ಕನ್ನಡಪ್ರಭ ವಾರ್ತೆ, ಕಡೂರು
ಬೆಳಿಗ್ಗೆ 9 ಗಂಟೆಗೆ ಸಮ್ಮೇಳನಾಧ್ಯಕ್ಷ ಹೊಸೂರು ಪುಟ್ಟರಾಜುರವರ ಮೆರವಣಿಗೆ ಪಟ್ಟಣದ ವೆಂಕಟೇಶ್ವರ ದೇವಸ್ಥಾನದಿಂದ ನಡೆಯಲಿದೆ. 11 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಅಧ್ಯಕ್ಷ ನಾಡೋಜ ಮಹೇಶ್ ಜೋಷಿ ಮತ್ತು ಕನ್ನಡ ಪೂಜಾರಿ ಡಾ. ಹಿರೇಮಗಳೂರು ಕಣ್ಣನ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಶಾಸಕ ಕೆ.ಎಸ್.ಆನಂದ್ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಿದ್ದು, ಸಂಸದ ಶ್ರೇಯಸ್ ಪಟೇಲ್ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಆಶಯ ನುಡಿ ನುಡಿಯಲಿದ್ದು ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಸಮ್ಮೇಳನಾಧ್ಯಕ್ಷರ ಭಾಷಣ ಪ್ರತಿ ಬಿಡುಗಡೆ ಮಾಡಲಿದ್ದಾರೆ.
ಸಮ್ಮೇಳನದಲ್ಲಿ ಒಟ್ಟು 4 ಗೋಷ್ಠಿಗಳಿದ್ದು, ತಾಲೂಕು ದರ್ಶನ ಗೋಷ್ಠಿ, ಕೃಷಿ ಗೋಷ್ಠಿ, ಮಾಧ್ಯಮ ಗೋಷ್ಠಿ ಮತ್ತು ಕವಿಗೋಷ್ಠಿ ನಡೆಯಲಿದೆ. ಬಹಿರಂಗ ಅಧಿವೇಶನದ ಅಧ್ಯಕ್ಷತೆಯನ್ನು ತಾಲೂಕು ಕಸಾಪ ಅಧ್ಯಕ್ಷ ಸಿಂಗಟಗೆರೆ ಸಿದ್ದಪ್ಪ ವಹಿಸಲಿದ್ದಾರೆ. ಹಿರಿಯ ಸಾಹಿತಿ ಡಾ.ಎಲ್.ಹನುಮಂತಯ್ಯ ಸಮಾರೋಪ ಭಾಷಣ ಮಾಡಲಿದ್ದಾರೆ. ಸಮ್ಮೇಳನದಲ್ಲಿ ಕನ್ನಡ ಹೋರಾಟಗಾರರು, ಸಾಹಿತಿಗಳು, ಚಿಂತಕರಿಗೆ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿಪ್ರಕಾಶ್ ಚಿಂತಕ ಹಾಗು ಮಾಜಿ ಶಾಸಕ ವೈ.ಎಸ್.ವಿ.ದತ್ತ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆಂದು ಬಾಲುಮಚ್ಚೇರಿ ಹೇಳಿದರು.-- ಬಾಕ್ಸ್ ---
12ಕೆಕೆಡಿಯು1.ಹೊಸೂರು ಪುಟ್ಟರಾಜು ( ಬಾಕ್ಸ್ಗೆ ಫೋಟೊ)