ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಾಗಲಕೋಟೆ ನವನಗರದಲ್ಲಿ ಶಿವಾಜಿ ಮಹಾರಾಜರ ಮತ್ತು ಬಸವಣ್ಣನವರ ಪುತ್ಥಳಿ ಸ್ಥಾಪನೆಯ ಬೇಡಿಕೆ ಬಹು ದಿನಗಳಿಂದ ಇದ್ದು, ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ವಿಶೇಷ ಅನುದಾನ ನೀಡುವ ಜತೆಗೆ ಸಕರ್ಾರದಿಂದ ಇಬ್ಬರು ಮಹಾನ್ ನಾಯಕರ ಪುತ್ಥಳಿ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿತ್ತು. ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ, ಆಥರ್ಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಹೇಳಿದ್ದಾರೆ.
ಜಿಲ್ಲಾ ಕೇಂದ್ರವಾದ ಹಾಗೂ ಬಾಗಲಕೋಟೆ ವಿಧಾನಸಭೆ ಮತಕ್ಷೇತ್ರ ವ್ಯಾಪ್ತಿಯ ಬಾಗಲಕೋಟೆ ನವನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಮತ್ತು ಬಸವಣ್ಣನವರ ಪುತ್ಥಳಿ ಸ್ಥಾಪನೆಯ ಬೇಡಿಕೆ ಇದೆ. ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ನಿರ್ಮಾಣಕ್ಕೆ ₹80 ಲಕ್ಷ ಅನುದಾನ ಒದಗಿಸಲು ಮನವಿ ಮಾಡಲಾಗಿತ್ತು. ಇದಕ್ಕೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ನೇತೃತ್ವದಲ್ಲಿ ಶೀಘ್ರವೇ ಈ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಹೊಳಬಸು ಶೆಟ್ಟರ ತಿಳಿಸಿದ್ದಾರೆ.