ರಾಜ್ಯದಲ್ಲಿ ಕಾರ್ಯನಿರ್ವಹಿಸಲಿದೆ 900 ಕೆಪಿಎಸ್‌: ಮಧು ಬಂಗಾರಪ್ಪ

KannadaprabhaNewsNetwork |  
Published : Dec 06, 2025, 01:45 AM IST
 ನರಸಿಂಹರಾಜಪುರ ತಾಲೂಕಿನ ಗಡಿ ಭಾಗದ ಕುದುರೆಗುಂಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿದರು. ಶಾಸಕ ಟಿ.ಡಿ.ರಾಜೇಗೌಡ ಮತ್ತಿತರರು ಇದ್ದರು. | Kannada Prabha

ಸಾರಾಂಶ

ನರಸಿಂಹರಾಜಪುರರಾಜ್ಯದಲ್ಲಿ ಈಗ 900 ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾರಂಭವಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.ಶುಕ್ರವಾರ ಕುದುರೆಗುಂಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸರ್ಕಾರಿ ಪ್ರೌಢ ಶಾಲೆ ಹಳೇ ವಿದ್ಯಾರ್ಥಿ ಸಂಘ ಹಾಗೂ ಎಸ್.ಡಿ.ಎಂ.ಸಿ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೇ ವಿದ್ಯಾರ್ಥಿ ಸಂಘ ಗ್ರಾಮಸ್ಥರು ಸೇರಿ ಕುದುರೆಗುಂಡಿಗೆ ಪಬ್ಲಿಕ್ ಸ್ಕೂಲ್ ಮಂಜೂರು ಮಾಡಿದ ಶಿಕ್ಷಣ ಸಚಿವರು, ಶಾಸಕರಿಗೆ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

- ಕುದುರೆಗುಂಡಿ ಸರ್ಕಾರಿ ಶಾಲೆಯಲ್ಲಿ ಸಚಿವ ಮಧು ಬಂಗಾರಪ್ಪ, ಟಿ.ಡಿ.ರಾಜೇಗೌಡರಿಗೆ ಅಭಿನಂದನಾ ಸಮಾರಂಭ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ರಾಜ್ಯದಲ್ಲಿ ಈಗ 900 ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾರಂಭವಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶುಕ್ರವಾರ ಕುದುರೆಗುಂಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸರ್ಕಾರಿ ಪ್ರೌಢ ಶಾಲೆ ಹಳೇ ವಿದ್ಯಾರ್ಥಿ ಸಂಘ ಹಾಗೂ ಎಸ್.ಡಿ.ಎಂ.ಸಿ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೇ ವಿದ್ಯಾರ್ಥಿ ಸಂಘ ಗ್ರಾಮಸ್ಥರು ಸೇರಿ ಕುದುರೆಗುಂಡಿಗೆ ಪಬ್ಲಿಕ್ ಸ್ಕೂಲ್ ಮಂಜೂರು ಮಾಡಿದ ಶಿಕ್ಷಣ ಸಚಿವರು, ಶಾಸಕರಿಗೆ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕಾದರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಅವಶ್ಯಕತೆ ಮನಗಂಡು ಸರ್ಕಾರ ರಾಜ್ಯದ 6 ಸಾವಿರ ಗ್ರಾಪಂಗಳಲ್ಲಿ ಪ್ರತಿ ಗ್ರಾಪಂಗೆ ಒಂದು ಕರ್ನಾಟಕ ಪಬ್ಲಿಕ್ ಶಾಲೆ ತೆರೆಯುವ ಚಿಂತನೆ ನಡೆಸಿದೆ. 2018 ರಿಂದ ರಾಜ್ಯದಲ್ಲಿ 308 ಕೆಪಿಎಸ್ ಶಾಲೆಗಳಿತ್ತು. ಬಜೆಟ್ ನಲ್ಲಿ 500 ಕೆಪಿಎಸ್ ಮಂಜೂರು ಮಾಡಲಾಗಿತ್ತು. ಕಳೆದ 6-7 ತಿಂಗಳಲ್ಲಿ ಕಲ್ಯಾಣ ಕರ್ನಾಟಕಕ್ಕೆ 200 ಕೆಪಿಎಸ್ ಮಂಜೂರು ಮಾಡಿದ್ದೇವೆ. ಅಲ್ಲದೆ ಅಲ್ಪ ಸಂಖ್ಯಾತರಿ ಗಾಗಿ 100 ಸ್ಕೂಲ್ ಮಂಜೂರು ಮಾಡಿದ್ದೇವೆ. ಮುಂದೆ ರಾಜ್ಯದಲ್ಲಿ ಒಟ್ಟು 900 ಪಬ್ಲಿಕ್ ಸ್ಕೂಲ್ ನಡೆಯುತ್ತದೆ ಎಂದರು.

ಪಬ್ಲಿಕ್ ಸ್ಕೂಲಿನಲ್ಲಿ ಎಲ್.ಕೆ.ಜಿ.ಯಿಂದ 12 ನೇ ತರಗತಿವರೆಗೆ ನಡೆಯಲಿದೆ. ಒಟ್ಟು 14 ವರ್ಷ ಗುಣಮಟ್ಟದ ಶಿಕ್ಷಣ ನೀಡ ಲಾಗುತ್ತದೆ. 1 ನೇ ತರಗತಿಯಿಂದಲೇ ಕಂಪ್ಯೂಟರ್ ಕಲಿಸಲಾಗುತ್ತದೆ. 900 ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೆ ಒಟ್ಟು ₹3400 ಕೋಟಿ ಖರ್ಚು ಮಾಡಲಾಗುವುದು. ಒಂದೊಂದು ಕೆಪಿಎಸ್ ಶಾಲೆಗೆ ₹4 ಕೋಟಿ ನಿಗದಿ ಪಡಿಸಲಾಗಿದೆ. ಶೃಂಗೇರಿ ಕ್ಷೇತ್ರಕ್ಕೆ 3 ಕೆಪಿಎಸ್ ಮಂಜೂರು ಮಾಡಿದ್ದೇವೆ ಎಂದರು.

ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದಾರೆ. ಶೀಘ್ರದಲ್ಲೇ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಿದ್ದೇವೆ.ಮುಂದಿನ ವರ್ಷ ಶಾಲೆ ಪ್ರಾರಂಭದ ಹೊತ್ತಿಗೆ ಈ ಶಿಕ್ಷಕರು ಬರಲಿದ್ದಾರೆ. ಅನುದಾನಿತ ಶಾಲೆಗಳಿಗೆ 6 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿ ಮಾಡಿ ಬದಲಾವಣೆ ತರುತ್ತಿದ್ದಾರೆ. ಪ್ರತಿ ಗ್ರಾಪಂನಲ್ಲೂ ಕೆಪಿಎಸ್ ಶಾಲೆ ಪ್ರಾರಂಭಿಸಿ ಗ್ರಾಮಗಳಿಂದ ಮಕ್ಕಳನ್ನು ಕರೆ ತರಲು ಬಸ್ಸಿನ ವ್ಯವಸ್ಥೆ ಮಾಡಲಾಗುತ್ತದೆ. ಪ್ರತಿ ಕೆಪಿಎಸ್ ಶಾಲೆ ಕಟ್ಟಡ ಹಾಗೂ ಇತರ ಕಾಮಗಾರಿಗೆ ₹4 ರಿಂದ 5 ಕೋಟಿ ಖರ್ಚು ಮಾಡಲಾಗುವುದು. ಕುದುರೆಗುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇಂಟರ್ ಲಾಕ್, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ ಟಿ.ಡಿ.ರಾಜೇಗೌಡ, ಶಿಕ್ಷಣದಲ್ಲಿ ದೊಡ್ಡ ಸಾಧನೆ ಮಾಡಿದ ನುಗ್ಗಿಯ ಶುತ ಸೇನ ಗೌಡ, ಪ್ರಮೋದ್, ಸುಹಾಸ್ ರನ್ನು ಸನ್ಮಾನಿಸಲಾಯಿತು.

ಅತಿಥಿಗಳಾಗಿ ಕುದುರೆಗುಂಡಿ ಸರ್ಕಾರಿ ಪ್ರೌಢ ಶಾಲೆ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ನುಗ್ಗಿ ಮಂಜುನಾಥ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ವೆಂಕಟೇಶ್, ಗ್ರಾಪಂ ಅಧ್ಯಕ್ಷೆ ವಿದ್ಯಾ, ಪ್ರೌಢ ಶಾಲೆ ಎಸ್.ಡಿಎಂಸಿ ಅಧ್ಯಕ್ಷ ಪಾಪಣ್ಣ, ಹಿರಿಯ ಪ್ರಾಥಮಿಕ ಶಾಲೆ ಎಸ್.ಡಿಎಂಸಿ ಅಧ್ಯಕ್ಷ ದಿನೇಶ್, ಗ್ರಾಪಂ ಉಪಾಧ್ಯಕ್ಷ ಗಣೇಶ್, ಸದಸ್ಯರಾದ ಹೇಮಂತಪೂಜಾರಿ, ಅಂಬಿಕ, ಕವಿತ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಲಿಂಗರಾಜು, ತಾಪಂ ಇ.ಒ ನವೀನ್ ಕುಮಾರ್, ಕೊಪ್ಪ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ರಾಘವೇಂದ್ರ, ಹೇಮಂತಶೆಟ್ಟಿ, ಚಕ್ರಪಾಣಿ, ಬಿ.ಕೆ.ನಾರಾಯಣಸ್ವಾಮಿ, ಎನ್.ಪಿ.ರಮೇಶ್,ಎಚ್.ಇ. ದಿವಾಕರ್, ಸುದೀಪ್ ಹೆಗ್ಡೆ, ರಾಮಣ್ಣ ಭಂಡಾರಿ, ದೀಪಕ್, ರಾಘವೇಂದ್ರ ಪೂಜಾರಿ, ಓಣಿತೋಟ ರತ್ನಾಕರ್, ಹರೀಶ್ ಪೂಜಾರಿ ಮತ್ತಿತರರು ಇದ್ದರು.

ಕುದುರೆಗುಂಡಿ ಸರ್ಕಾರಿ ಪ್ರೌಢ ಶಾಲೆ ಮುಖ್ಯೋಪಾಧ್ಯಾಯ ಧನಂಜಯ ಸ್ವಾಗತಿಸಿದರು. ಸಹ ಶಿಕ್ಷಕ ಪ್ರಕಾಶ್ ಹಾಗೂ ಉಷಾ ಕಾರ್ಯಕ್ರಮ ನಿರೂಪಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಲೀನಾ ಡಿ ಕಾಸ್ಟಾ ವಂದಿಸಿದರು.

-- ಬಾಕ್ಸ್ --

ಜನವರಿ ಕೊನೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಶಿವಮೊಗ್ಗದಲ್ಲಿ ರಾಜ್ಯದ ಎಲ್ಲಾ ಕೆಪಿಎಸ್ ಶಾಲೆಗಳಿಗೆ ಚಾಲನೆ ನೀಡಲಿದ್ದಾರೆ. ಮತ್ತೆ 1 ತಿಂಗಳಲ್ಲಿ ರಾಜ್ಯಾದ್ಯಂತ ಎಲ್ಲಾ ಕಡೆ ಕೆಪಿಎಸ್ ಪ್ರಾರಂಭವಾಗಲಿದೆ. ಕೆಪಿಎಸ್ ಶಾಲೆ ಪ್ರಾರಂಭವಾದರೆ ಉಳಿದ ಸರ್ಕಾರಿ ಶಾಲೆಗಳು ಮುಚ್ಚಲಿದೆ ಎಂಬ ಅಪಪ್ರಚಾರ ಪ್ರಾರಂಭವಾಗಿದೆ. ಒಬ್ಬ ವಿದ್ಯಾರ್ಥಿ ಇದ್ದರೂ ಒಬ್ಬ ಶಿಕ್ಷಕರನ್ನು ನೇಮಿಸಿ ಶಾಲೆ ನಡೆಸುತ್ತೇವೆ ಎಂದು ಮಧು ಬಂಗಾರಪ್ಪ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಬ್ಸಿಡಿಗಳನ್ನು ಬಳಸಿಕೊಂಡು ಹೈನುಗಾರಿಕೆ ಮಾಡಿ
ಹೊಸ್ತಿಲು ಹುಣ್ಣಿಮೆ: ಶ್ರೀ ರೇಣುಕಾಂಬೆಗೆ ವಿಶೇಷ ಪೂಜೆ