ಕನ್ನಡಪ್ರಭ ವಾರ್ತೆ ಕಾರ್ಕಳ
ಘಟನೆ ವಿವರ:
ಗ್ರಾಹಕರೊಬ್ಬರು ಜೂನ್ 9ರಂದು ಕಾರ್ಕಳದ ಮೀನು ಮಾರುಕಟ್ಟೆಯ ವ್ಯಾಪಾರಿ ಮಾಲಾ ಎಂಬವರ ಬಳಿ ದುಬಾರಿ ಅಂಜಲ್ ಮೀನನ್ನು ಬುಕ್ ಮಾಡಿದ್ದರು. ಅದರಂತೆ ಮಾಲಾ ಮರುದಿನ, 6.5 ಕೆ.ಜಿ. ತೂಕದ 6500 ರು. ಮೌಲ್ಯದ ಅಂಜಲ್ ಮೀನನ್ನು ಪಡೆದು ಫ್ರಿಡ್ಜ್‌ನಲ್ಲಿಟ್ಟಿದ್ದರು. ಅದರಂತೆ ಗ್ರಾಹಕರಿಗೆ ಮೀನು ನೀಡಲು ಫ್ರಿಡ್ಜ್‌ನಲ್ಲಿಟ್ಟಿದ್ದ ಮೀನು ತೆಗೆಯಲು ಹೋದಾಗ ಮೀನು ಕಳವಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಲಾ ಅವರ ಪುತ್ರ ಕಾರ್ಕಳ ನಗರ ಠಾಣೆಯಲ್ಲಿ ದೂರು ನೀಡಿದ್ದರು.ಪ್ರಕರಣ ದಾಖಲಿಸಿದ ಪೊಲೀಸರು ಅನುಮಾನದ ಮೇರೆಗೆ ಸೂರಜ್ ಎಂಬಾತನನ್ನು ವಿಚಾರಿಸಿದ್ದು, ಆತ ಕುಡಿತಕ್ಕಾಗಿ ಅಂಜಲ್ ಮೀನು ಕಳವುಗೈದಿರುವುದನ್ನು ಒಪ್ಪಿಕೊಂಡಿದ್ದಾನೆ. ತಾನು ಕದ್ದ 6500 ರು. ಮೌಲ್ಯದ ಅಂಜಲ್ ಮೀನನ್ನು ಮದ್ಯಕ್ಕಾಗಿ ಕೇವಲ 140 ರು.ಗೆ ಮಾರ್ಕೆಟ್ ಬಳಿಯ ಹೂವಿನ ವ್ಯಾಪಾರಿ ವಿಶಾಲ್ ಎಂಬಾತನಿಗೆ ಮಾರಾಟ ಮಾಡಿದ್ದಾನೆ. ಈತನ ಹೇಳಿಕೆ ಆಧರಿಸಿ ಪೊಲೀಸರು ಮೀನು ಖರೀದಿಸಿದ್ದ ಹೂವಿನ ವ್ಯಾಪಾರಿಯನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದು, ಆತ ಕೂಡ ಸತ್ಯ ಒಪ್ಪಿಕೊಂಡಿದ್ದಾನೆ.