ಜನಸ್ಪಂದನದಲ್ಲಿ 85 ಅರ್ಜಿ ಸಲ್ಲಿಕೆ

KannadaprabhaNewsNetwork |  
Published : Mar 22, 2026, 02:45 AM IST
 | Kannada Prabha

ಸಾರಾಂಶ

ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ತಾಲೂಕಿನ ಭಾಗಮಂಡಲ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಶನಿವಾರ ನಡೆದ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರಿಂದ 85ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ತಾಲೂಕಿನ ಭಾಗಮಂಡಲ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಶನಿವಾರ ನಡೆದ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರಿಂದ 85ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು.

ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 15, ಗ್ರಾಮೀಣಾಭಿವೃದ್ಧಿ 7, ಪಂಚಾಯತ್ ರಾಜ್ ಸಂಬಂಧಿಸಿದಂತೆ 10, ಸೆಸ್ಕ್‌ 3, ಆಹಾರ 3, ರಸ್ತೆ ಸಹಿತ ವಿವಿಧ ಇಲಾಖೆಗಳ‌ 46 ಸೇರಿದಂತೆ ಒಟ್ಟು 85 ಅರ್ಜಿಗಳು ಸಲ್ಲಿಕೆಯಾದವು.

ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕರು, ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಅರ್ಜಿ ಪರಿಶೀಲಿಸಿ ಒಂದು ವಾರದಲ್ಲಿ ಬಗೆಹರಿಸಬೇಕು. ಸಾರ್ವಜನಿಕರ ಅಹವಾಲುಗಳಿಗೆ ಕೂಡಲೇ ಸ್ಪಂದಿಸಬೇಕು ಎಂದು ತಾಕೀತು ಮಾಡಿದರು.

ಸಭೆಯ ಆರಂಭದಲ್ಲಿ ಮಾತನಾಡಿದ ಶಾಸಕರು, ಸಾರ್ವಜನಿಕರ ಸಮಸ್ಯೆಯನ್ನು ಕಚೇರಿ ಹಂತದಲ್ಲೇ ಪರಿಹರಿಸುವಂತಾಗಬೇಕು ಎಂದು ಸಲಹೆ ನೀಡಿದರು. ಕಾನೂನು ಬದ್ಧವಾಗಿ ಸಮಸ್ಯೆಗಳನ್ನು ತೀರ್ಮಾನಿಸಿ, ಬಗೆಹರಿಸಬೇಕು. ಯಾರನ್ನೂ ಸತಾಯಿಸಬಾರದು ಎಂದರು.

ಅಕ್ರಮ ಸಕ್ರಮ‌ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್, ಪ್ರಮುಖರಾದ ಬಾಲಚಂದ್ರ ನಾಯರ್, ತಹಸೀಲ್ದಾರ್‌ ಶ್ರೀಧರ, ತಾಪಂ ಇಒ ಶೇಖರ್ ಇತರರು ಇದ್ದರು.

ಸುಮಾರು 36 ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು ತಮ್ಮ ಇಲಾಖೆ ಸಂಬಂಧ ಸಾರ್ವಜನಿಕರ ಅಹವಾಲಿಗೆ ಸ್ಪಂದಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ವಿಧಾನಸಭಾ ಕ್ಷೇತ್ರವಾರು ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಬೇಕು ಎಂದು ಕಟ್ಟುನಿಟ್ಟಿನ‌ ಸೂಚನೆ ನೀಡಿದ್ದಾರೆ. ಜನರ ಮನೆ ಬಾಗಿಲಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಸರ್ಕಾರ ಪ್ರಯತ್ನಿಸಿದೆ. ಆ ದಿಸೆಯಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಬೇಕು.

-ಎ.ಎಸ್. ಪೊನ್ನಣ್ಣ, ವಿರಾಜಪೇಟೆ ಶಾಸಕರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಂಗಳೂರಿಗೆ ಆಗಮಿಸಿದ ಕಚ್ಚಾತೈಲ ಹಡಗು
ಶೈವ-ವೈಷ್ಣವರ ಅಪರೂಪದ ಸಂಗಮ ಕ್ಷೇತ್ರ