ಹೊಸಪೇಟೆ: ವಿಶ್ವವಿಖ್ಯಾತ ಹಂಪಿಯ ಸ್ಮಾರಕಗಳ ವೀಕ್ಷಣೆಗೆ ವೀಕೆಂಡ್ ಹಿನ್ನೆಲೆಯಲ್ಲಿ ಭಾನುವಾರ ಎಂಟು ಸಾವಿರಕ್ಕೂ ಅಧಿಕ ಪ್ರವಾಸಿಗರು ಆಗಮಿಸಿದ್ದರು. ಈ ಬಾರಿ ಹಂಪಿ ಉತ್ಸವ ಫೆಬ್ರವರಿ 28 ಮತ್ತು ಮಾರ್ಚ್ 1, 2ರಂದು ಮೂರು ದಿನಗಳವರೆಗೆ ನಡೆಸಲು ಸರ್ಕಾರ ಹಾಗೂ ಜಿಲ್ಲಾಡಳಿತ ದಿನಾಂಕ ನಿಗದಿಪಡಿಸಿದೆ.
ಹಂಪಿ ಸ್ಮಾರಕಗಳ ವೀಕ್ಷಣೆಗೆ ಪ್ರವಾಸಿಗರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉತ್ಸವಕ್ಕೂ ಭಾರೀ ಸಂಖ್ಯೆಯಲ್ಲಿ ಜನರು ಹಾಗೂ ಪ್ರವಾಸಿಗರು ಆಗಮಿಸುವ ಲೆಕ್ಕಾಚಾರವನ್ನು ಜಿಲ್ಲಾಡಳಿತ ಹೊಂದಿದೆ. ಹಾಗಾಗಿ ಸಿದ್ಧತೆಯೂ ನಡೆಸಿದೆ.ಹಂಪಿಯ ಶ್ರೀವಿರೂಪಾಕ್ಷೇಶ್ವರ ದೇವಾಲಯ, ಎದುರು ಬಸವಣ್ಣ ಮಂಟಪ, ಮಹಾನವಮಿ ದಿಬ್ಬ, ಕಡಲೆ ಕಾಳು ಗಣೇಶ ಮಂಟಪ, ಸಾಸಿವೆ ಕಾಳು ಗಣೇಶ ಮಂಟಪ, ಕಮಲ ಮಹಲ್, ಗಜಶಾಲೆ, ವಿಜಯ ವಿಠಲ ದೇವಾಲಯ, ಕಲ್ಲಿನತೇರು, ಪುರಂದರದಾಸರ ಮಂಟಪ ಸೇರಿದಂತೆ ವಿವಿಧ ಸ್ಮಾರಕಗಳನ್ನು ದೇಶ, ವಿದೇಶಿ ಪ್ರವಾಸಿಗರು ವೀಕ್ಷಿಸಿದರು.
ಹಂಪಿಯ ವಿಜಯ ವಿಠಲ ದೇವಾಲಯದಲ್ಲಿ ನಡೆಯುತ್ತಿರುವ ಕಲ್ಟ್ ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದ ನಟಿ ರಚಿತಾ ರಾಮ್ ಹಾಗೂ ಹಾಸ್ಯ ನಟ ರಂಗಾಯಣ ರಘು ಅವರನ್ನು ಕೂಡ ಪ್ರವಾಸಿಗರು ನೋಡಿ ಖುಷಿಯಾದರು. ಈ ಮಧ್ಯೆ ನಟ ರಂಗಾಯಣ ರಘು ಅವರು ವಿದೇಶಿ ಪ್ರವಾಸಿಗರೊಂದಿಗೆ ಚರ್ಚಿಸಿದರು.ಹಂಪಿ ಸ್ಮಾರಕಗಳ ವೀಕ್ಷಣೆಗೆ ರಾಜ್ಯ ಸೇರಿದಂತೆ ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಸೇರಿದಂತೆ ವಿವಿಧ ರಾಜ್ಯಗಳಿಂದಲೂ ಪ್ರವಾಸಿಗರು ಆಗಮಿಸಿದ್ದರು. ಹಂಪಿ ಸ್ಮಾರಕಗಳನ್ನು ಕಂಡು ಪ್ರವಾಸಿಗರು ಖುಷಿಯಾದರು.
ಹಂಪಿ ಸ್ಮಾರಕಗಳ ವೀಕ್ಷಣೆಗೆ ನಿರಂತರ ಪ್ರವಾಸಿಗರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹಂಪಿ ಉತ್ಸವಕ್ಕೂ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸುವ ನಿರೀಕ್ಷೆ ಇದೆ. ಹಾಗಾಗಿ ಸಕಲ ಸಿದ್ಧತೆ ಮಾಡಲಾಗುತ್ತಿದೆ.ಹಂಪಿ ಸ್ಮಾರಕಗಳ ವೀಕ್ಷಣೆಗೆ ವೀಕೆಂಡ್ ಹಿನ್ನೆಲೆಯಲ್ಲಿ ಭಾನುವಾರ ಆಗಮಿಸಿದ್ದ ಪ್ರವಾಸಿಗರು.