ಶ್ರೀ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನದ 7ನೇ ವರ್ಷದ ವಾರ್ಷಿಕೋತ್ಸವ

KannadaprabhaNewsNetwork |  
Published : Nov 09, 2024, 01:07 AM IST
ಯಕ್ಷಗಾನ | Kannada Prabha

ಸಾರಾಂಶ

ಶ್ರೀ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನವು 100ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ತೆಂಕುತಿಟ್ಟು ಯಕ್ಷಗಾನ ತರಬೇತಿಯನ್ನು ಯಕ್ಷಗುರು ರಾಕೇಶ್ ರೈ ಅಡ್ಕ ಇವರ ಮೂಲಕ ಉಚಿತವಾಗಿ ನೀಡುತ್ತಿದೆ. ಪ್ರತಿಷ್ಠಾನದ ಈ ಸತ್ಕಾರ್ಯಕ್ಕೆ ಸೋದೆ ಶ್ರೀಗಳ ಮಠದಲ್ಲಿ ಸ್ಥಳಾವಕಾಶವನ್ನು ಕಲ್ಪಿಸಿಕೊಟ್ಟು ಈ ಕಾರ್ಯವನ್ನು ಪೋಷಿಸುತ್ತಾ ಬಹುವಾಗಿ ಅನುಗ್ರಹಿಸುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿಯ ಶ್ರೀ ಸೋದೆ ವಾದಿರಾಜ ಮಠದ ಆಶ್ರಯದಲ್ಲಿ ಶ್ರೀ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ತೆಂಕುತಿಟ್ಟು ಯಕ್ಷಗಾನ ಅಧ್ಯಯನ ಕೇಂದ್ರದ 7ನೇ ವರ್ಷದ ವಾರ್ಷಿಕೋತ್ಸವವು ಉಡುಪಿ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನ.10ರಂದು ಮಧ್ಯಾಹ್ನ 3.30ರಿಂದ ನಡೆಯಲಿದೆ.ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಆದಾಯ ತೆರಿಗೆ ಅಧಿಕಾರಿ ಹಾಗೂ ಹವ್ಯಾಸಿ ಭಾಗವತ, ವೇದಮೂರ್ತಿ ಪಿ. ವೆಂಕಟರಮಣ ಐತಾಳ್ ಹಾಗೂ ಯಕ್ಷಧ್ರುವ ಯಕ್ಷಶಿಕ್ಷಣದ ಪ್ರಧಾನ ಸಂಚಾಲಕ ಹಾಗೂ ವಿದ್ಯಾಗಮ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಪಣಂಬೂರು ವಾಸುದೇವ ಐತಾಳ ಇವರು ಪಾಲ್ಗೊಳ್ಳಲಿದ್ದಾರೆ. ಯಕ್ಷಗುರು ರಾಕೇಶ್ ರೈ ಅಡ್ಕ ಮತ್ತು ಪ್ರತಿಷ್ಠಾನದ ಸಂಯೋಜಕರಾದ ಗೋಪಿಕಾ ಮಯ್ಯ ಉಪಸ್ಥಿತರಿರುವರು.

ನಂತರ ರಾಕೇಶ್ ರೈ ಅಡ್ಕ ಇವರ ಶಿಷ್ಯಂದಿರಿಂದ ‘ತ್ರಿಜನ್ಮ ಮೋಕ್ಷ’ ಎಂಬ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನ ನಡೆಯಲಿದೆ.ಶ್ರೀ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನವು 100ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ತೆಂಕುತಿಟ್ಟು ಯಕ್ಷಗಾನ ತರಬೇತಿಯನ್ನು ಯಕ್ಷಗುರು ರಾಕೇಶ್ ರೈ ಅಡ್ಕ ಇವರ ಮೂಲಕ ಉಚಿತವಾಗಿ ನೀಡುತ್ತಿದೆ. ಪ್ರತಿಷ್ಠಾನದ ಈ ಸತ್ಕಾರ್ಯಕ್ಕೆ ಸೋದೆ ಶ್ರೀಗಳ ಮಠದಲ್ಲಿ ಸ್ಥಳಾವಕಾಶವನ್ನು ಕಲ್ಪಿಸಿಕೊಟ್ಟು ಈ ಕಾರ್ಯವನ್ನು ಪೋಷಿಸುತ್ತಾ ಬಹುವಾಗಿ ಅನುಗ್ರಹಿಸುತ್ತಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲು ಸಾಲು ರಜೆ, ಪ್ರವಾಸಿ ತಾಣ ರಷ್‌
ಭೂಮಿ ಮಾರಿದ ಇನ್ಫಿ ಬಗ್ಗೆ ಕಾರ್ತಿ ತೀವ್ರ ಆಕ್ರೋಶ