪಟ್ಟ ಎಲ್ಲಾ ಸರಕು ಸಾಗಾಣಿಕೆ ವಾಹನಗಳಿಗೆ ಸ್ಪೀಡ್ ಗವರ್ನರ್‌ ಕಡ್ಡಾಯವಾಗಿ ಅಳವಡಿಸಬೇಕು ಎಂದ ಅವರು, ರೆಡಿಮೇಡ್ ಕಾಂಕ್ರೀಟ್ ಮಿಕ್ಸಿಂಗ್ ವಾಹನಗಳು ಸಂಚರಿಸುವಾಗ ಎಲ್ಲೆಡೆ ರಸ್ತೆ ಮೇಲೆ ಕಾಂಕ್ರೀಟ್ ಬಿದ್ದು ರಸ್ತೆ ಹಾಳಾಗುತ್ತಿವೆ, ಮರಳು ಸಾಗಿಸುವ ವಾಹನಗಳ ಓವರ್ ಲೋಡ್‌ನಿಂದ ಇತರ ವಾಹನಗಳಿಗೆ ತೊಂದರೆಯಾಗುತ್ತಿದೆ. ಅಪಘಾತಗಳು ಹೆಚ್ಚುತ್ತಿವೆ, ಈ ವಾಹನಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.ಜಿಲ್ಲೆಯಲ್ಲಿ ಸಂಚರಿಸುವ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಬಸ್‌ಗಳಲ್ಲಿ ಕಡ್ಡಾಯವಾಗಿ ಬಾಗಿಲುಗಳನ್ನು ಅಳವಡಿಸಿರುವಂತೆ ಈ ಹಿಂದಿನ ಸಭೆಯಲ್ಲಿ ಸೂಚಿಸಲಾಗಿದ್ದರೂ ಸಹ ಇದು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಆಗಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಡಿಸಿ, ಈ ಬಗ್ಗೆ 2 ವಾರಗಳಲ್ಲಿ ವರದಿನೀಡುವಂತೆ ಸೂಚಿಸಿದರು.

ಎಸ್ಪಿ ಹರಿರಾಮ್ ಶಂಕರ್, ಪೌರಾಯುಕ್ತ ಮಹಾಂತೇಶ ಹಂಗರಗಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಕಿರಣ್ ಎಸ್., ರಾಹೆ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಗವಿಕಲತೆ ತಡೆಗೆ ಪೋಲಿಯೋ ಲಸಿಕೆ ಕಡ್ಡಾಯ: ಪೊನ್ನಣ್ಣ
ಜಾಗತಿಕ ಆರ್ಥಿಕತೆಗೆ ಎಂಎಸ್‌ಎಂಇಯಿಂದ ಅಗಾಧ ಕೊಡುಗೆ: ಸಿಎ ಎಸ್‌.ಎಸ್‌. ನಾಯಕ್‌