ಮುನಿರಾಬಾದ್:
ಮಲೆನಾಡಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ತುಂಗಾ ಜಲಾಶಯದಿಂದ 70000 ಹಾಗೂ ಭದ್ರ ಜಲಾಶಯದಿಂದ 20000 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಇದರಿಂದ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಮುನ್ನಚ್ಚರಿಕಾ ಕ್ರಮವಾಗಿ ಟಿಬಿ ಡ್ಯಾಂ ಅಧಿಕಾರಿಗಳು ಜಲಾಯಶದ 33 ಗೇಟ್‌ಗಳ ಪೈಕಿ 26 ಗೇಟ್‌ಗಳನ್ನು 2.5 ಅಡಿ ಎತ್ತರಿಸಿ 85000 ಕ್ಯುಸೆಕ್ ನೀರನ್ನು ನದಿಗೆ ಹರಿಸಿದ್ದಾರೆ.
ಹಂಪಿ ಸ್ಮಾರಕ ಜಲಾವೃತ:ನದಿಗೆ ಅಪಾರ ಪ್ರಮಾಣದ ನೀರು ಹರಿಬಿಟ್ಟ ಪರಿಣಾಮ ಹಂಪಿಯ ಕೆಲ ಸ್ಮಾರಕಗಳು ಜಲಾವೃತಗೊಂಡಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅದೇ ರೀತಿ ನದಿ ಪಾತ್ರದ ಜನರು ಯಾವುದೇ ಕಾರಣಕ್ಕೂ ನದಿಗೆ ಇಳಿಯದಂತೆ ಮನವಿ ಮಾಡಿದ್ದರೂ ಸುರಕ್ಷತೆಯಿಂದ ಇರುವಂತೆ ಸೂಚಿಸಿದ್ದಾರೆ.