ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 827 ಅಭ್ಯರ್ಥಿಗಳಿಗೆ ಕೆಲಸ-ಸಚಿವ ಎಚ್ಕೆ ಪಾಟೀಲ

KannadaprabhaNewsNetwork | Published : Mar 4, 2025 12:33 AM

ಸಾರಾಂಶ

ಜಿಲ್ಲಾ ಕ್ರೀಡಾಂಗಣದಲ್ಲಿ 2 ದಿನಗಳ ಕಾಲ ಆಯೋಜಿಸಲಾಗಿದ್ದ ಉದ್ಯೋಗ ಮೇಳದಲ್ಲಿ 827 ಅಭ್ಯರ್ಥಿಗಳಿಗೆ ಕೆಲಸ ಲಭ್ಯವಾಗಿದೆ ಎಂದು ಕಾನೂನು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಗದಗ: ಜಿಲ್ಲಾ ಕ್ರೀಡಾಂಗಣದಲ್ಲಿ 2 ದಿನಗಳ ಕಾಲ ಆಯೋಜಿಸಲಾಗಿದ್ದ ಉದ್ಯೋಗ ಮೇಳದಲ್ಲಿ 827 ಅಭ್ಯರ್ಥಿಗಳಿಗೆ ಕೆಲಸ ಲಭ್ಯವಾಗಿದೆ ಎಂದು ಕಾನೂನು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಭಾನುವಾರ ಸಂಜೆ ಗದಗ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಉದ್ಯೋಗ ಮೇಳಕ್ಕೆ ಆಫ್‌ಲೈನ್‌ ಹಾಗೂ ಆನ್‌ಲೈನ್‌ ಮೂಲಕ 6243 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡು, 4089 ಸಂದರ್ಶನಕ್ಕೆ ಹಾಜರಾಗಿದ್ದರು. ಅವರಲ್ಲಿ 827 ಅಭ್ಯರ್ಥಿಗಳು ಕೆಲಸ ಗಿಟ್ಟಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಸಂದರ್ಶನದಲ್ಲಿ 1067 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್‌ಗೆ ಸೆಲೆಕ್ಟ್ ಆಗಿದ್ದಾರೆ. ಆಯ್ಕೆಯಾದ ಅಭ್ಯರ್ಥಿಗಳ ಪೈಕಿ 12 ಅಭ್ಯರ್ಥಿಗಳು ಕೆಲಸಕ್ಕೆ ಹಾಜರಾಗಲು ತೆರಳಿದ್ದಾರೆ ಎಂದು ಹೇಳಿದರು.

ಉದ್ಯೋಗ ಮೇಳಕ್ಕೆ ಗದಗ ಜಿಲ್ಲೆಯ ಯುವಕರು ಹಾಗೂ ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ಖಾಸಗಿ ಹಾಗೂ ಸರ್ಕಾರಿ ಕಂಪನಿಗಳು ತಮ್ಮ ಉದ್ಯೋಗ ಅವಕಾಶಗಳನ್ನು ಇಲ್ಲಿ ಪ್ರಸ್ತುತಪಡಿಸಿದ್ದು, ಹಲವರು ತಕ್ಷಣವೇ ಉದ್ಯೋಗ ಪಡೆಯುವಂತಾಗಿದೆ. ಹತ್ತಾರು ಕಂಪನಿಗಳು ಪಾಲ್ಗೊಂಡು ವಿವಿಧ ಕ್ಷೇತ್ರಗಳ ಉದ್ಯೋಗಗಳಿಗಾಗಿ ಸಂದರ್ಶನ ನಡೆಸಿದವು. ಆಕರ್ಷಕ ವೇತನ, ತರಬೇತಿ ಹಾಗೂ ವೃತ್ತಿಜೀವನ ಬೆಳವಣಿಗೆ ಅವಕಾಶಗಳೊಂದಿಗೆ ಯುವ ಪ್ರತಿಭೆಗಳಿಗೆ ದಾರಿ ತೆರೆಯಲಾಯಿತು.

ಸಮಾರೋಪ ಸಮಾರಂಭದಲ್ಲಿ ಮಾಜಿ ಶಾಸಕ ಡಿ.ಆರ್. ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಾಬರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಕೃಷ್ಣಗೌಡ ಪಾಟೀಲ, ಸಿದ್ದು ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಜಿಪಂ ಸಿಇಒ ಅಧಿಕಾರಿ ಭರತ್ ಎಸ್., ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ್ ಪೋತದಾರ, ಕೌಶಲ್ಯ ಅಭಿವೃದ್ಧಿ ಇಲಾಖೆ ಅಧಿಕಾರಿ ಡಾ. ಮಲ್ಲೂರ ಬಸವರಾಜ್ ಇದ್ದರು.

ಉದ್ಯೋಗ ಮೇಳಕ್ಕೆ ಆಫ್‌ಲೈನ್‌ ಹಾಗೂ ಆನ್‌ಲೈನ್‌ ಮೂಲಕ 6243 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡು, 4089 ಸಂದರ್ಶನಕ್ಕೆ ಹಾಜರಾಗಿದ್ದರು. ಅವರಲ್ಲಿ 827 ಅಭ್ಯರ್ಥಿಗಳು ಕೆಲಸ ಗಿಟ್ಟಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಸಂದರ್ಶನದಲ್ಲಿ 1067 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್‌ಗೆ ಸೆಲೆಕ್ಟ್ ಆಗಿದ್ದಾರೆ. ಆಯ್ಕೆಯಾದ ಅಭ್ಯರ್ಥಿಗಳ ಪೈಕಿ 12 ಅಭ್ಯರ್ಥಿಗಳು ಕೆಲಸಕ್ಕೆ ಹಾಜರಾಗಲು ತೆರಳಿದ್ದಾರೆ ಎಂದು ಸಚಿವ ಎಚ್‌.ಕೆ. ಪಾಟೀಲ ಹೇಳಿದರು.

Share this article