ಮಂಗಳೂರಿನಲ್ಲಿ ಡೆಂಘಿಗೆ 8 ತಿಂಗಳ ಗರ್ಭಿಣಿ ಬಲಿ!

KannadaprabhaNewsNetwork |  
Published : Oct 12, 2026, 02:45 AM IST
ಗಂಗಾವತಿ ತಾಲೂಕಿನ ಹೇಮಗುಡ್ಡದಲ್ಲಿ ದಸರಾ ಉತ್ಸವದ ಅಂಗವಾಗಿ ದುರ್ಗಾಪರಮೇಶ್ವರಿ ದೇವಿಗೆ ವಿಶೇಷ | Kannada Prabha

ಸಾರಾಂಶ

ಡೆಂಘಿ ಶಂಕೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಎಂಟು ತಿಂಗಳ ಗರ್ಭಿಣಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು: ಡೆಂಘಿ ಶಂಕೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಎಂಟು ತಿಂಗಳ ಗರ್ಭಿಣಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮೃತರನ್ನು ಕದ್ರಿಕಂಬಳ ನಿವಾಸಿ ಪೂಜಾ (18) ಎಂದು ಗುರುತಿಸಲಾಗಿದೆ. ಮೂಲತಃ ಸಜಿಪದವರಾದ ಪೂಜಾ ಅವರು ಎಂಟು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.ಸುಮಾರು ಹತ್ತು ದಿನಗಳ ಹಿಂದೆ ಶಂಕಿತ ಡೆಂಘಿ ಜ್ವರದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಘಟನೆಯಿಂದ ಕುಟುಂಬಸ್ಥರು ತೀವ್ರ ದುಃಖಕ್ಕೀಡಾಗಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಿಲಾಗ್ರಿಸ್ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ
ಸಿಎಂ ಮಂಗಳೂರು, ಉಡುಪಿ ಪ್ರವಾಸ ರದ್ದು