ಕನ್ನಡ ಪ್ರಭ ವಾರ್ತೆ ಮುಧೋಳ
ಬಾಗಲಕೋಟ ಬ.ವಿ.ವ ಸಂಘದ ಮುಧೋಳ ಆರ್.ಎಂ.ಜಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ರಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಒಟ್ಟು 534 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 453 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು ಶೇ.84.83 ರಷ್ಟು ಫಲಿತಾಂಶ ಬಂದಿದೆ ಎಂದು ಕಾಲೇಜಿನ ಪ್ರಾಚಾರ್ಯ ಬಸವರಾಜ ಗಂಜಿಹಾಳ ತಿಳಿಸಿದ್ದಾರೆ.ವಾಣಿಜ್ಯ ವಿಭಾಗದಲ್ಲಿ ಸಂಜನಾ ಕುಂಬಾರ 573 (ಶೇ.95.50) ಕಾಲೇಜಿಗೆ ಪ್ರಥಮ ಸ್ಥಾನ, ಕಲಾ ವಿಭಾಗದಲ್ಲಿ ಯಶೋಧಾ ಸುಂಕದ 569
(ಶೇ.94.83) ದ್ವಿತೀಯ ಸ್ಥಾನ ಹಾಗೂ ವಿಜ್ಞಾನ ವಿಭಾಗದಲ್ಲಿ ಅಕ್ಷತಾ ಮಟಗಾರ 562 (ಶೇ.93.60) ಅಂಕಗಳೊಂದಿಗೆ ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ.ಕಲಾ ವಿಭಾಗದಲ್ಲಿ 32 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 137 ವಿದ್ಯಾರ್ಥಿಗಳು ಪ್ರಥಮ ಸ್ಥಾನ, ವಾಣಿಜ್ಯ ವಿಭಾಗದಲ್ಲಿ 14 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 42 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಹಾಗೂ ವಿಜ್ಞಾನ ವಿಭಾಗದಲ್ಲಿ 11 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 104 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.
ಕನ್ನಡ ವಿಷಯದಲ್ಲಿ 4, ಅರ್ಥಶಾಸ್ತ್ರ ವಿಷಯದಲ್ಲಿ 3, ಶಿಕ್ಷಣಶಾಸ್ತ್ರ ವಿಷಯದಲ್ಲಿ 1, ವಿದ್ಯಾರ್ಥಿ ಗಳು 100 ಕ್ಕೆ 100 ರಷ್ಟು ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಅದರಂತೆ ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ, ರಾಜ್ಯಶಾಸ್ತ್ರ, ಇತಿಹಾಸ, ಐಚ್ಛಿಕ ಕನ್ನಡ ವಿಷಯಗಳಲ್ಲಿ 99 ಅಂಕಪಡೆದು ಕೊಂಡು ಮಹಾವಿದ್ಯಾಲಯದ ಕೀರ್ತಿ ಹೆಚ್ಚಿಸಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ. ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ ಎನ್. ಅಥಣಿ, ಶಾಲಾ ಆಡಳಿತ ಮಂಡಳಿಯ ಕಾರ್ಯಧ್ಯಕ್ಷ ಮಹಾಂತೇಶ ಎಸ್. ಶೆಟ್ಟರ, ಪದನಿಮಿತ್ತ ಕಾರ್ಯದರ್ಶಿ ಕೆ.ಎಚ್. ಹೊಸೂರ ಹಾಗೂ ಆಡಳಿತ ಮಂಡಳಿಯ ಸದಸ್ಯರು ಮತ್ತು ಮಹಾವಿದ್ಯಾಲಯದ ಪ್ರಾಚಾರ್ಯ ಬಿ.ಎ.ಗಂಜಿಹಾಳ ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
------.