ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ 76ನೇ ಸಂವಿಧಾನ ಸಮರ್ಪಣೆ ದಿನವನ್ನು ಆಚರಿಸಲಾಯಿತು.ಪೊಲೀಸ್ ಇನ್ಸ್‌ಪೆಕ್ಟರ್ ಆನಂದ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ದೇಶದ ಪ್ರತಿಯೊಬ್ಬ ಪ್ರಜೆಗೆ ಸಂವಿಧಾನ ದಾರಿದೀಪ. ಕಾನೂನು, ನ್ಯಾಯ, ನೀತಿ, ಸಮಾನತೆ, ಸಹಬಾಳ್ವೆ ತತ್ವಗಳ ತಳಹದಿ ಮೇಲೆ ನಿಂತಿದ್ದು, ಎಲ್ಲರೂ ಸಂವಿಧಾನವನ್ನು ಗೌರವಿಸಿ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಬೇಕು ಎಂದರು.
ದೇಶದಲ್ಲಿಯೇ ಸಂವಿಧಾನವನ್ನು ಪವಿತ್ರ ಗ್ರಂಥ ಎಂದು ಗೌರವಿಸಲಾಗುತ್ತದೆ. ಸಂವಿಧಾನ ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಅದ್ಭುತ ಕೊಡುಗೆ. ಅದನ್ನು ನಾವೆಲ್ಲರೂ ಗೌರವದಿಂದ ಕಾಣಬೇಕು ಎಂದರು.ದಲಿತ ಮುಖಂಡ ಮಣಿಗೆರೆ ಕೆ.ಕಬ್ಬಾಳಯ್ಯ ಮಾತನಾಡಿ, ಭಾರತವನ್ನು ಸಾರ್ವಭೌಮ, ಜಾತ್ಯಾತೀತ ಸಮಾಜವಾದಿ ಮತ್ತು ಪ್ರಜಾಸತ್ತಾತ್ಮಕ ಗಣತಂತ್ರ ದೇಶ ಎಂದು ಸಂವಿಧಾನದಲ್ಲಿ ಘೋಷಿಸಲಾಗಿದೆ. ಇಲ್ಲಿನ ಪ್ರತಿಯೊಬ್ಬ ಪ್ರಜೆಗೂ ಸಮಾನತೆ ನ್ಯಾಯ ಒದಗಿಸಲಾಗಿದೆ. ಭಾರತ ಸಂವಿಧಾನವನ್ನು ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ ಎಂದರು.
ಈ ವೇಳೆ ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ಕರಡಕೆರೆ ಯೋಗೇಶ್, ದಲಿತ ಮುಖಂಡರಾದ ಮುಡೀನಹಳ್ಳಿ ತಿಮ್ಮಯ್ಯ, ಚಿಕ್ಕರಸಿನಕೆರೆ ಮೂರ್ತಿ, ಗುಡಿಗೆರೆ ಬಸವರಾಜು, ಶಿವಣ್ಣ, ರುದ್ರಯ್ಯ, ಮರಿಸ್ವಾಮಿ, ಪ್ರಸಾದ್ ಸೇರಿದಂತೆ ಹಲವರಿದ್ದರು.ಪತ್ರಕರ್ತರ ಸಂಘದಲ್ಲಿ ಧ್ವಜಾರೋಹಣ
ನಾಗಮಂಗಲ:ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಆಯೋಜಿಸಿದ್ದ 76 ನೇ ಗಣರಾಜ್ಯೋತ್ಸವದಲ್ಲಿ ಸಂಘದ ಅಧ್ಯಕ್ಷ ಕರಡಹಳ್ಳಿ ಸೀತಾರಾಮು ಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಹಾತ್ಮಗಾಂಧೀಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಈ ವೇಳೆ ಸಂಘದ ರಾಜ್ಯ ಸಮಿತಿ ಸದಸ್ಯ ಸಿ.ಎನ್.ಮಂಜುನಾಥ್, ತಾಲೂಕು ಸಂಘದ ಉಪಾಧ್ಯಕ್ಷ ಚನ್ನಕೇಶವ, ಸಹ ಕಾರ್ಯದರ್ಶಿ ಯು.ವಿ.ಉಲ್ಲಾಸ್, ಖಜಾಂಚಿ ಎನ್.ಮಹೇಶ್, ಸದಸ್ಯರಾದ ಎನ್.ಡಿ.ವಸಂತಕುಮಾರ್, ಬಿ.ಆರ್.ಕುಮಾರ್, ಶ್ರೀನಿವಾಸ್, ನಾರಾಯಣಸ್ವಾಮಿ, ಡಿ.ಆರ್.ಜಗದೀಶ್, ತರುಣ್‌ಕುಮಾರ್, ಯೋಗೇಶ್ ಇದ್ದರು.