ಜಿಲ್ಲೆಯಲ್ಲಿ ಶೇ.100ರಷ್ಟು ಗಣತಿ ನಮೂನೆ ವಿತರಣೆ
ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 ಎಸ್ಐಆರ್ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ ಹೆಸರು ಮತದಾರರ ಪಟ್ಟಿಯಲ್ಲಿ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಮಾಹಿತಿ ನೀಡಿದರು.ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ಭಾರತ ಚುನಾವಣಾ ಆಯೋಗದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-ಎಸ್ಐಆರ್ ಪ್ರಕ್ರಿಯೆ ಪ್ರಗತಿ ಕುರಿತು ಮಾತನಾಡಿದರು.
ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಒಟ್ಟು 7,143 ಪ್ರಕರಣಗಳನ್ನು ಗುರುತಿಸಲಾಗಿದ್ದು, ಇದರಲ್ಲಿ 400 ಸಂಗ್ರಹವಾಗದ, 1321 ಶಾಶ್ವತ ವಲಸೆ, 3390 ಮರಣ, 1830 ದ್ವಿಪ್ರತಿ ಹಾಗೂ 202 ಇತರೆ ಪ್ರಕರಣಗಳಿವೆ. ನೆಲಮಂಗಲ ಕ್ಷೇತ್ರದಲ್ಲಿ ಒಟ್ಟು 10,640 ಪ್ರಕರಣಗಳು ಪತ್ತೆಯಾಗಿದ್ದು, 257 ಸಂಗ್ರಹವಾಗದ, 4609 ಶಾಶ್ವತ ವಲಸೆ, 4468 ಮರಣ, 1264 ದ್ವಿಪ್ರತಿ ಮತ್ತು 42 ಇತರೆ ಪ್ರಕರಣಗಳಿವೆ.
ಜಿಲ್ಲೆಯ ಒಟ್ಟು 9,12,913 ಮತದಾರರ ಪೈಕಿ ಇಂದಿನವರೆಗೆ ಬಿಎಲ್ಒಗಳು ಒಟ್ಟು 9,12,913 ಎನುಮೆರೇಷನ್ ನಮೂನೆಗಳನ್ನು ವಿತರಿಸಿದ್ದು, ಈ ಪೈಕಿ 7,49,582 ನಮೂನೆಗಳನ್ನು ಗಣಕೀಕರಿಸಲಾಗಿದೆ. ಜಿಲ್ಲೆಯ 04 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳ ಬೂತ್ ಮಟ್ಟದ ಅಧಿಕಾರಿಗಳು ಜೂನ್ 30 ರಿಂದಲೇ ಎನುಮೆರೇಷನ್ ಫಾರಂ ಗಳೊಂದಿಗೆ ಮತದಾರರ ಮನೆ ಮನೆಗೆ ಭೇಟಿ ನೀಡಲು ಪ್ರಾರಂಭಿಸಿದ್ದಾರೆ. ಈ ಮಾಹಿತಿ ಸಂಗ್ರಹ ಹಾಗೂ ಸಂಗ್ರಹಿಸಿದ ನಮೂನೆಗಳ ಗಣಕೀಕರಣ ಪ್ರಕ್ರಿಯೆಯು ಜೂನ್ 30 ರಿಂದ ಆಗಸ್ಟ್ 08 ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ ಜೂನ್ 16 ರವರೆಗೆ ಒಟ್ಟು 9,12,913 ಮತದಾರರಿದ್ದು, ಬಿಎಲ್ಒಗಳಿಗೆ ಅಗತ್ಯವಿರುವ ಎಲ್ಲಾ ಫಾರಂಗಳನ್ನು ಮುದ್ರಿಸಿ ವಿತರಿಸಲಾಗಿದೆ.ಕ್ಷೇತ್ರವಾರು ವಿವರ:
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಾಸಂತಿ ಅಮರ್, ಪೋಲಿಸ್ ವರಿಷ್ಠಾಧಿಕಾರಿ ಎಂ.ವಿ ಚಂದ್ರಕಾಂತ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಹಾಗೂ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಮಂಜುನಾಥ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
25ಕೆಡಿಬಿಪಿ2ಬೆಂ.ಗ್ರಾ ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಗತಿ ಕುರಿತು ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧಾ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.