ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ₹70 ಕೋಟಿ ಅನುದಾನ

KannadaprabhaNewsNetwork | Published : Mar 24, 2025 12:32 AM

ಸಾರಾಂಶ

ಜಿಲ್ಲಾ ಕ್ರೀಡಾಂಗಣವನ್ನು ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳೊಂದಿಗೆ ಸುಮಾರು 70 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ವಿವಿಧ ಮೂಲಗಳಿಂದ ಸಂಪನ್ಮೂಲ ಕ್ರೋಢೀಕರಣ ಸಾಧ್ಯತೆಗಳತ್ತ ಚಿಂತನೆ ನಡೆಸಲಾಗುತ್ತಿದೆ. ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸುವ ಬಗ್ಗೆ ಚರ್ಚೆ ನಡೆದಿದೆ.

---ಅತ್ಯಾಧುನಿಕ‌ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಕ್ರಮ

--- ಕ್ರೀಡಾಂಗಣ ಅಭಿವೃದ್ಧಿಗೆ ₹70 ಕೋಟಿ ಅನುದಾನ

---ಅಭಿವೃದ್ಧಿಗೆ ಖಾಸಗಿ ಸಹಭಾಗಿತ್ವ ಕುರಿತು ಚಿಂತನೆ

---ಕ್ರೀಡಾ ವಸತಿ ನಿಲಯ ನಿರ್ಮಾಣ ಕಾಮಗಾರಿ ಪೂರ್ಣಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ನಗರದ ಸರ್‌ ಎಂವಿ ಜಿಲ್ಲಾ ಕ್ರೀಡಾಂಗಣವನ್ನು ಸುಮಾರು 70 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ‌ ಕ್ರೀಡಾ ವ್ಯವಸ್ಥೆಗಳೊಂದಿಗೆ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಈಗಾಗಲೇ ನೀಲಿನಕ್ಷೆಯನ್ನೂ ಸಿದ್ದಪಡಿಸಿ ಸಂಪನ್ಮೂಲ ಕ್ರೋಢೀಕರಣದತ್ತ ಚಿಂತನೆ ನಡೆಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು. ಭಾನುವಾರ ಬೆಳಗ್ಗೆ ಜಿಲ್ಲಾ ಕೇಂದ್ರದಲ್ಲಿನ ಸರ್ ಎಂ.ವಿ ಕ್ರೀಡಾಂಗಣಕ್ಕೆ ಯುವಜನ ಸೇವೆ ಮತ್ತು ಯುವ ಸಬಲೀಕರಣ ಇಲಾಖೆ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

₹70 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ

ಜಿಲ್ಲಾ ಕ್ರೀಡಾಂಗಣವನ್ನು ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳೊಂದಿಗೆ ಸುಮಾರು 70 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ವಿವಿಧ ಮೂಲಗಳಿಂದ ಸಂಪನ್ಮೂಲ ಕ್ರೋಢೀಕರಣ ಸಾಧ್ಯತೆಗಳತ್ತ ಚಿಂತನೆ ನಡೆಸಲಾಗುತ್ತಿದೆ. ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಬೇಕೇ ಅಥವಾ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ನಂತಹ ಸಂಸ್ಥೆಗಳಿಗೇ ಜವಾಬ್ದಾರಿ ನೀಡಿ ಅಭಿವೃದ್ಧಿಪಡಿಸಬೇಕೇ, ಇಲ್ಲವೇ ಸರ್ಕಾರಿ ಅನುದಾನದಲ್ಲೇ ಅಭಿವೃದ್ಧಿಪಡಿಸಬೇಕೇ ಎಂಬುದರ ಬಗ್ಗೆ ಎಲ್ಲ ದೃಷ್ಟಿಕೋನಗಳಲ್ಲಿ ಚರ್ಚೆ ನಡೆಸಲಾಗುತ್ತಿದೆ. ಸಿಂಥೆಟಿಕ್ ಟ್ರಾಕ್ ಸೇರಿದಂತೆ ಕ್ರೀಡಾಂಗಣದಲ್ಲಿ ವಿವಿಧ ಸೌಲಭ್ಯಗಳನ್ನು ಒದಗಿಸಿ ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಕ್ರೀಡಾ ವಸತಿ ನಿಲಯ ಪೂರ್ಣ

ಕ್ರೀಡಾಂಗಣ ಹೊಸರೂಪ ನೀಡಿ ಕಾಯಕಲ್ಪ ಮಾಡಬೇಕು. ಕ್ರೀಡಾಂಗಣದಲ್ಲಿ ಕ್ರೀಡೆಗೆ ಅವಶ್ಯವಿರುವ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಯೋಜನೆಗಳ ರೂಪಿಸುವ ನಿಟ್ಟಿನಲ್ಲಿ ಯೋಜನಾ ಪಟ್ಟಿ ರೂಸಿದ್ದು, ಇದನ್ನು ಕಾರ್ಯರೂಪಕ್ಕೆ ತರಲು ಎಲ್ಲಾ ರೀತಿಯಲ್ಲೂ ಪ್ರಯತ್ನಿಸಲಾಗುವುದು ಮತ್ತು ಸದ್ಯದಲ್ಲೇ ಕ್ರೀಡಾ ವಸತಿ ನಿಲಯವನ್ನು ಉದ್ಘಾಟಿಸಲಾಗುವುದು ಎಂದರು.ಈ ಸಂದರ್ಭದಲ್ಲಿ ಯುವಜನ ಸೇವೆ ಮತ್ತು ಯುವ ಸಬಲೀಕರಣ ಇಲಾಖೆ ಆಯುಕ್ತ ಚೇತನ್, ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಅಪರ ಜಿಲ್ಲಾಧಿಕಾರಿ ಡಾ. ಎನ್ ಭಾಸ್ಕರ್, ಉಪವಿಭಾಗಾಧಿಕಾರಿ ಅಶ್ವಿನ್,ತಹಸೀಲ್ದಾರ್ ಅನಿಲ್,ಯುವಜನ ಸೇವೆ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಇದ್ದರು.

Share this article