ದ.ಕ. ಹಾಲು ಉತ್ಪಾದಕರ ಒಕ್ಕೂಟ 8.28 ಕೋಟಿ ರು. ನಿವ್ವಳ ಲಾಭ

KannadaprabhaNewsNetwork |  
Published : Sep 19, 2024, 01:55 AM IST
ದ.ಕ. ಸಹಕಾರಿ ಹಾಲು ಒಕ್ಕೂಟ ಅಧ್ಯಕ್ಷ ಸುಚರಿತ ಶೆಟ್ಟಿ ಮಾತನಾಡುತ್ತಿರುವುದು | Kannada Prabha

ಸಾರಾಂಶ

ಅತ್ಯುತ್ತಮ ಸಾಧನೆ ಮಾಡಿದ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ೨೦೨೩-೨೪ನೇ ಸಾಲಿನಲ್ಲಿ ಒಟ್ಟು ೧,೧೦೮.೮೯ ಕೋಟಿ ರು. ವಹಿವಾಟು ನಡೆಸಿದೆ. ಕಳೆದ ಸಾಲಿಗೆ ಹೋಲಿಕೆ ಮಾಡಿದಾಗ ಶೇ. ೬.೧೩ರಷ್ಟು ಪ್ರಗತಿ ಸಾಧಿಸಿದೆ. ವರದಿ ಸಾಲಿನಲ್ಲಿ ೮.೨೮ ಕೋಟಿ ರು. ನಿವ್ವಳ ಲಾಭ ಗಳಿಸಿದ್ದು, ಶೇ.೨೫ ರಷ್ಟು ಬೋನಸ್‌ನ್ನು ಸಂಘಗಳು ಒಕ್ಕೂಟಕ್ಕೆ ವರ್ಷದಲ್ಲಿ ನೀಡಿದ ಹಾಲಿನ ಪ್ರಮಾಣಕ್ಕೆ ಅನುಗುಣವಾಗಿ ನೀಡಲು ಮತ್ತು ಶೇ. ೧೨ ರಂತೆ ಡಿವಿಡೆಂಡ್ ನೀಡಲು ವಾರ್ಷಿಕ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಿದೆ.

2023-೨೪ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಕುಲಶೇಖರ ಕೊರ್ಡೆಲ್ ಹಾಲ್‌ನಲ್ಲಿ ಬುಧವಾರ ನಡೆಯಿತು.

ಅತ್ಯುತ್ತಮ ಸಾಧನೆ ಮಾಡಿದ ಈ ಕೆಳಗಿನ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.ಒಕ್ಕೂಟದ ಅತ್ಯುತ್ತಮ ಸಂಘ-ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಹಾಲು ಉತ್ಪಾದಕರ ಸಹಕಾರ ಸಂಘ. ಜಿಲ್ಲಾವಾರು ಉತ್ತಮ ಸಂಘ- ದ.ಕ. ಜಿಲ್ಲೆಯ ಕಡಂದಲೆ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಉಡುಪಿ ಜಿಲ್ಲೆಯ ಹಾಳೆಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘ.ಒಕ್ಕೂಟದ ಉತ್ತಮ ಮಹಿಳಾ ಸಂಘ- ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಮತ್ತು ಉಡುಪಿ ಜಿಲ್ಲೆಯ ಆರೂರು ಮಹಿಳಾ ಸಹಕಾರ ಸಂಘ.ಜಿಲ್ಲಾವಾರು ಉತ್ತಮ ಬಿಎಂಸಿ - ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಹಿರೇಬಂಡಾಡಿ ಮತ್ತು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೇಕೋಡು ಹಾಲು ಉತ್ಪಾದಕರ ಸಹಕಾರ ಸಂಘ. ತಾಲೂಕುವಾರು ಉತ್ತಮ ಸಂಘಗಳು: ಮಂಗಳೂರು ತಾಲೂಕಿನ ಅತಿಕಾರಿ ಬೆಟ್ಟು ಮತ್ತು ಇರುವೈಲು, ಬಂಟ್ವಾಳ ತಾಲೂಕಿನ ವಗ್ಗ ಮತ್ತು ಇಡ್ಕಿದು, ಪುತ್ತೂರು ತಾಲೂಕಿನ ಪಾಣಾಜೆ ಮತ್ತು ಮುಂಡೂರು, ಬೆಳ್ತಂಗಡಿ ತಾಲೂಕಿನ ಗುಂಡೂರಿ ಮತ್ತು ಪಡಂಗಡಿ, ಸುಳ್ಯ ತಾಲೂಕಿನ ಎಡಮಂಗಲ ಮತ್ತು ಯೇನೆಕಲ್ಲು, ಉಡುಪಿ ತಾಲೂಕಿನ ತೆಂಕ ಎರ್ಮಾಳು ಮತ್ತು ಇನ್ನಂಜೆ, ಕುಂದಾಪುರ ತಾಲೂಕಿನ ಸಿದ್ದಾಪುರ ಮತ್ತು ಹಾಲಾಡಿ, ಕಾರ್ಕಳ ತಾಲೂಕಿನ ಕಾಂತಾವರ ಮತ್ತು ಶಿವಪುರ ಸಂಘಗಳು.ಒಕ್ಕೂಟದ ಉತ್ತಮ ಹೈನುಗಾರರು: ಕುಂದಾಪುರ ತಾಲೂಕಿನ ಮೇಕೋಡು ಹಾಲು ಉತ್ಪಾದಕರ ಸಂಘದ ಪ್ರಕಾಶ್ಚಂದ್ರ ಶೆಟ್ಟಿ, ಮಂಗಳೂರು ತಾಲೂಕಿನ ಪಡುಮರ್ನಾಡು ಹಾಲು ಉತ್ಪಾದಕರ ಸಂಘದ ಲಿಮಲ ಲಿನೆಟ್ ಗೋನ್ಸಾಲ್ವಿಸ್‌ ಹಾಗೂ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಹಾಲು ಉತ್ಪಾದಕರ ಸಹಕಾರ ಸಂಘದ ಸರಿತಾ ಐಡಾ ಫರ್ನಾಂಡಿಸ್. ಸಭೆಯಲ್ಲಿ ಉಪಾಧ್ಯಕ್ಷ ಎಸ್.ಬಿ. ಜಯರಾಮ ರೈ, ನಿರ್ದೇಶಕರಾದ ರವಿರಾಜ ಹೆಗ್ಡೆ, ಕಾಪು ದಿವಾಕರ ಶೆಟ್ಟಿ, ಪ್ರಕಾಶ್ಚಂದ್ರ ಶೆಟ್ಟಿ, ಪದ್ಮನಾಭ ಶೆಟ್ಟಿ ಅರ್ಕಜೆ, ನಾರಾಯಣ ಪ್ರಕಾಶ್, ನರಸಿಂಹ ಕಾಮತ್, ಬಿ. ಸುಧಾಕರ ರೈ, ಎಂ. ಸುಧಾಕರ ಶೆಟ್ಟಿ, ಸುಭದ್ರಾ ರಾವ್, ಸವಿತ ಎನ್. ಶೆಟ್ಟಿ , ಸ್ಮಿತಾ ಆರ್. ಶೆಟ್ಟಿ, ಬೋಳ ಸದಾಶಿವ ಶೆಟ್ಟಿ, ಕಮಲಾಕ್ಷ ಹೆಬ್ಬಾರ್, ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್,ಪಶು ಸಂಗೋಪನಾ ಉಪ ನಿರ್ದೇಶಕ ಡಾ. ಅರುಣ್‌ ಕುಮಾರ್ ಶೆಟ್ಟಿ, ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ವಿವೇಕ ಡಿ. ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು