ಕಸಾಯಿಖಾನೆಗೆ ಸಾಗಿಸುತ್ತಿದ್ದ 70 ಗೋವುಗಳ ರಕ್ಷಣೆ

KannadaprabhaNewsNetwork |  
Published : Feb 04, 2026, 01:15 AM IST
3ಕೆಬಿಪಿಟಿ.2.ಬಂಗಾರಪೇಟೆ ತಾಲೂಕಿನ ರಾಮಲಿಂಗಾಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಲಿತ ಸಮಾಜ ಸೇನೆ ರಾಜ್ಯಾಧ್ಯಕ್ಷ ಸೂಲಿಕುಂಟೆ ಆನಂದ್ ಮಾತನಾಡಿದರು. | Kannada Prabha

ಸಾರಾಂಶ

ಹಸುಗಳನ್ನು ಹೈದರಾಬಾದ್‌ನಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಹಸುಗಳು ತುಂಬಿದ್ದ ಕಂಟೇನರ್‌ನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಪೊಲೀಸರ ವಶಕ್ಕೆ ನೀಡಿದ್ದಾರೆ.

ಕೋಲಾರ:ಕಂಟೇನರ್‌ವೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 70 ಗೋವುಗಳನ್ನು ಹಿಂದೂ ಕಾರ್ಯಕರ್ತರು ರಕ್ಷಣೆ ಮಾಡಿರುವ ಘಟನೆ ಮುಳಬಾಗಿಲಿನಲ್ಲಿ ನಡೆದಿದೆ. ತಾಲೂಕಿನ ಹನುಮನಹಳ್ಳಿ ಟೋಲ್ ಬಳಿ ಕಂಟೇನರ್‌ನಲ್ಲಿ ಸಾಗಿಸುತ್ತಿದ್ದ ಹಸುಗಳನ್ನು ವಶಕ್ಕೆ ಪಡೆದಿದ್ದಾರೆ. ಗೋರಕ್ಷಕ ದಳ ಹಾಗೂ ಭಜರಂಗದಳ ಕಾರ್ಯಕರ್ತರು ಕಂಟೇನರ್‌ನಲ್ಲಿ ಅಮಾನವೀಯವಾಗಿ ತುಂಬಿಕೊಂಡು ಸಾಗಿಸುತ್ತಿದ್ದ ದೇಸೀ ತಳಿಯ ಹಸುಗಳನ್ನು ರಕ್ಷಣೆ ಮಾಡಿದ್ದಾರೆ. ಕೆಲ ಹಸುಗಳು ಆಹಾರ ನೀರು ಇಲ್ಲದೆ ಕಂಟೇನರ್ ನಲ್ಲೇ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಹಸುಗಳನ್ನು ಹೈದರಾಬಾದ್‌ನಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಹಸುಗಳು ತುಂಬಿದ್ದ ಕಂಟೇನರ್‌ನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಪೊಲೀಸರ ವಶಕ್ಕೆ ನೀಡಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯ ವಶಕ್ಕೆ ನೀಡಿದ್ದು, ಗೋವುಗಳನ್ನು ರಕ್ಷಣೆ ಮಾಡುವಂತೆ ಹಿಂದೂ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುನೀತರಾಜಕುಮಾರ ಪುತ್ಥಳಿ ಅನಾವರಣ
ಬೆಂಗಳೂರು ನಗರದಲ್ಲಿ ಮತ್ತೊಂದು ಮೇಲ್ಸೇತುವೆ ನಿರ್ಮಾಣ