ಮತಗಳ್ಳತನ ವಿರುದ್ಧ 70-80 ಲಕ್ಷ ಸಹಿ ಸಂಗ್ರಹ: ಸೊರಕೆ

KannadaprabhaNewsNetwork |  
Published : Nov 09, 2025, 03:15 AM IST
08ಸೊರಕೆ - ಜಿಲ್ಲಾ ಕಾಂಗ್ರೆಸ್ ಸ ಭೆಯಲ್ಲಿ ವಿನಯಕುಮಾರ್ ಸೊರಕೆ ಮಾತನಡಾಿದರು. | Kannada Prabha

ಸಾರಾಂಶ

ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಕರ್ನಾಟಕ, ಮಹಾರಾಷ್ಟ್ರ ನಂತರ ಹರಿಯಾಣದಲ್ಲೂ ಮತಗಳ್ಳತನದ ಆರೋಪ ಕೇಳಿ ಬಂದಿದ್ದು, ಅಂಕಿಅಂಶಗಳೊಂದಿಗೆ ಮತಗಳ್ಳತನ ಹೇಗೆ ನಡೆಯುತ್ತಿದೆ ಎಂದು ವಿವರಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ನೈಜ ಚುನಾವಣೆ ನಡೆಯಬೇಕಾದರೆ ಮತಗಳ್ಳತನ ನಿಲ್ಲಬೇಕು, ಚುನಾವಣೆಗಳು ದೋಷಮುಕ್ತವಾಗಿ ನಡೆಯಬೇಕು ಎಂಬ ಉದ್ದೇಶದಿಂದ ಚುನಾವಣಾ ಆಯೋಗದ ಜೊತೆಗೂಡಿ ಬಿಜೆಪಿ ನಡೆಸಿರುವ ಮತಗಳ್ಳತನ ವಿರುದ್ಧ ಈಗಾಗಲೇ ಕರ್ನಾಟಕದಲ್ಲಿ 70-80 ಲಕ್ಷ ಸಹಿ ಸಂಗ್ರಹಿಸಲಾಗಿದೆ. ಇದನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಿ ಮತಗಳ್ಳನದ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುತ್ತದೆ ಎಂದು ಕೆಪಿಸಿಸಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿದ್ದಾರೆ.

ಅವರು ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಮಾತನಾಡಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಪಕ್ಷ ಬಲಪಡಿಸದೆ ಚುನಾವಣೆ ಗೆಲ್ಲುವುದು ಅಸಾಧ್ಯ. ಕೇಂದ್ರ ಸರ್ಕಾರವು ಮತಗಳ್ಳತನ ನಿಲ್ಲಿಸದಿದ್ದಲ್ಲಿ ಚುನಾವಣೆ ನಡೆಸುವುದು ವ್ಯರ್ಥ ಎಂದರು.ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಕರ್ನಾಟಕ, ಮಹಾರಾಷ್ಟ್ರ ನಂತರ ಹರಿಯಾಣದಲ್ಲೂ ಮತಗಳ್ಳತನದ ಆರೋಪ ಕೇಳಿ ಬಂದಿದ್ದು, ಅಂಕಿಅಂಶಗಳೊಂದಿಗೆ ಮತಗಳ್ಳತನ ಹೇಗೆ ನಡೆಯುತ್ತಿದೆ ಎಂದು ವಿವರಿಸಿದರು. ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.ಈ ಸಂದರ್ಭ ಕರಾವಳಿ ಪ್ರಾಧಿಕಾರ ಅಧ್ಯಕ್ಷರಾಗಿ ಆಯ್ಕೆಯಾದ ಎಂ.ಎ. ಗಪೂರ್, ರಾಜ್ಯ ಕ್ರೈಸ್ತ ಅಭಿವೃದ್ಧಿ ನಿಗಮದ ನಿರ್ದೇಶಕ ಪ್ರಶಾಂತ್ ಜತ್ತನ್ನ ಹಾಗೂ ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತರಾದ ಬಿಪಿನ್‌ಚಂದ್ರ ಪಾಲ್ ನಕ್ರೆ ಅವರನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಭಿನಂದಿಸಲಾಯಿತು.ಪಕ್ಷದ ಪ್ರಮುಖರಾದ ಪ್ರಸಾದ್‌ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಮಲ್ಲಾಡಿ ಶಿವರಾಂ ಶೆಟ್ಟಿ, ವೆರೋನಿಕಾ ಕರ್ನೇಲಿಯೋ, ಕೃಷ್ಣ ಶೆಟ್ಟಿ ಬಜಗೋಳಿ, ಹರೀಶ್ ಕಿಣಿ, ದಿನಕರ ಹೇರೂರು, ನವೀನ್ ಚಂದ್ರ ಶೆಟ್ಟಿ, ಶಬ್ಬೀರ್ ಅಹ್ಮದ್, ದೇವಕಿ ಸಣ್ಣಯ್ಯ, ಶಂಕರ್ ಕುಂದರ್, ರಮೇಶ್ ಕಾಂಚನ್, ಶುಭದ ರಾವ್ ಕಾರ್ಕಳ, ಮಹಾಬಲ ಕುಂದರ್, ಪ್ರಖ್ಯಾತ್ ಶೆಟ್ಟಿ, ಡಾ.ಸುನಿತಾ ಶೆಟ್ಟಿ, ಮಮತಾ ಶೆಟ್ಟಿ, ರೋಶನಿ ಒಲಿವರಾ, ಹರಿಪ್ರಸಾದ್ ರೈ, ಎಂ.ಪಿ. ಇದಿನಬ್ಬ, ಹಬೀಬ್ ಆಲಿ, ಸೌರವ್ ಬಲ್ಲಾಳ್, ಮೀನಾಕ್ಷಿ ಮಾಧವ ಬನ್ನಂಜೆ, ಗೋಪಿ ನಾಯ್ಕ್, ಸುರೇಶ್ ಶೆಟ್ಟಿ ಬನ್ನಂಜೆ ಉಪಸ್ಥಿತರಿದ್ದರು.

ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಅಣ್ಣಯ್ಯ ಸೇರಿಗಾರ್ ಸ್ವಾಗತಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ವಂದಿಸಿದರು. ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ಕಾರ್ಯಕ್ರಮ ನಿರ್ವಹಿಸಿದರು.

PREV

Recommended Stories

ವಂದೇ ಮಾತರಂ ಭಾರತ ಮಾತೆಯ ಪ್ರೇರಣಾ ಶಕ್ತಿ: ಸಂಸದ ಗದ್ದಿಗೌಡರ
10, 11, ರಂದು ರಾಜ್ಯ ಟ್ರ್ಯಾಕ್‌ ಸೈಕ್ಲಿಂಗ್‌ ತಂಡಗಳ ಆಯ್ಕೆ