- ವನ್ಯಜೀವಿಗಳ ಕುರಿತು ಜಾಗೃತಿ ಜಾಥಾಗೆ ನ್ಯಾ. ಮರಿಯಪ್ಪ ಚಾಲನೆ
--
ಕನ್ನಡಪ್ರಭ ವಾರ್ತೆ ಯಾದಗಿರಿ
ನಗರದ ಕೆಎಂಎಂ ಪದವಿಪೂರ್ವ ಕಾಲೇಜು ಹಾಗೂ ಪ್ರಾದೇಶಿಕ ಅರಣ್ಯ ಇಲಾಖೆ ಯಾದಗಿರಿ ಇವರ ಜಂಟಿ ಸಹಯೋಗದಲ್ಲಿ 72ನೇ ವನ್ಯಜೀವಿ ಸಪ್ತಾಹ-2026 ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಆರಂಭವಾಗಿ ಸಾರ್ವಜನಿಕರಲ್ಲಿ ವನ್ಯಜೀವಿಗಳ ಕುರಿತು ಜಾಗೃತಿ ಮೂಡಿಸಲು ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮರಿಯಪ್ಪ ಅವರು ಜಾಥಾಗೆ ಚಾಲನೆ ನೀಡಿದರು.
ಈ ಜಾಥಾವು ಕೆಎಂಎಂ ಪದವಿ ಪೂರ್ವ ಕಾಲೇಜಿನಿಂದ ಪ್ರಾರಂಭವಾಗಿ ನೇತಾಜಿ ಸುಭಾಶ್ಚಂದ್ರ ಭೋಸ್ ವೃತ್ತದ ಮುಖಾಂತರ ಹೊಸ ಬಸ್ ನಿಲ್ದಾಣದವರೆಗೆ ಯಶಸ್ವಿಯಾಗಿ ನಡೆಯಿತು.
ಜಾಥಾದ ನಂತರ ಕೆಎಂಎಂ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ವನ್ಯಜೀವಿ ಸಪ್ತಾಹದ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು.
ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆ ವಿಜೇತರಾದ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಗಣ್ಯರು ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಎ. ಬಿ. ಪಾಟೀಲ್ ವಹಿಸಿ, ವನ್ಯಜೀವಿ ಹಾಗೂ ಅರಣ್ಯ ಸಂರಕ್ಷಣೆಯ ಕುರಿತು ಮಾತನಾಡಿದರು.
ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಚೇತನ್ ಗಸ್ತಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹಮ್ಮದ್ ಅಸದ್, ಪರಿಸರವಾದಿ ಶೈಲೇಂದ್ರ ಕವಡಿ, ಆರ್.ಎಫ್.ಓ. ಬುರಾನುದ್ದೀನ್ ಹಾಗೂ ಡಿ.ಆರ್.ಎಫ್.ಒ ಮಂಜುನಾಥ್, ವೆಂಕಟೇಶ್ ಪೂಸಜಾರಿ, ಕೆಎಂಎಂ ಆಡಳಿತ ಅಧಿಕಾರಿ, ರವಿಕಾಂತ್ ಕಸಿಬಿ, ಪ್ರಾಂಶುಪಾಲ ಮಲ್ಲಿಕಾರ್ಜುನ್ ಮುಂಡರಗಿ ಅವರು ವನ್ಯಜೀವಿಗಳು ಮತ್ತು ಪರಿಸರ ಸಂರಕ್ಷಣೆಯ ಅಗತ್ಯತೆಯ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಈ ಕಾರ್ಯಕ್ರಮದಲ್ಲಿ ಉಪ ವಲಯ ಅರಣ್ಯಾಧಿಕಾರಿ ಕಾಶಪ್ಪ, ವನಪಾಲಕರಾದ ಲಿಂಗರಾಜ ಗಸ್ತಿ, ಸಿದ್ದಣ್ಣ ಗಸ್ತಿ, ದೇವರಾಜ ಗಸ್ತಿ, ಚನ್ನಪ್ಪ ಗಸ್ತಿ, ಶ್ರವಣಕುಮಾರ ಗಸ್ತಿ ಹಾಗೂ ಅರಣ್ಯ ವೀಕ್ಷಕರಾದ ಶಿಲ್ಪಾ, ಪ್ರಿಯಾಂಕ ವಡಗೇರಿ ಮತ್ತು ಉಪನ್ಯಾಸಕರು ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
-
6ವೈಡಿಆರ್1
ಯಾದಗಿರಿ ನಗರದ ಕೆಎಂಎಂ ಪದವಿಪೂರ್ವ ಕಾಲೇಜು ಹಾಗೂ ಪ್ರಾದೇಶಿಕ ಅರಣ್ಯ ಇಲಾಖೆ ಯಾದಗಿರಿ ಅವರ ಜಂಟಿ ಸಹಯೋಗದಲ್ಲಿ 72ನೇ ವನ್ಯಜೀವಿ ಸಪ್ತಾಹ-2026 ಕಾರ್ಯಕ್ರಮ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮರಿಯಪ್ಪ ಅವರು ಜಾಥಾಗೆ ಚಾಲನೆ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.