7ನೇ ಹೊಸಕೋಟೆ ಸಂತ ಸೆಬಾಸ್ಟೀನ್ ರೋಮನ್ ಕ್ಯಾಥೋಲಿಕ್ ದೇವಾಲಯ ಲೋಕಾರ್ಪಣೆ ಸಮಾರೋಪ

KannadaprabhaNewsNetwork |  
Published : May 02, 2024, 12:20 AM IST
ಚಿತ್ರ.1: ದೇವಾಲಯದ ಜೀಣೋದ್ಧಾರ ಹಾಗೂ ಅಭಿವೃದ್ಧಿಗೆ ಶ್ರಮಿಸಿದ ಧರ್ಮಗುರುಗಳಾದ ರೇ.ಫಾ.ಸೆಬಾಸ್ಟೀನ್ ಪೂವತ್ತಿಗಲ್. 2: ದೇವಾಲಯದ ಜೀಣೋದ್ಧಾರ ಹಾಗೂ ಅಭಿವೃದ್ಧಿಗೆ ಶ್ರಮಿಸಿದ ದಾನಿಗಳಿಗೆ ಸನ್ಮಾನಿಸಿದರು. | Kannada Prabha

ಸಾರಾಂಶ

ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಂತ ಸೆಬಾಸ್ಟೀನ್ ರೋಮನ್ ಕ್ಯಾಥೋಲಿಕ್ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಲೋಕಾರ್ಪಣೆ ಸಮಾರೋಪ ಸಮಾರಂಭವನ್ನು ಮಂಗಳವಾರ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ದೇವಾಲಯವನ್ನು ಅಂದವಾಗಿ ನಿರ್ಮಿಸಿದರೆ ಸಾಲದು, ಅಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಲ್ಲಿ ಮಾತ್ರ ದೇವಾಲಯದ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹೇಳಿದ್ದಾರೆ.

7ನೇ ಹೊಸಕೋಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಂತ ಸೆಬಾಸ್ಟೀನ್ ರೋಮನ್ ಕ್ಯಾಥೋಲಿಕ್ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಲೋಕಾರ್ಪಣೆ ಸಮಾರೋಪ ಸಮಾರಂಭವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

ಧರ್ಮಗುರುಗಳಾದ ಸೆಬಾಸ್ಟೀನ್ ಪೂವತ್ತಿಗಲ್ ಮತ್ತು ತಂಡದವರು ಸರಳ ದೇಣಿಗೆಯನ್ನು ಸಾರ್ವಜನಿಕರಿಂದ ಸಂಗ್ರಹಿಸುವದರೊಂದಿಗೆ ಅತ್ಯಂತ ಭವ್ಯ ದೇವಾಲಯ ನಿರ್ಮಿಸಿದ್ದಾರೆ. ಭಾನುವಾರ ಮತ್ತು ಇತರೆ ದಿನಗಳಲ್ಲಿ ನಡೆಯುವ ಪೂಜಾ ವಿಧಿವಿಧಾನಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರಾರ್ಥನೆ ಹಾಗೂ ದೇವಾಲಯದ ಕಾರ್ಯಚಟುವಟಿಕೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವುದರಿಂದ ಮಾತ್ರ ದೇವಾಲಯಗಳು ಪಾವಿತ್ರ್ಯತೆ ಉಳಿಯಲು ಹಾಗೂ ಕ್ಷೇತ್ರ ಅಭಿವೃದ್ಧಿ ಹೊಂದಲು ಸಾಧ್ಯವೆಂದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಧರ್ಮಾಕ್ಷೇತ್ರ ಧರ್ಮಾಧ್ಯಕ್ಷ ಮಾರ್‌ಲಾರೆನ್ಸ್ ಮುಕುಜಿ ವಹಿಸಿದ್ದರು.

ಸಮಾರೋಪ ಸಮಾರಂಭದ ವೇದಿಕೆಯಲ್ಲಿ ಅತಿಥಿಗಳಾಗಿ ಬೆಳ್ತಂಗಡಿ ಧರ್ಮಕ್ಷೇತ್ರದ ಜೋಸೆಫ್ ವಲಿಯಪರಂಬಿಲ್, ಸಿದ್ದಾಪುರ ಸಂತ ಮೇರಿ ಚರ್ಚಿನ ವಲಯ ಧರ್ಮಗುರು ಜೋಜಿ ವಡಕ್ಕಿವೀಟಿ, ಮೈಸೂರಿನ ಸೆಂಟ್ ಪೌಲಸ್ ಪ್ರಾಂತ್ಯದ ಧರ್ಮಗುರು ಆಗಸ್ಟೀನ್ ಪಾಯಂಪಳ್ಳಿ, 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಇ.ಬಿ.ಜೋಸೆಫ್, ದೇವಾಲಯದ ಧರ್ಮಗುರು ಸೆಬಾಸ್ಟೀನ್ ಪೂವತ್ತಿಗಲ್, ಡಾ. ತ್ರೇಸಾ ಪಾಲಕ್ಕಾಡ್, ಕುಶಾಲನಗರ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ವಿ.ಎಸ್.ಶಾಜಿ ಇದ್ದರು.

ದೇವಾಲಯದ ಜೀಣೋದ್ಧಾರ ಹಾಗೂ ಅಭಿವೃದ್ಧಿಗೆ ಸಹಕರಿಸಿದ 20 ಮಂದಿಯನ್ನು ಗೌರವಿಸಲಾಯಿತು.

ಇ.ಬಿ.ಜೋಸೆಫ್ ಸ್ವಾಗತಿಸಿದರು. ಜೋಶ್‌ಲಿ ಹಾಗೂ ರಿನ್ಸಿಲಿ ಪ್ರಾನ್ಸಿಸ್ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ