ಬಳ್ಳಾರಿ: ಶೇ. 84ರಷ್ಟು ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಪೂರ್ಣ; ಜಿಲ್ಲಾಧಿಕಾರಿ

KannadaprabhaNewsNetwork |  
Published : May 29, 2025, 12:30 AM IST
ಪ್ರಶಾಂತ್ ಕುಮಾರ್ ಮಿಶ್ರಾ | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಈಗಾಗಲೇ ನಡೆಯುತ್ತಿರುವ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯಲ್ಲಿ ಆಯಾ ನಗರ, ತಾಲೂಕು ಮತ್ತು ಗ್ರಾಮಗಳಿಂದ ಕೆಲಸದ ನಿಮಿತ್ತ ಬೇರೆಡೆ ವಲಸೆ ಹೋಗಿರುವ ಪರಿಶಿಷ್ಟ ಕುಟುಂಬಗಳ ಮಾಹಿತಿ ನೀಡಬೇಕು

ವಲಸೆ ಹೋದ, ಇನ್ನುಳಿದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿ ನೀಡಿ: ಪ್ರಶಾಂತ್ ಕುಮಾರ್ ಮಿಶ್ರಾಕನ್ನಡಪ್ರಭ ವಾರ್ತೆ ಬಳ್ಳಾರಿ

ಜಿಲ್ಲೆಯಲ್ಲಿ ಈಗಾಗಲೇ ನಡೆಯುತ್ತಿರುವ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯಲ್ಲಿ ಆಯಾ ನಗರ, ತಾಲೂಕು ಮತ್ತು ಗ್ರಾಮಗಳಿಂದ ಕೆಲಸದ ನಿಮಿತ್ತ ಬೇರೆಡೆ ವಲಸೆ ಹೋಗಿರುವ ಪರಿಶಿಷ್ಟ ಕುಟುಂಬಗಳ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ-2025 ಕುರಿತಂತೆ ಸಮುದಾಯದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2025ರಂತೆ ಪರಿಶಿಷ್ಟ ಜಾತಿ ಅಂದಾಜು ವಿವರದಂತೆ ಜಿಲ್ಲೆಯಲ್ಲಿ 61,037 ಪರಿಶಿಷ್ಟ ಜಾತಿಗಳ ಕುಟುಂಬಗಳಲ್ಲಿ ಒಟ್ಟು 3,04,468 ಪರಿಶಿಷ್ಟ ಜಾತಿ ಜನಸಂಖ್ಯೆ ಇದೆ. ಸಮೀಕ್ಷೆಯಲ್ಲಿ ಈಗಾಗಲೇ 57385 ಕುಟುಂಬಗಳು ಪೂರ್ಣಗೊಂಡಿವೆ. ಅದರಲ್ಲಿ ಪರಿಶಿಷ್ಟ ಜಾತಿಯ ಒಟ್ಟು 2,56,753 ಜನಸಂಖ್ಯೆ ಸರ್ವೇ ಮಾಡಲಾಗಿದೆ. ಶೇ.84ರಷ್ಟು ಪ್ರಗತಿಯಾಗಿದ್ದು, ಇನ್ನುಳಿದ ವಲಸೆ ಹೋಗಿರುವ ಕುಟುಂಬಗಳ ಮಾಹಿತಿ ಅಥವಾ ಇನ್ನು ಸಮೀಕ್ಷೆಯಲ್ಲಿ ಭಾಗಿಯಾಗದವರ ಆಯಾ ಸಮುದಾಯದ ಮುಖಂಡರುಗಳು ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಈಗಾಗಲೇ ಜಿಲ್ಲೆಯಲ್ಲಿ ಇತರೆ ಕೆಲಸಕ್ಕಾಗಿ ವಲಸೆ ಹೋದರವರನ್ನು ಸಮುದಾಯದ ಮುಖಂಡರು ಸಂಪರ್ಕಿಸಿ ಅವರಿಗೆ ಮಾಹಿತಿ ಒದಗಿಸಬೇಕು. ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯಲ್ಲಿ ತಪ್ಪದೇ ಭಾಗವಹಿಸುವಂತೆ ತಿಳಿಸಬೇಕು. ಇದು ರಾಜ್ಯ ಸರ್ಕಾರವು ನೀಡಿರುವ ಉತ್ತಮ ಅವಕಾಶವಾಗಿದ್ದು, ತಪ್ಪದೇ ಸಮೀಕ್ಷೆಯಲ್ಲಿ ಒಳಪಡುವಂತೆ ನಿರ್ದೇಶನ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ ಮಾತನಾಡಿ, ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯಲ್ಲಿ ಮನೆ-ಮನೆ ಭೇಟಿಯು ಮೇ 29ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸಮುದಾಯದ ಮುಖಂಡರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ತಮ್ಮ ನೆರೆಹೊರೆಯವರ ಕುಟುಂಬಗಳು ವಲಸೆ ಹೋಗಿದ್ದಲ್ಲಿ ಅಂತಹ ಕುಟುಂಬಗಳ ಮಾಹಿತಿಯನ್ನು ಸಮೀಕ್ಷಾದಾರರಿಗೆ ಗುರುತಿಸಿ ನೀಡಬೇಕು. ಇದಕ್ಕೆ ಸಮುದಾಯದ ಮುಖಂಡರುಗಳು ಸಹಕರಿಸಬೇಕು ಎಂದು ಹೇಳಿದರು.

ಅದೇ ರೀತಿಯಾಗಿ ಮೇ 30ರಿಂದ ಜೂನ್ 01 ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರಗಳು ನಡೆಯಲಿದ್ದು, ಅಲ್ಲಿ ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ ಹೊರಗುಳಿದ ಪರಿಶಿಷ್ಟ ಜಾತಿ ಕುಟುಂಬಗಳು ಸಮೀಕ್ಷೆಯಲ್ಲಿ ಒಳಪಡಿಸಲಾಗುವುದು. ಹಾಗಾಗಿ ಹೊರಗುಳಿದ ಪರಿಶಿಷ್ಟ ಜಾತಿಯ ಕುಟುಂಬಗಳು ತಮ್ಮ-ತಮ್ಮ ವ್ಯಾಪ್ತಿಯ ಬೂತ್ ಗಳಲ್ಲಿ ಅಂದು ನಡೆಯುವ ಶಿಬಿರಗಳಲ್ಲಿ ತಪ್ಪದೇ ಹೋಗಿ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಿ ಮಾಹಿತಿ ನೀಡಬೇಕು. ಒಂದು ವೇಳೆ ಅಲ್ಲಿಯೂ ಭಾಗವಹಿಸದೇ ಇದ್ದಲ್ಲಿ ಅನ್‌ಲೈನ್ ಮೂಲಕ ಸ್ವಯಂ ಘೋಷಣೆ ಪ್ರಕ್ರಿಯೆಯು ಈಗಾಗಲೇ ನಡೆಯುತ್ತಲಿದೆ. ಲಿಂಕ್ ಮೂಲಕ ಸಮೀಕ್ಷೆಯಲ್ಲಿ ಮಾಹಿತಿ ನೀಡಬಹುದು ಎಂದರು. ಮನೆ-ಮನೆ ಭೇಟಿ ಸಮೀಕ್ಷಾ ಕಾರ್ಯದಲ್ಲಿ ಇನ್ನುಳಿದ ಎರಡು ದಿನಗಳಲ್ಲಿ ಶಿಕ್ಷಕರು ಇನ್ನಷ್ಟು ಹೆಚ್ಚಿನ ಶ್ರಮವಹಿಸಿ ಸಮೀಕ್ಷಾ ಕಾರ್ಯ ಇನ್ನಷ್ಟು ಪೂರ್ಣಗೊಳಿಸಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಈ ಕುರಿತು ಬಿಇಒಗಳು ಶಿಕ್ಷಕರಿಗೆ ನಿರ್ದೇಶನ ನೀಡಲು ಸೂಚಿಸಿದರು.

ಇದೇ ಸಂದರ್ಭ ಪರಿಶಿಷ್ಟ ಜಾತಿಗಳ ವಿವಿಧ ಸಮುದಾಯದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಮೀಕ್ಷಾ ಕಾರ್ಯ ಪೂರ್ಣಗೊಳಿಸಲು ತಾಂತ್ರಿಕ ಸಮಸ್ಯೆ ಹಾಗೂ ಇತರೆ ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಡಾ. ಬಾಬು ಜಗನ್ ಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಸಹಾಯಕ ಆಯುಕ್ತ ಪಿ.ಪ್ರಮೋದ್ ಸೇರಿದಂತೆ ಪರಿಶಿಷ್ಟ ಜಾತಿಗಳ ವಿವಿಧ ಸಮುದಾಯದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!