ಜಿಲ್ಲಾಸ್ಪತ್ರೆ ಸಿಬ್ಬಂದಿ ನೇಮಕಕ್ಕೆ 7 ದಿನಗಳ ಗಡುವು

KannadaprabhaNewsNetwork |  
Published : Dec 09, 2025, 12:15 AM IST
ಸಿಕೆಬಿ-3 ನಗರ ಹೊರವಲಯದ ಅಣಕನೂರು ಬಳಿಯ ಜಿಲ್ಲಾ ಕಾರಾಗೃಹಕ್ಕೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಭೇಟಿ ನೀಡಿ ಅಲ್ಲಿನ ಅಡುಗೆ ಕೊಠಡಿ ಶುಚಿತ್ವ, ಆಹಾರದ ಗುಣಮಟ್ಟ ಪರಿಶೀಲಿಸಿದರು | Kannada Prabha

ಸಾರಾಂಶ

ಸರ್ಕಾರದ ಅನುದಾನದಲ್ಲಿ ಯಾವುದೇ ಕಟ್ಟಡಗಳ ಕಾಮಗಾರಿಪೂರ್ಣವಾಗಿ ಲೋಕಾರ್ಪಣೆ ಆದ ಮೇಲೆ ಆ ಕೇಂದ್ರಗಳಲ್ಲಿ ಜನರಿಗೆ ಸೇವೆಗಳು ಲಭ್ಯ ಆಗಬೇಕು. ಸಿಬ್ಬಂದಿ ಕೊರತೆಯಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಸರಿಯಲ್ಲ. ಜಿಲ್ಲಾಸ್ಪತ್ರೆಯ ಕೆಲವು ವಾರ್ಡ್‌ಗಳಲ್ಲಿ ಸಿಬಂಬಂದಿ ಕೊರತೆ ಇದೆ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಜಿಲ್ಲಾ ಆಸ್ಪತ್ರೆಯ ಕೆಲವು ವಿಭಾಗಗಳಲ್ಲಿ ಸಿಬಂದಿ ಕೊರತೆಯಿಂದ ಸಾರ್ವಜನಿಕರಿಗೆ ಚಿಕಿತ್ಸೆ ದೊರಕುತ್ತಿಲ್ಲ, ಮುಂದಿನ 7 ದಿನಗಳ ಒಳಗಾಗಿ ಸಿಬ್ಬಂದಿ ನೇಮಿಸಿಕೊಂಡು ಆರೋಗ್ಯ ಸೇವೆ ಒದಗಿಸಲು ಸೂಚನೆ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ತಿಳಿಸಿದರು. ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಅಲ್ಲಿನ ಆರೋಗ್ಯ ಸೇವೆಗಳನ್ನು ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವಿವಿಧ ವಿಭಾಗಗಳನ್ನು ಪರಿಶೀಲನೆ ಮಾಡಲಾಗಿದೆ. ಸರ್ಕಾರದ ಅನುದಾನದಲ್ಲಿ ಯಾವುದೇ ಕಟ್ಟಡಗಳ ಕಾಮಗಾರಿಪೂರ್ಣವಾಗಿ ಲೋಕಾರ್ಪಣೆ ಆದ ಮೇಲೆ ಆ ಕೇಂದ್ರಗಳಲ್ಲಿ ಜನರಿಗೆ ಸೇವೆಗಳು ಲಭ್ಯ ಆಗಬೇಕು. ಸಿಬ್ಬಂದಿ ಕೊರತೆಯಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಸರಿಯಲ್ಲ ಎಂದರು.

ವಾರ್ಡ್‌ಗೆ ಸಿಬ್ಬಂದಿ ಕೊರತೆ

ಜಿಲ್ಲಾಸ್ಪತ್ರೆಯ ಪಿಐಸಿಯು ವಾರ್ಡ್‌ಗೆ ಸರ್ಕಾರ ಅನುದಾನ ನೀಡಿದೆ. ಕಟ್ಟಡ ಸಿದ್ಧವಾಗಿದೆ, ಉಪಕರಣಗಳು ಬಂದಿವೆ. ಸಿಬ್ಬಂದಿ ಕೊರತೆಯ ಕಾರಣ ಇನ್ನು ಕಾರ್ಯಾರಂಭ ಆಗಿಲ್ಲ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕರು ತಿಳಿಸಿದ್ದಾರೆ, ಈ ಬಗ್ಗೆ ಮೇಲಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿ ಸಿಬ್ಬಂದಿ ನೇಮಕಕ್ಕೆ ಕ್ರಮವಹಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನು 7 ದಿನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ಸ್ವಯಂಪ್ರೇರಿತವಾಗಿ ದೂರು ದಾಖಲಿಸುತ್ತೇವೆ ಎಂದು ಹೇಳಿದರು.

ಬಿಜಿಎಸ್ ಶಾಲೆಗೆ ಭೇಟಿ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಕೋಸಂಬೆ ಸೋಮವಾರ ಜಿಲ್ಲೆಯ ವಿವಿಧೆಡೆ ಪ್ರವಾಸ ನಡೆಸಿದರು. ಚಿಕ್ಕಬಳ್ಳಾಪುರ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಭೇಟಿಗೂ ಮುನ್ನ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಚಿಕ್ಕಬಳ್ಳಾಪುರ ತಾಲೂಕಿನ ಮಂಚನಬೆಲೆಯ ಬಿ.ಜಿ.ಎಸ್ ಶಾಲೆಗೆ ಭೇಟಿ ನೀಡಿ, ಮಕ್ಕಳ ಗ್ರಾಮ ಸಭೆ ಉದ್ಘಾಟಿಸಿ ಅಲ್ಲಿ ವಿದ್ಯಾರ್ಥಿಗಳ ಜೊತೆಗೆ ಸಂವಾದ ನಡೆಸಿದರು.

ಜಿಲ್ಲಾ ಕಾರಾಗೃಹಕ್ಕೆ ಭೇಟಿ

ನಂತರ ನಗರ ಹೊರವಲಯದ ಅಣಕನೂರು ಬಳಿಯ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಅಲ್ಲಿನ ಅಡುಗೆ ಕೊಠಡಿ ಶುಚಿತ್ವ, ಆಹಾರದ ಗುಣಮಟ್ಟ, ಹಾಗೂ ಕೊಠಡಿಗಳು ಮತ್ತು ಗ್ರಂಥಾಲಯ ನಿರ್ವಹಣೆ ಯನ್ನು ಪರಿಶೀಲಿಸಿ ಅಲ್ಲಿನ ಜೈಲರ್ ಹಾಗೂ ಪೊಲೀಸ್ ಸಿಬಂದಿಗೆ ಸಲಹೆ ಸೂಚನೆಗಳನ್ನು ನೀಡಿದರು. ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಅವರ ಎನ್ಆರ್‌ಸಿ ಸೇರಿದಂತೆ ವಿವಿಧ ಘಟಕಗಳು ವಾರ್ಡ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ತಂಡದ ಜತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಶ್ರಯ ಯೋಜನೆಗೆ ಮೀಸಲಿಟ್ಟ ಜಾಗದಲ್ಲಿ ಅನಧಿಕೃತ ಕಟ್ಟಡ
ಸಂವಿಧಾನ ರಕ್ಷಣೆ ನಮ್ಮೆಲ್ಲರ ಹೊಣೆ