ಆರ್‌ಎಲ್‌ಜೆಐಟಿಯಲ್ಲಿ 80 ಅಡಿ ರಾಷ್ಟ್ರಧ್ವಜ ಮೆರವಣಿಗೆ

KannadaprabhaNewsNetwork |  
Published : Aug 16, 2026, 02:30 AM IST
ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯ ದಿನದ ಅಂಗವಾಗಿ 80 ಅಡಿ ಉದ್ದದ ರಾಷ್ಟ್ರಧ್ವಜವನ್ನು ಪ್ರದರ್ಶಿಸಲಾಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಭಾರತ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 80 ಅಡಿ ಬೃಹತ್‌ ರಾಷ್ಟ್ರಧ್ವಜವನ್ನು ಮೆರವಣಿಗೆ ನಡೆಸುವ ಮೂಲಕ ಗೌರವ ಸಲ್ಲಿಸಲಾಯಿತು

ದೊಡ್ಡಬಳ್ಳಾಪುರ: ಭಾರತ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 80 ಅಡಿ ಬೃಹತ್‌ ರಾಷ್ಟ್ರಧ್ವಜವನ್ನು ಮೆರವಣಿಗೆ ನಡೆಸುವ ಮೂಲಕ ಗೌರವ ಸಲ್ಲಿಸಲಾಯಿತು.

ಆರ್‌ಎಲ್‌ಜೆಐಟಿ ಆಡಳಿತ ವಿಭಾಗದ ಮುಂಭಾಗದಿಂದ ಎಸ್‌ಡಿಯುಐಆರ್‌ಎಸ್‌ ಮೈದಾನದವರೆಗೆ ನಡೆದ ಧ್ವಜ ಉತ್ಸವದಲ್ಲಿ ಎಂಜಿನಿಯರಿಂಗ್‌ ಮತ್ತು ಪಾಲಿಟೆಕ್ನಿಕ್‌ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಪಾಲ್ಗೊಂಡರು.

ಬಳಿಕ, ಅಂತಾರಾಷ್ಟ್ರೀಯ ವಸತಿ ಶಾಲೆ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಪೆರೇಡ್‌ನಲ್ಲಿ ಶ್ರೀ ದೇವರಾಜ್‌ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ಧ್ವಜಾರೋಹಣ ನೆರವೇರಿಸಿದರು.

ಅವರು ಮಾತನಾಡಿ, ದೇಶದಲ್ಲಿ ಜಾತಿ, ಮತ, ಧರ್ಮಗಳ ಸಂಕೋಲೆಯನ್ನು ಮೆಟ್ಟಿನಿಂತು ಭಾರತೀಯ ಸಂವೇದನೆಯನ್ನು ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು. ಆಗ ಮಾತ್ರ ಹಿರಿಯರು ತ್ಯಾಗ-ಬಲಿದಾನಗಳಿಂದ ಗಳಿಸಿಕೊಟ್ಟ ಸ್ವಾತಂತ್ರ್ಯಕ್ಕೆ ನಿಜ ಅರ್ಥ ದೊರೆಯುತ್ತದೆ. ಯುವಜನತೆ ತಮ್ಮ ಹೊಣೆಯನ್ನು ಅರಿತು ಪ್ರಜ್ಞಾವಂತಿಕೆಯಿಂದ ದೇಶ ಕಟ್ಟುವ ಕೆಲಸದಲ್ಲಿ ಭಾಗಿಯಾಗಬೇಕು ಎಂದರು.

ಇದೇ ವೇಳೆ, ಶಾಲಾ ವಿದ್ಯಾರ್ಥಿಗಳಿಂದ ಪಥ ಸಂಚಲನ ಮತ್ತು ಪೆರೇಟ್‌ ನಡೆಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಯಗಳ ಗೌರ್ನಿಂಗ್‌ ಕೌನ್ಸಿಲ್‌ ಸದಸ್ಯರು, ವಿವಿಧ ಶೈಕ್ಷಣಿಕ ಘಟಕಗಳ ಪ್ರಾಂಶುಪಾಲರು, ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.15ಕೆಡಿಬಿಪಿ6- ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯ ದಿನದ ಅಂಗವಾಗಿ 80 ಅಡಿ ಉದ್ದದ ರಾಷ್ಟ್ರಧ್ವಜವನ್ನು ಪ್ರದರ್ಶಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು: ರೈತರಿಂದ ಪ್ರತಿಭಟನೆ
ಮಂಡ್ಯ: ಜನಾಕರ್ಷಿಸಿದ ಒಂದು ಸಾವಿರ ಅಡಿ ತಿರಂಗಾ ಪ್ರದರ್ಶನ