ಕನ್ನಡಪ್ರಭ ವಾರ್ತೆ ಮೈಸೂರು
ನಗರದ ತಮ್ಮ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಎಸ್ಐಆರ್ ಅರ್ಹತಾ ದಿನಾಂಕವನ್ನು ಅಕ್ಟೋಬರ್ 1ಕ್ಕೆ ನಿಗಧಿಪಡಿಸಲಾಗಿದೆ. ಸಿದ್ಧತೆ ಮಾಡಿಕೊಳ್ಳುವುದು, ತರಬೇತಿ ಹಾಗೂ ಮುದ್ರಣಕ್ಕೆ ಜೂ.20 ರಿಂದ 29 ರವರಗೆ ದಿನಾಂಕ ನಿಗದಿಪಡಿಸಲಾಗಿದೆ ಎಂದರು.
ಬಿಎಲ್ಒಗಳು ಜೂನ್ 30 ರಿಂದ ಜುಲೈ 29 ರವರೆಗೆ ಮನೆ- ಮನೆ ಭೇಟಿ ನೀಡಲಿದ್ದಾರೆ. ಜುಲೈ 29 ರಂದು ಮತಗಟ್ಟೆಗಳ ರಾಷನಲೈಜೇಷನ್ ಪ್ರಕ್ರಿಯೆ ನಡೆಸಲಾಗುವುದು. ಆಗಸ್ಟ್ 5 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಆಗಸ್ಟ್ 5 ರಿಂದ ಸೆಪ್ಟೆಂಬರ್ 4 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಹಕ್ಕು ಮತ್ತು ಆಕ್ಷೇಪಣೆಗಳನ್ನು ಆಗಸ್ಟ್ 5 ರಿಂದ ಅಕ್ಟೋಬರ್ 3 ರವರೆಗೆ ಇತ್ಯರ್ಥ ಪಡಿಸಲಾಗುವುದು. ಅಕ್ಟೋಬರ್ 7 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಅವರು ವಿವರಿಸಿದರು.ಜೂನ್ 30 ರಿಂದ ಜುಲೈ 29 ವರೆಗೆ ಬಿ.ಎಲ್.ಓಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರಿಗೆ ನೊಂದಣಿ ಫಾರಂ ನೀಡಲಿದ್ದಾರೆ. ನೋಂದಣಿ ಫಾರಂನ್ನು ಭರ್ತಿ ಮಾಡಿದ ನಂತರ ಜುಲೈ 29 ರೊಳಗೆ ಪಡೆದು, ಆಗಸ್ಟ್ 5 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದರು.
ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ 2002ರ ಮತದಾರರ ಪಟ್ಟಿಯನ್ನು ಮಾನದಂಡವಾಗಿಟ್ಟುಕೊಂಡು, ಪ್ರಸ್ತುತ ಇರುವ 2025ರ ಮತದಾರರ ಪಟ್ಟಿಯೊಂದಿಗೆ ಹೋಲಿಕೆ ಹಾಗೂ ಮ್ಯಾಪಿಂಗ್ ಪ್ರಕ್ರಿಯೆ ನಡೆಸಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಿಲ್ಲೆಯಲ್ಲಿ ಈಗಾಗಲೇ ಶೇ.96 ರಷ್ಟು ಮತದಾರರನ್ನು ಗುರುತಿಸಿ, ಕುಟುಂಬಗಳ ಲಿಂಕೇಜ್ ನೊಂದಿಗೆ ಹೊಂದಾಣಿಕೆ ಮಾಡಲಾಗಿದೆ ಎಂದರು.
ಜೂನ್ 30 ರಿಂದ ಜುಲೈ 29 ರವರೆಗೆ ಬಿಎಲ್ಒ ಗಳು ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಈ ಸಮಯದಲ್ಲಿ ಬಿಎಲ್ಎ ಗಳು ಸಹ ಎಲ್ಲಾ ಮನೆಗಳಿಗೆ ಎನ್ಯೂಮರೇಷನ್ ಫಾರಂಗಳು ತಲುಪಿರುವುದು, ಭರ್ತಿ ಮಾಡಿ ಕೊಡುವ ಬಗ್ಗೆ ಸಾರ್ವಜನಿಕರು ಹಾಗೂ ಬಿಎಲ್ಒಗಳ ಜೊತೆ ಸಮನ್ವಯಸಾಧಿಸಿ. ರಾಜಕೀಯ ಪಕ್ಷಗಳು ಎಲ್ಲಾ ಬೂತ್ ಗಳಿಗೆ ಏಜೆಂಟ್ ಗಳನ್ನು ನೇಮಕ ಮಾಡಿ ವಿವರವನ್ನು ಒದಗಿಸಿ ಎಂದರು.
ಅರ್ಹ ಮತದಾರರ ಹೆಸರು ಸೇರ್ಪಡೆ:
ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಇದ್ದರು.ಭಾರತ ದೇಶದ ಪ್ರಜೆಯಾಗಿರುವ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ಒಂದು ಸ್ಥಳದಲ್ಲಿ ಮಾತ್ರ ಮತದಾನದ ಹಕ್ಕು ಪಡೆದಿರಬೇಕು ಎಂಬ ಸದುದ್ದೇಶದಿಂದ ಪಾರದರ್ಶಕವಾಗಿ ಎಸ್ಐಆರ್ ಪ್ರಕ್ರಿಯೆ ನಡೆಲಾಗುತ್ತಿದೆ. ವಿವಿಧ ಪರಿಶೀಲನೆ ಹಾಗೂ ಅಗತ್ಯ ಮಾಹಿತಿ ಹಾಗೂ ದಾಖಲೆ ಪಡೆದ ನಂತರ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾಗುವುದು.