ಕನ್ನಡಪ್ರಭ ವಾರ್ತೆ ಮರಿಯಮ್ಮನಹಳ್ಳಿ
ಪಟ್ಟಣದಲ್ಲಿ ಭಾನುವಾರ ವಿವಿಧ ವಾರ್ಡ್‌ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕ್ಷೇತ್ರದಲ್ಲಿ ಜನರಿಗೆ ಅಗತ್ಯವಾಗಿರುವ ವಿವಿಧ ಕಾಮಗಾರಿಗಳನ್ನುತಕ್ಷಣವೇ ಅಭಿವೃದ್ಧಿಪಡಿಸಲಾಗುವುದು. ಜನರ ಬೇಡಿಕೆಗಳ ಅನುಗುಣವಾಗಿ ಕಾಮಗಾರಿ ಕೈಗೊಂಡು ಕ್ಷೇತ್ರವನ್ನು ಅಭಿವೃದ್ದಿ ಪಡಿಸಲಾಗುವುದು. ಪ್ರತಿಯೊಂದು ಊರಿಗೂ ಮತ್ತು ಪ್ರತಿಯೊಂದು ವಾರ್ಡುಗಳಿಗೂ ಈ ಹಿಂದೆ ಎಂದೂ ಕಾಣದಷ್ಟು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.2024-25ನೇ ಸಾಲಿನ ಕೆಕೆಆರ್‌ಡಿಬಿ ಮತ್ತು ಡಿಎಂಎಫ್ ಅಭಿವೃದ್ದಿ ಯೋಜನೆ ಅಡಿಯಲ್ಲಿ ಮರಿಯಮ್ಮನಹಳ್ಳಿ ಪಟ್ಟಣದ 18ರಲ್ಲಿ 16 ವಾರ್ಡ್‌ಗಳಲ್ಲ ಸಿಸಿ ಚಂರಡಿ ಮತ್ತು ಸಿಸಿ ರಸ್ತೆ ಹಾಗೂ ಶಾಲಾ ಆವರಣದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಭೂಮಿ ಪೂಜೆಯನ್ನು ಅಂದಾಜು ₹9 ಕೋಟಿ ವೆಚ್ಚದಲ್ಲಿ ಭಾನುವಾರ ಭೂಮಿ ಪೂಜೆ ಕೈಗೊಳ್ಳಲಾಗಿದೆ. ಈ ಎಲ್ಲಾ ಕಾಮಗಾರಿಗಳು ಗುಣಮಟ್ಟದ ಕಾಮಗಾರಿಗಳನ್ನಾಗಿ ನಿರ್ಮಿಸಲಾಗುವುದು ಎಂದು ಅವರು ಹೇಳಿದರು.
ಇನ್ನು 10 ದಿನದಲ್ಲಿ ಕ್ಷೇತ್ರದಲ್ಲಿ ₹24 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂಗಳ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ಹಮ್ಮಿಕೊಳ್ಳಲಾಗುವುದು. ಕೆರೆಗಳ ಕಾಲುವೆಗಳ ದುರಸ್ತಿ, ಮಾಲ್ವಿ ಚಲಾಶದ ಕಾಲುವೆಗಳ ದುರಸ್ತಿಗೆ ₹2 ಕೋಟಿ ವೆಚ್ಚದಲ್ಲಿ ಗೇಟ್ ರಿಪೇರಿ ಮತ್ತು ಕಾಲುವೆಗಳ ದುರಸ್ತಿಗೊಳಿಸುವ ಕಾಮಗಾರಿ ಅತೀ ಶೀಘ್ರದಲ್ಲೇ ಹಮ್ಮಿಕೊಳ್ಳಲಾಗುವುದು ಎಂದು ಅವರು ಹೇಳಿದರು.
ಜೆಡಿಎಸ್ ಕ್ಷೇತ್ರ ಅಧ್ಯಕ್ಷ ವೈ. ಮಲ್ಲಿಕಾರ್ಜುನಪ್ಪ, ಸ್ಥಳೀಯ ಮುಖಂಡರಾದ ಗರಗ ಪ್ರಕಾಶ್ ಪೂಜಾರ್, ಗುಂಡಸ್ವಾಮಿ, ಎಂ. ವೆಂಕಟೇಶ್, ಕೆ.ರಘುವೀರ, ಎಲೆಗಾರ್ ಮಂಜುನಾಥ, ಚಿದ್ರಿ ಸತೀಶ್, ಸಜ್ಜದ್ ವಿಶ್ವನಾಥ, ಈ. ಎರ್ರಿಸ್ವಾಮಿ, ಎಸ್. ನವೀನ್ ಕುಮಾರ್, ನಂದೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.