ನಿಯಮ ಉಲ್ಲಂಘಿಸಿದ ಆಟೋ ಚಾಲಕರ ವಿರುದ್ಧ 833 ಪ್ರಕರಣ

KannadaprabhaNewsNetwork |  
Published : Jun 23, 2024, 02:04 AM ISTUpdated : Jun 23, 2024, 10:38 AM IST
ಆಟೋ | Kannada Prabha

ಸಾರಾಂಶ

ನಗರ ಸಂಚಾರ ಪಶ್ಚಿಮ ವಿಭಾಗದ ಪೊಲೀಸರು ಶುಕ್ರವಾರ ಸಂಚಾರ ನಿಯಮ ಉಲ್ಲಂಘಿಸುವ ಆಟೋ ಚಾಲಕ ವಿರುದ್ಧ ಕೈಗೊಂಡಿದ್ದ ವಿಶೇಷ ಕಾರ್ಯಾಚರಣೆ ವೇಳೆ ದುಬಾರಿ ದರಕ್ಕೆ ಬೇಡಿಕೆ, ದಾಖಲೆಗಳಿಲ್ಲದೆ ಆಟೋ ಚಾಲನೆ ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘನೆ ಸಂಬಂಧ 833 ಪ್ರಕರಣ ದಾಖಲಿಸಿದ್ದಾರೆ.

  ಬೆಂಗಳೂರು :  ನಗರ ಸಂಚಾರ ಪಶ್ಚಿಮ ವಿಭಾಗದ ಪೊಲೀಸರು ಶುಕ್ರವಾರ ಸಂಚಾರ ನಿಯಮ ಉಲ್ಲಂಘಿಸುವ ಆಟೋ ಚಾಲಕ ವಿರುದ್ಧ ಕೈಗೊಂಡಿದ್ದ ವಿಶೇಷ ಕಾರ್ಯಾಚರಣೆ ವೇಳೆ ದುಬಾರಿ ದರಕ್ಕೆ ಬೇಡಿಕೆ, ದಾಖಲೆಗಳಿಲ್ಲದೆ ಆಟೋ ಚಾಲನೆ ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘನೆ ಸಂಬಂಧ 833 ಪ್ರಕರಣ ದಾಖಲಿಸಿದ್ದಾರೆ.

ಚಾಲನಾ ಪರವಾನಗಿ (ಡಿಎಲ್‌) ಇಲ್ಲದೆ ಆಟೋ ಚಾಲನೆ 3, ನಿಗದಿತ ದರಕ್ಕಿಂತ ಹೆಚ್ಚಿನ ಹಣಕ್ಕೆ ಬೇಡಿಕೆ 213, ಕರೆದಲ್ಲಿಗೆ ಬಾಡಿಗೆ ಹೋಗಲು ನಿರಾಕರಿಸುವುದು 234, ಇತರೆ ನಿಯಮ ಉಲ್ಲಂಘನೆ 383 ಸೇರಿದಂತೆ ಒಟ್ಟು 833ಕ್ಕೂ ಅಧಿಕ ಪ್ರಕರಣ ದಾಖಲಿಸಲಾಗಿದೆ.

ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವುದು ಅಪಘಾತಗಳಿಗೆ ಕಾರಣವಾಗುತ್ತಿದೆ. ಪ್ರಮುಖವಾಗಿ ಕೆಲವು ಆಟೋರಿಕ್ಷಾ ಚಾಲಕರು ಡಿಎಲ್‌ ಇಲ್ಲದೆ ಆಟೋ ಚಾಲನೆ ಮಾಡುವುದು, ನಿಗದಿತ ಬಾಡಿಗೆ ದರಕ್ಕಿಂತ ಹೆಚ್ಚಿನ ಹಣಕ್ಕೆ ಬೇಡಿಕೆ ಇರಿಸುವುದು, ಕರೆದಲ್ಲಿಗೆ ಬಾಡಿಗೆಗೆ ಹೋಗಲು ನಿರಾಕರಿಸುವುದರ ಬಗ್ಗೆ ಸಾಮಾಜಿಕ ಜಾಲತಾಣಗಳು ಹಾಗೂ ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ಸಂಚಾರ ನಿಯಮ ಉಲ್ಲಂಘಿಸುವ ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದೇ ವೇಳೆ ಸಂಚಾರ ನಿಯಮ ಕಡ್ಡಾಯವಾಗಿ ಪಾಲಿಸುವ ಕುರಿತು ಹಾಗೂ ಸಂಚಾರ ನಿಯಮಗಳ ಮಹತ್ವದ ಬಗ್ಗೆ ಆಟೋ ಚಾಲಕರಿಗೆ ಅರಿವು ಮೂಡಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ಈ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''
ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ