ಹರಿವ ನೀರಲ್ಲಿ ತೇಲಿ ಹೋಗುತ್ತಿದ್ದ ತಂದೆಯ ರಕ್ಷಿಸಿದ 9 ರ ಪೋರ!

KannadaprabhaNewsNetwork |  
Published : Jul 21, 2026, 03:30 AM IST
Water

ಸಾರಾಂಶ

ರಿಪ್ಪನ್‍ಪೇಟೆಧೈರ್ಯಕ್ಕೆ ವಯಸ್ಸಿನ ಮಿತಿಯಿಲ್ಲ ಎಂಬುದನ್ನು ಹೊಸನಗರ ತಾಲೂಕಿನ ಮೇಲಿನ ಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋರಗೋಡು ಗ್ರಾಮದ 9 ವರ್ಷದ ಬಾಲಕ ನಂದನ್ ಜೆ.ಸಿ. ತನ್ನ ಸಾಹಸ ಹಾಗೂ ಸಮಯಪ್ರಜ್ಞೆಯ ಮೂಲಕ ಸಾಬೀತುಪಡಿಸಿದ್ದಾನೆ.

  ರಿಪ್ಪನ್‍ಪೇಟೆ :  ಧೈರ್ಯಕ್ಕೆ ವಯಸ್ಸಿನ ಮಿತಿಯಿಲ್ಲ ಎಂಬುದನ್ನು ಹೊಸನಗರ ತಾಲೂಕಿನ ಮೇಲಿನ ಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋರಗೋಡು ಗ್ರಾಮದ 9 ವರ್ಷದ ಬಾಲಕ ನಂದನ್ ಜೆ.ಸಿ. ತನ್ನ ಸಾಹಸ ಹಾಗೂ ಸಮಯಪ್ರಜ್ಞೆಯ ಮೂಲಕ ಸಾಬೀತುಪಡಿಸಿದ್ದಾನೆ.

ನಂದನ್ ಮತ್ತು ತಂದೆ ಚಂದ್ರ ಗೋರಗೋಡು ಸಮೀಪದ ಹೊಳೆಯ ಬಳಿ ತೆರಳಿದ್ದರು. ಇದೇ ವೇಳೆ ಚಂದ್ರು ಅವರಿಗೆ ಏಕಾಏಕಿ ಫಿಟ್ಸ್ ಬಂದು ಹೊಳೆಯಂಚಿನಿಂದ ಜಾರಿ ಹೊಳೆಗೆ ಉರುಳಿ ಬಿದ್ದಿದ್ದು ಹರಿಯುವ ನೀರಿನೊಂದಿಗೆ ಸುಮಾರು ದೂರ ತೇಲಿ ಹೋಗಿದ್ದಾರೆ. ಈ ದೃಶ್ಯವನ್ನು ಕಂಡ ನಂದನ್ ಗಾಬರಿಗೊಳ್ಳದೆ ಹೊಳೆಯ ದಡದ ಮೇಲೆ ಕೂಗಿಕೊಳ್ಳುತ್ತಾ ಓಡಾತ್ತಾ ತಂದೆಯನ್ನು ಹುಡುಕಿದ್ದಾನೆ. ಬಳಿಕ ಸಮೀಪದ ಮನೆಗಳಿಗೆ ಧಾವಿಸಿ ತನ್ನ ತಂದೆ ಹೊಳೆಯಲ್ಲಿ ತೇಲಿ ಹೋಗಿದ್ದಾರೆ ಬನ್ನಿ ಕಾಪಾಡಿ ಎಂದು ಅಂಗಲಾಚುತ್ತಿದ್ದನ್ನು ಗಮನಿಸಿದ ಸ್ಥಳೀಯರು ಹೊಳೆಯಲ್ಲಿ ಹುಡುಕಾಟ ಆರಂಭಿಸಿದರು. ಈ ವೇಳೆ ಹೊಳೆಯಲ್ಲಿ ತೇಲುತ್ತಿದ್ದ ಜರ್ಕಿನನ್ನು ನಂದನ್ ಗುರುತಿಸಿ ಅದೇ ಸ್ಥಳದಲ್ಲಿ ತಂದೆ ಇರಬಹುದೆಂದು ತಿಳಿಸಿದ್ದಾನೆ. ಕೂಡಲೇ ಸ್ಥಳೀಯರು ಚಂದ್ರು ಅವರನ್ನು ದಡಕ್ಕೆ ಎಳೆ ತಂದು ರಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿ ಜೀವ ಉಳಿಸಿದ್ದಾರೆ.

ಬಾಲಕನ ಧೈರ್ಯಕ್ಕೆ ಮೆಚ್ಚುಗೆ

ತಂದೆ ಅಪಾಯದಲ್ಲಿದ್ದಾಗ ಸಮಯ ಪ್ರಜ್ಞೆ ಮತ್ತು ಧೈರ್ಯದಿಂದ ನಡೆದುಕೊಂಡ ಬಾಲಕ ಜೆ.ಸಿ. ನಂದನ್ ಅವರ ಸಾಹಸಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ಸಾಹಸಿ ಬಾಲಕ ಗೋರಗೋಡು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 4 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದೂಳಿದ ದಲಿತ ಕುಟುಂಬದ ಚಂದ್ರು-ಗಾಯಿತ್ರಿ ದಂಪತಿಯ ಪುತ್ರ. ತಂದೆ-ತಾಯಿ ದಿನಗೂಲಿ ಕಾರ್ಮಿಕರಾಗಿ ತೋಟದ ಕೆಲಸ ಮಾಡಿ ಕುಟುಂಬವನ್ನು ನಿರ್ವಹಿಸುತ್ತಿದ್ದಾರೆ.

ಸರ್ಕಾರದಿಂದ ಪ್ರೋತ್ಸಾಹಕ್ಕೆ ಆಗ್ರಹ:

ಇಂತಹ ಅಪರೂಪದ ಸಾಹಸ ಪ್ರದರ್ಶಿಸಿದ ಜೆ.ಸಿ. ನಂದನ್‍ಗೆ ರಾಜ್ಯ ಸರ್ಕಾರ ಪ್ರಶಸ್ತಿ ಶಿಕ್ಷಣ ಸಹಾಯಧನ ಹಾಗೂ ಸಾರ್ವಜನಿಕ ಗೌರವ ನೀಡಿ ಪ್ರೋತ್ಸಾಹಿಸಬೇಕು ಎಂದು ಸ್ಥಳೀಯರ ಆಗ್ರಹವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಮೋದಿ ದುರ್ಬಲ, ದುಷ್ಟರಕ್ಷಕ ಪ್ರಧಾನಿ: ಸಿದ್ದು ಕಿಡಿ
ಅನುಮತಿ ಬಳಿಕ ಶರಾವತಿ ಪಂಪ್ಡ್‌ ಸ್ಟೋರೇಜ್‌ ಶುರು : ಡಿಕೆ