63 ಅಂಗನವಾಡಿ ಕಾರ್ಯಕರ್ತೆ, 149 ಸಹಾಯಕಿ ಹುದ್ದೆ ಖಾಲಿ

KannadaprabhaNewsNetwork |  
Published : Aug 01, 2024, 12:17 AM ISTUpdated : Aug 01, 2024, 12:18 AM IST

ಸಾರಾಂಶ

63 Anganwadi workers, 149 assistant posts are vacant

ಕನ್ನಡಪ್ರಭ ವಾರ್ತೆ, ಚಿತ್ರದುರ್ಗ

ಜಿಲ್ಲೆಯ 7ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಡಿ ಬರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಜಿಲ್ಲೆಯ ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 63 ಅಂಗನವಾಡಿ ಕಾರ್ಯಕರ್ತೆ, 3 ಮಿನಿ ಅಂಗನವಾಡಿ ಹುದ್ದೆಗಳಿಗೆ ಹಾಗೂ 149 ಅಂಗನವಾಡಿ ಸಹಾಯಕಿಯರು ಹುದ್ದೆಗಳು ಸೇರಿದಂತೆ ಒಟ್ಟು 215 ಖಾಲಿ ಸ್ಥಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆರಿಗೆ ದ್ವಿತೀಯ ಪಿಯುಸಿ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಎಸ್ಎಸ್ಎಲ್ ಸಿ ಉತ್ತೀರ್ಣರಾಗಿರುವ 19 ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ ಅಭ್ಯರ್ಥಿಗಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು https://karnemakaone.kar.nic.in/abcd/ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಜುಲೈ 30 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ.ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.

----ಭರಮಸಾಗರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ 8 ಮುಖ್ಯ ಅಂಗನವಾಡಿ ಕಾರ್ಯಕರ್ತೆ ಹಾಗೂ 21 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಸೇರಿ ಒಟ್ಟು 29 ಖಾಲಿ ಹುದ್ದೆಗಳಿವೆ. ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 3 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 12 ಅಂಗನವಾಡಿ ಸಹಾಯಕಿ ಸೇರಿದಂತೆ 15 ಹುದ್ದೆಗಳು ಖಾಲಿ ಇವೆ. ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 16 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 30 ಅಂಗನವಾಡಿ ಸಹಾಯಕಿ ಸೇರಿದಂತೆ 46 ಹುದ್ದೆಗಳು ಖಾಲಿ ಇದೆ. ಹಿರಿಯೂರು ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 4 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 35 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಸೇರಿದಂತೆ 40 ಹುದ್ದೆಗಳು ಖಾಲಿ ಇದೆ. ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 9 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 14 ಅಂಗನವಾಡಿ ಸಹಾಯಕಿಯರ ಸೇರಿದಂತೆ 24 ಹುದ್ದೆ ಖಾಲಿ ಇವೆ. ಹೊಸದುರ್ಗ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 18 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 1ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರ ಸೇರಿದಂತೆ 42 ಹುದ್ದೆಗಳು ಮತ್ತು ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 5 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 14 ಅಂಗನವಾಡಿ ಸಹಾಯಕಿಯರ ಸೇರಿದಂತೆ 19 ಹುದ್ದೆಗಳು ಖಾಲಿ ಇವೆ.

PREV

Recommended Stories

ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಎಮ್ಮೆ ಕೊಡಿಸುವುದಾಗಿ ಪ್ರೇಮ್‌ಗೆ ವಂಚನೆ : ₹4.75 ಲಕ್ಷ ಮೋಸ