ಕನ್ನಡಪ್ರಭ ವಾರ್ತೆ ಬೆಂಗಳೂರು
ನಗರ ವಿವಿ:
ಡಾ.ಮನ್‌ಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕೇಂದ್ರ ಕಾಲೇಜು ಆವರಣದಲ್ಲಿ ಗಣರಾಜ್ಯೋತ್ಸವವನ್ನು ‘ಸೌಹಾರ್ದತೆ ಮತ್ತು ಮಾನವೀಯತೆ ಭಾರತೀಯ ಗುರುತಿನ ರಕ್ಷಣೆಗೆ ಅತ್ಯವಶ್ಯಕ’ ಎಂಬ ವಿಷಯದೊಂದಿಗೆ ಆಚರಿಸಲಾಯಿತು. ಮುಖ್ಯ ಅತಿಥಿಗಳಾದ ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎಸ್.ಎ.ಅಹಮದ್ ಮಾತನಾಡಿ, ಶಿಕ್ಷಣದ ಮಟ್ಟ ಹೆಚ್ಚಾಗುತ್ತಿದ್ದರೂ ಮಾನವೀಯ ಮೌಲ್ಯಗಳಲ್ಲಿ ಕುಸಿತ ಕಂಡುಬರುತ್ತಿರುವುದು ಆತಂಕಕಾರಿ ವಿಷಯವೆಂದು ತಿಳಿಸಿದರು.ಬೆಂಗಳೂರು ವಿವಿ:
ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಡಾ.ಅಂಬೇಡ್ಕರ್ ಅವರು ರೂಪಿಸಿದ ಭಾರತೀಯ ಸಂವಿಧಾನ ನ್ಯಾಯ,ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಿಂದ ಕೂಡಿದ್ದು ಸರ್ವಕಾಲಕ್ಕೂ ಜೀವಂತವಾಗಿರಲಿದೆ ಎಂದರು. ಕುಲಸಚಿವರು ಮೌಲ್ಯಮಾಪನ ಪ್ರೊ.ಸಿ.ಎಸ್.ಕರಿಗಾರ್, ವಿತ್ತಾಧಿಕಾರಿಗಳು ಡಾ.ಸುನೀತಾ ಸೇರಿ ಇತರರಿದ್ದರು.
ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಆಶುತೋಷ್‌ಕುಮಾರ್ ಸಿಂಗ್ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರೈಲ್ವೆ ರಕ್ಷಣಾ ಪಡೆ, ವಿದ್ಯಾರ್ಥಿಗಳು ಮತ್ತು ಸ್ಕೌಟ್ಸ್ ಗೈಡ್ಸ್‌ನ ತುಕಡಿಗಳನ್ನು ಒಳಗೊಂಡ ಪರೇಡ್ ವೀಕ್ಷಿಸಿದರು. 2025 ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ, ನೈಋತ್ಯ ರೈಲ್ವೆಯ ಒಟ್ಟು ಆದಾಯ ₹6,939 ಕೋಟಿ ಗಳಾಗಿದ್ದು ಇದು ಕಳೆದ ವರ್ಷಕ್ಕಿಂತ 16% ಹೆಚ್ಚಾಗಿದೆ. ಪ್ರಯಾಣಿಕರ ಆದಾಯ ₹2,543 ಕೋಟಿ ಹಾಗೂ ಸರಕು ಸಾಗಣೆ ಆದಾಯವು ₹3,976 ಕೋಟಿಗಳಾಗಿದೆ ಎಂದು ಅವರು ಹೇಳಿದರು.
ಇಲ್ಲಿನ ಅರಮನೆ ರಸ್ತೆಯ ಭಾರತ್ ಸ್ಕೌಟ್ಸ್ ಗೈಡ್ಸ್ ನಲ್ಲಿ ಗಣರಾಜ್ಯೋತ್ಸವ ಸಂಭ್ರಮದಿಂದ ನಡೆಯಿತು. ರಾಜ್ಯ ಸ್ಕೌಟ್ಸ್ ಗೈಡ್ಸ್ ಉಪಾಧ್ಯಕ್ಷ ಕೊಂಡಜ್ಜಿ ಬ. ಷಣ್ಮುಕಪ್ಪ ಧ್ವಜಾರೋಹಣ ನೆರವೇರಿಸಿದರು. ಗೈಡ್ಸ್ ರಾಜ್ಯ ಆಯುಕ್ತೆ ಗೀತಾ ನಟರಾಜ್ ಪಾಲ್ಗೊಂಡಿದ್ದರು. ಸ್ಕೌಟ್ಸ್ ಗೈಡ್ಸ್ ಸ್ವಯಂ ಸೇವಕರು ಹಾಜರಿದ್ದರು.
ಜಿಕೆವಿಕೆ ಆವರಣದಲ್ಲಿ 77ನೇ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಕುಲಪತಿ ಡಾ.ಎಸ್.ವಿ.ಸುರೇಶ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೇಜರ್ ಎಂ.ರಘು ರಾಮ ರೆಡ್ಡಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿಶ್ವವಿದ್ಯಾನಿಲಯದ ಎಲ್ಲಾ ವ್ಯವಸ್ಥಾಪನ ಮಂಡಳಿ ಸದಸ್ಯರು, ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಇದ್ದರು.