ಡಿಸಿಸಿ ಬ್ಯಾಂಕ್‌ನಿಂದ 983 ಕೋಟಿ ರು. ಬೆಳೆ ಸಾಲ ವಿತರಣೆ ಗುರಿ: ಡಿ.ಎಸ್. ಸುರೇಶ್

KannadaprabhaNewsNetwork |  
Published : Sep 21, 2024, 01:50 AM IST
ಚಿಕ್ಕಮಗಳೂರು ಡಿಸಿಸಿ ಬ್ಯಾಂಕಿನ ಸರ್ವ ಸದಸ್ಯರ ಸಭೆಯನ್ನು ಅಧ್ಯಕ್ಷ ಡಿ.ಎಸ್‌. ಸುರೇಶ್‌ ಅವರು ಉದ್ಘಾಟಿಸಿದರು. ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಬೆಳ್ಳಿಪ್ರಕಾಶ್, ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ಡಿ.ಸಿ. ಶಂಕರಪ್ಪ, ನಿರ್ದೇಶಕರಾದ ಟಿ.ಎಲ್‌. ರಮೇಶ್‌, ಕೆ.ಆರ್‌.ಆನಂದ್‌, ಎಂ.ಎಸ್‌. ನಿರಂಜನ್‌ ಇದ್ದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಂದ ಮುಂದಿನ ವರ್ಷಾಂತ್ಯದೊಳಗೆ 983 ಕೋಟಿ ರು. ಕೆಸಿಸಿ ಬೆಳೆ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಡಿ.ಎಸ್. ಸುರೇಶ್ ಹೇಳಿದರು.

ಚಿಕ್ಕಮಗಳೂರು ಡಿಸಿಸಿ ಬ್ಯಾಂಕಿನ ಸರ್ವ ಸದಸ್ಯರ ಸಭೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಂದ ಮುಂದಿನ ವರ್ಷಾಂತ್ಯದೊಳಗೆ 983 ಕೋಟಿ ರು. ಕೆಸಿಸಿ ಬೆಳೆ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಡಿ.ಎಸ್. ಸುರೇಶ್ ಹೇಳಿದರು.

ಡಿಸಿಸಿ ಬ್ಯಾಂಕ್ ಆವರಣದಲ್ಲಿ ಶುಕ್ರವಾರ ನಡೆದ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಪ್ರಸಕ್ತ ಸಾಲಿನ ಅಂತ್ಯಕ್ಕೆ 1281 ಕೋಟಿ ರೂ. ಠೇವಣಿ ಇದ್ದು, ಇದನ್ನು 1400 ಕೋಟಿ ರೂ.ಗೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಪ್ರಸಕ್ತ ಸಾಲಿನಲ್ಲಿ ಶೇ.3ರ ಬಡ್ಡಿ ದರದಲ್ಲಿ 29 ಕೋಟಿ ಮಧ್ಯಮಾವಧಿ ಸಾಲ ನೀಡುವ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಪ್ರಸ್ತುತ ಇರುವ ನಿವ್ವಳ ಲಾಭವನ್ನು 8 ಕೋಟಿ ರು.ಗಳಿಗೆ ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಫ್ಯಾಕ್ಸ್ ಎಂಎಸ್‌ಸಿ ಯೋಜನೆಯಡಿ 32 ಕೋಟಿ ರು. ಸಾಲ ಮಂಜೂರು ಮಾಡಲಾಗಿದೆ. ಇನ್ನು ಹೊಸ ಸಂಘಗಳಿಗೆ ಸ್ವಂತ ಗೋದಾಮು ನಿರ್ಮಿಸಿಕೊಳ್ಳಲು ರಿಯಾಯಿತಿ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.ಪ್ರಸಕ್ತ ಸಾಲಿನ ಆರ್ಥಿಕ ವರ್ಷದಲ್ಲಿ ಆರ್‌ಬಿಐ ಗೃಹ ಸಾಲದ ವೈಯಕ್ತಿಕ ಮಿತಿಯನ್ನು 20 ಲಕ್ಷ ರು.ಗಳಿಂದ 50 ಲಕ್ಷಗಳವರೆಗೆ ಏರಿಸಿದ್ದು, ಮುಂದಿನ ಸಾಲಿಗೆ 350 ಕೋಟಿ ರು. ಕೃಷಿಯೇತರ ಸಾಲವನ್ನು ವಿವಿಧ ಯೋಜನೆಗಳ ಮೂಲಕ ವಿತರಿಸಲು ಗುರಿ ಹೊಂದಲಾಗಿದೆ. ಪ್ರಸಕ್ತ ಸಾಲಿನಲ್ಲಿ ಬ್ಯಾಂಕಿನ ವಾರ್ಷಿಕ ವಹಿವಾಟು 2 ಸಾವಿರ ಕೋಟಿ ರು. ಮೀರಿದೆ ಎಂದು ಹೇಳಿದರು.ಪ್ರಸಕ್ತ ಆರ್ಥಿಕ ವರ್ಷದ ಮಾರ್ಚ್ 31 ಕ್ಕೆ 6499 ಕೋಟಿ ರು. ಷೇರು ಬಂಡವಾಳ ಸಂಗ್ರಹಿಸಿದ್ದು, ಬ್ಯಾಂಕ್ ದಿನೇ ದಿನೇ ಅಭಿವೃದ್ಧಿ ಪಥದಲ್ಲಿ ಸಾಗಲು ಕಾರಣರಾದ ಮತ್ತು ಸಂಪೂರ್ಣ ಸಹಕಾರ ನೀಡಿದ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಸದಸ್ಯರಿಗೆ, ಆಡಳಿತ ಮಂಡಳಿ ಪದಾಧಿಕಾರಿ ಗಳಿಗೆ ಅಭಿನಂದನೆ ಸಲ್ಲಿಸಿದರು.ಬ್ಯಾಂಕ್ ತನ್ನದೇ ಆದ ಸುಸಜ್ಜಿತ ಕಟ್ಟಡ ಹೊಂದಿದ್ದು, ಸದ್ಯದಲ್ಲೇ ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳ್ಳಲಿದೆ. ಗ್ರಾಹಕರಿಗೆ ಬ್ಯಾಂಕ್ ಕೊಡುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಲು ಜಿಲ್ಲೆಯ ಎಲ್ಲಾ ಶಾಖೆಗಳಲ್ಲಿ ಸಿಸಿ ಟಿವಿಗಳನ್ನು ಅಳವಡಿಸಿ, ಗ್ರಾಹಕರನ್ನು ಜಾಗೃತ ಗೊಳಸಲಾಗುತ್ತಿದೆ ಎಂದರು.ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಬೆಳ್ಳಿಪ್ರಕಾಶ್ ಮಾತನಾಡಿ, ಸಹಕಾರ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವವರೆಲ್ಲರೂ ಒಂದು ಕುಟುಂಬದವರಂತೆ ಡಿಸಿಸಿ ಬ್ಯಾಂಕ್ ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.ಇತ್ತೀಚಿನ ದಿನಗಳಲ್ಲಿ ಬ್ಯಾಂಕಿನಲ್ಲಿ ಠೇವಣಿ ಇಡುವವರ ಸಂಖ್ಯೆ ಬಹಳ ಇಳಿಮುಖವಾಗಿದ್ದು, ಗ್ರಾಹಕರು ಸಾಲ ಕೇಳಲು ಡಿಸಿಸಿ ಬ್ಯಾಂಕಿಗೆ ಬರುತ್ತಿದ್ದಾರೆ. ಠೇವಣಿ ಇಡದೆ ಸಾಲ ಕೇಳಿದರೆ ಬ್ಯಾಂಕಿನ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.ಸಹಕಾರ ಬ್ಯಾಂಕುಗಳ ಉಳಿತಾಯ ಖಾತೆಗಳಲ್ಲಿ ಗ್ರಾಹಕರು ಹೆಚ್ಚು ಹಣ ತೊಡಗಿಸುವುದನ್ನು ರೂಢಿಸಿಕೊಳ್ಳಬೇಕು. ಪ್ರಸ್ತುತ ಕೃಷಿಯೇತರ ಚಟುವಟಿಕೆಗಳಿಗೆ ಸಾಲ ಸೌಲಭ್ಯ ನೀಡುವುದು ಅಗತ್ಯ ಎಂದರು.ಕಾರ್ಯಕ್ರಮದಲ್ಲಿ ಬ್ಯಾಂಕಿನ ನಿರ್ದೇಶಕರಾದ ಕೆ.ಆರ್. ಆನಂದಪ್ಪ, ಟಿ.ಎಲ್. ರಮೇಶ್, ಎಚ್.ಬಿ. ಶಿವಣ್ಣ, ರಾಮಪ್ಪ, ರಾಮಸ್ವಾಮಿ, ಸಂದೀಪ್ ಕುಮಾರ್, ಎಂ.ಎಸ್. ನಿರಂಜನ್, ಸತೀಶ್, ಪರಮೇಶ್ವರಪ್ಪ, ಅಪೆಕ್ಸ್ ಬ್ಯಾಂಕ್ ಪ್ರತಿನಿಧಿ ಜಗದೀಶ್, ಸಹಕಾರ ಸಂಘಗಳ ಉಪ ನಿಬಂಧಕ ರಾದ ತೇಜಸ್ವಿನಿ ಉಪಸ್ಥಿತರಿದ್ದರು. ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ತಿಮ್ಮಪ್ಪ ವರದಿ ಓದಿದರು. ಬ್ಯಾಂಕಿನ ಉಪಾಧ್ಯಕ್ಷ ಡಿ.ಸಿ ಶಂಕರಪ್ಪ ಸ್ವಾಗತಿಸಿದರು. 20 ಕೆಸಿಕೆಎಂ 4ಚಿಕ್ಕಮಗಳೂರು ಡಿಸಿಸಿ ಬ್ಯಾಂಕಿನ ಸರ್ವ ಸದಸ್ಯರ ಸಭೆಯನ್ನು ಅಧ್ಯಕ್ಷ ಡಿ.ಎಸ್‌. ಸುರೇಶ್‌ ಉದ್ಘಾಟಿಸಿದರು. ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ಡಿ.ಸಿ. ಶಂಕರಪ್ಪ, ನಿರ್ದೇಶಕರಾದ ಟಿ.ಎಲ್‌. ರಮೇಶ್‌, ಕೆ.ಆರ್‌.ಆನಂದ್‌, ಎಂ.ಎಸ್‌. ನಿರಂಜನ್‌ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು
ಪರಂ ಸಿಎಂ ಆಗಲಿ : 25ಕ್ಕೂ ಹೆಚ್ಚು ಮಠಾಧೀಶರ ಆಗ್ರಹ