70 ಮೆವ್ಯಾ ಸಾಮರ್ಥ್ಯದ ಸೌರವಿದ್ಯುತ್‌ ಘಟಕಕ್ಕೆ ಚಾಲನೆ

KannadaprabhaNewsNetwork |  
Published : Jun 12, 2025, 05:06 AM IST
ಸಿಕೆಬಿ-1  ಗೌರಿಬಿದನೂರು ನಗರದ ನೇತಾಜಿ ತಾಲೂಕು ಕ್ರೀಡಾಂಗಣದಲ್ಲಿ ಕುಸುಮ್  ಸೌರೀಕರಣ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ  ನೀಡಿದರು | Kannada Prabha

ಸಾರಾಂಶ

ಮುಂದಿನ ಬಜೆಟ್‌ನಲ್ಲಿ ಗೌರಿಬಿದನೂರಿಗೆ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಅಲಿಪುರ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯ್ತಿಗೆ ಮೇಲ್ದರ್ಜೆಗೆ ಏರಿಸಲಾಗುವುದು. ಅಲ್ಲದೆ ಶಾಸಕ ಪುಟ್ಟಸ್ವಾಮಿಗೌಡ ಮತ್ತು ಶಿವಶಂಕರ ರೆಡ್ಡಿಯವರು ಮುಂದಿಟ್ಟಿರುವ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ/ಗೌರಿಬಿದನೂರು

ರಾಜ್ಯ ಸರ್ಕಾರ ಪ್ರತೀ ವರ್ಷ 19,000 ಕೋಟಿ ರುಪಾಯಿಗಳನ್ನು ಪಂಪ್ ಸೆಟ್ ಸಬ್ಸಿಡಿಗೆ ನೀಡುತ್ತಿದೆ. ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗೌರಿಬಿದನೂರು ನಗರದ ನೇತಾಜಿ ಕ್ರೀಡಾಂಗಣದಲ್ಲಿ ಬುಧವಾರ ಇಂಧನ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಮತ್ತು ಜಿಲ್ಲಾಡಳಿತ ಹಾಗೂ ಡಾ.ಎಚ್.ನರಸಿಂಹಯ್ಯ ಸಾಂಸ್ಕೃತಿಕ ಕೇಂದ್ರ, ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕುಸುಮ್- ಸಿ ಯೋಜನೆಗೆ ಚಾಲನೆಗೆ ನೀಡಿ ಮಾತನಾಡಿದರು.

70 ಮೆವ್ಯಾ ಸೌರವಿದ್ಯುತ್‌ ಉತ್ಪಾದನೆ

ಇಂದು ತಾವು ಉದ್ಘಾಟನೆ ಮಾಡಿರುವ, 70 ಮೆವ್ಯಾ ವಿದ್ಯುತ್ ಉತ್ಪಾದನೆಯ ಸೌರವಿದ್ಯುತ್‌ ಘಟಕದಿಂದ ರೈತರಿಗೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಅನ್ನು 5 ಗಂಟೆಗಳ ಕಾಲ ಒದಗಿಸಲಾಗುತ್ತದೆ. ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿ ಮತ್ತು ಚರಕಮಟ್ಟೇನಹಳ್ಳಿ ಗ್ರಾಮದ ಸುಮಾರು 60 ಎಕರೆ ಪ್ರದೇಶದಲ್ಲಿ 20 ಮೆ.ವ್ಯಾ. ಸಾಮರ್ಥ್ಯದಲ್ಲಿ ಸೋಲಾರ್ ಘಟಕ ಇದಾಗಿದೆ ಎಂದರು.

ವಿದ್ಯುತ್‌ ಉತ್ಪಾದನೆ ಹೆಚ್ಚಳ

ನಾವು ಅಧಿಕಾರಕ್ಕೆ ಬಂದು 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ. ಈಗ ಒಟ್ಟು 30 ಸಾವಿರ ಮೆವ್ಯಾ ಉತ್ಪಾದನೆ ಆಗುತ್ತಿದೆ. ಮುಂದಿನ ಮೂರು ವರ್ಷಗಳಲ್ಲಿ 60 ಸಾವಿರ ಮೆವ್ಯಾ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿದ್ದೇವೆ. ಆ ಮೂಲಕ ರೈತರ ಬಹು ದೊಡ್ಡ ಸಂಕಷ್ಟಕ್ಕೆ ಪರಿಹಾರ ಒದಗಿಸಿಕೊಡುತ್ತಿದ್ದೇವೆ ಎಂದರು. ಗೌರಿಬಿದನೂರಿಗೆ ಬಂಪರ್ಮುಂದಿನ ಬಜೆಟ್‌ನಲ್ಲಿ ಗೌರಿಬಿದನೂರಿಗೆ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಅಲಿಪುರ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯ್ತಿಗೆ ಮೇಲ್ದರ್ಜೆಗೆ ಏರಿಸಲಾಗುವುದು. ಅಲ್ಲದೆ ಶಾಸಕ ಪುಟ್ಟಸ್ವಾಮಿಗೌಡ ಮತ್ತು ಶಿವಶಂಕರ ರೆಡ್ಡಿಯವರು ಮುಂದಿಟ್ಟಿರುವ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಇಂಧನ ಸಚಿವ ಕೆ.ಜೆ.ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್,ಶಾಸಕರಾದ ಕೆ.ಎಚ್.ಪುಟ್ಟಸ್ವಾಮಿಗೌಡ, ಪ್ರದೀಪ್ಈಶ್ವರ್, ಎಸ್.ಎನ್.ಸುಬ್ಬಾರೆಡ್ಡಿ, ಎಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್,ಎಂಎಲ್ ಸಿ ಅನಿಲ್ ಕುಮಾರ್, ಎಚ್ ನರಸಿಂಹಯ್ಯ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಗೌರಿಬಿದನೂರಿನ ಮಾಜಿ ಶಾಸಕ ಶಿವಶಂಕರ್ ರೆಡ್ಡಿ, ಬೆಸ್ಕಾಂ ಎಂ.ಡಿ ಶಿವಶಂಕರ್ , ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ, ಜಿಪಂ ಸಿಇಒ ಪ್ರಕಾಶ್ ಜಿ ಟಿ ನಿಟ್ಟಾಲಿ, ಎಸ್ಪಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ ಎನ್ ಭಾಸ್ಕರ್, ಉಪ ವಿಭಾಗಾಧಿಕಾರಿ ಅಶ್ವಿನ್, ತಹಸೀಲ್ದಾರ್ ಮಹೇಶ್ ಪತ್ರಿ, ಜಿಲ್ಲಾ ಮತ್ತು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!