ಮೊದಲ ದಿನವೇ ಶೇ.93.4 ರಷ್ಟು ಮತದಾನ

KannadaprabhaNewsNetwork |  
Published : Apr 03, 2026, 02:45 AM IST
ಮನೆಯಿಂದಲೇ ಮತದಾನ ಮಾಡಿದ ಹಿರಿಯರು, ವಿಶೇಷ ಚೇತನರುಮೊದಲ ದಿನವೇ ಶೇ.93.4 ರಷ್ಟು ಮತದಾನ | Kannada Prabha

ಸಾರಾಂಶ

ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ-2026 ಹಿನ್ನೆಯಲ್ಲಿ 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯರು ಹಾಗೂ ವಿಶೇಷ ಚೇತನರಿಗೆ ಬುಧವಾರ ನಡೆದ ಮನೆಯಿಂದಲೇ ಮತದಾನ ಮಾಡಿದ್ದಾರೆ.ಮೊದಲ ದಿನವೇ ಶೇ.93.4ರಷ್ಟು ಮತದಾನವಾಗಿದೆ ಎಂದು ಚುನಾವಣಾಧಿಕಾರಿ ಸಂತೋಷ ಜಗಲಾಸರ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ-2026 ಹಿನ್ನೆಯಲ್ಲಿ 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯರು ಹಾಗೂ ವಿಶೇಷ ಚೇತನರಿಗೆ ಬುಧವಾರ ನಡೆದ ಮನೆಯಿಂದಲೇ ಮತದಾನ ಮಾಡಿದ್ದಾರೆ.ಮೊದಲ ದಿನವೇ ಶೇ.93.4ರಷ್ಟು ಮತದಾನವಾಗಿದೆ ಎಂದು ಚುನಾವಣಾಧಿಕಾರಿ ಸಂತೋಷ ಜಗಲಾಸರ ತಿಳಿಸಿದ್ದಾರೆ.

ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ 85 ವರ್ಷ ಮೇಲ್ಪಟ್ಟ ಹಿರಿಯರು 183 ಹಾಗೂ ವಿಶೇಷ ಚೇತನರು (ಪಿಡಬ್ಲೂಡಿ) 90 ಸೇರಿ ಒಟ್ಟು 273 ಜನ ಮನೆಯಿಂದಲೇ ಮತದಾನಕ್ಕೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 85 ವರ್ಷ ಮೇಲ್ಪಟ್ಟವರು 168, ವಿಶೇಷ ಚೇತನರು 87 ಸೇರಿ ಒಟ್ಟು 255 ಜನ ಮನೆಯಿಂದಲೇ ಮತದಾನ ಮಾಡುವ ಮೂಲಕ ಶೇ.93.4 ರಷ್ಟು ಮತದಾನವಾಗಿದೆ ಎಂದು ತಿಳಿಸಿದ್ದಾರೆ.

ಏಪ್ರಿಲ್ 1 ರಂದು ಮನೆ ಭೇಟಿ ನೀಡಿದ ಸಂದರ್ಭದಲ್ಲಿ ಮತದಾರರು ಮತ್ತೊಂದು ದಿನ ಭೇಟಿ ನೀಡಿ ಮತದಾನ ಮಾಡಿಸಲಾಗುತ್ತಿದೆ. ಆಗಲೂ ಮತದಾರ ಲಭ್ಯವಾಗದಿದ್ದರೆ ಮತದಾನ ಮಾಡಲು ಅವಕಾಶ ಇರುವುದಿಲ್ಲ. ಅಲ್ಲದೇ ಗೈರು ಹಾಜರಿ ಮತದಾರರು ಮತಗಟ್ಟೆಗೆ ಬಂದು ಮತ ಹಾಕಲು ಅವಕಾಶ ಇರುವುದಿಲ್ಲವೆಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೇ 8 ರಂದು ರಾಜ್ಯಮಟ್ಟದ ರೈತ ಜಾಗೃತಿ ಸಮಾವೇಶ
ಪ್ರಧಾನಿ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿನವರಿಗೆ ನೈತಿಕತೆ ಇಲ್ಲ: ಯತ್ನಾಳ