ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಸೋಮವಾರ ಉದ್ಘಾಟಿಸಿದರು.
ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇದರ ಉದ್ದೇಶ. ಬೆಳಗಿನ ಉಪಾಹಾರ 5 ರುಪಾಯಿ. ಮಧ್ಯಾಹ್ನ ಮತ್ತು ರಾತ್ರಿ ಊಟ 10 ರುಪಾಯಿಗಳಿಗೆ ದೊರೆಯಲಿದೆ. ಆಹಾರದ ಮೆನು ಕೂಡ ಬದಲಾಯಿಸಲಾಗಿದೆ. ಕುಳಿತು ತಿನ್ನಲು ಅನುಕೂಲವಾಗಲೆಂದು ಡೈನಿಂಗ್ ಹಾಲ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನ ಪ್ರತಿ ವಾರ್ಡ್‍ನಲ್ಲಿ ಹಾಗೂ ರಾಜ್ಯದ ಇತರೆಡೆಗಳಲ್ಲಿ ಕೂಡ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಹಿಂದಿನ ಸರ್ಕಾರ ಊಟ ಪೂರೈಸದೇ, ಕೆಲವನ್ನು ಮುಚ್ಚಿಯೂ ಬಿಟ್ಟಿತ್ತು. ಬಡವರು ಊಟ ಮಾಡಬೇಕೆಂಬ ಕಾರಣಕ್ಕೆ ನಾವು ಪುನ: ಪ್ರಾರಂಭಿಸಿದ್ದೇವೆ ಎಂದರು.11ಕೆಡಿಬಿಪಿ1-
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.11ಕೆಡಿಬಿಪಿ2-ಇಂದಿರಾ ಕ್ಯಾಂಟೀನ್‌ನಲ್ಲಿ ತಿಂಡಿ ಸವಿದ ಮುಖ್ಯಮಂತ್ರಿ.