ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಜಿಲ್ಲೆಯಾದ್ಯಂತ ನಡೆಯುತ್ತಿದೆ. ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 552 ಮತಗಟ್ಟೆಗಳ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಯನ್ನು ಮತದಾರರಿಗೆ ವಿತರಿಸುವ ಕಾರ್ಯವನ್ನು ಶೇ.99 ರಷ್ಟು ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಜಿಲ್ಲೆಯಾದ್ಯಂತ ನಡೆಯುತ್ತಿದೆ. ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 552 ಮತಗಟ್ಟೆಗಳ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಯನ್ನು ಮತದಾರರಿಗೆ ವಿತರಿಸುವ ಕಾರ್ಯವನ್ನು ಶೇ.99 ರಷ್ಟು ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಸಂಬಂಧಿಸಿದಂತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸೋಮಶೇಖರ್ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ನೋಡಲ್ ಅಧಿಕಾರಿಗಳು ಮೇಲ್ವಿಚಾರಣೆ ಕಾರ್ಯದ ಬಗ್ಗೆ ಹಲವು ನಿರ್ದೇಶನ ನೀಡಿದರು.ಮತದಾರರಿಂದ ಭರ್ತಿ ಮಾಡಿದ ಗಣತಿ ನಮೂನೆಯನ್ನು ಸಂಗ್ರಹಿಸಿ ಬಿಎಲ್‌ಒ ಆಪ್‌ನಲ್ಲಿ ಡಿಜಿಟಲೀಕರಣ ಮಾಡಲಾಗುತ್ತಿದೆ. ಮನೆ ಮನೆಗೆ ಭೇಟಿ ನೀಡುವ ಕಾರ್ಯವು ಜು. 29 ರವರೆಗೆ ನಡೆಯಲಿದೆ. ಜೊತೆಗೆ ಡಿಜಿಟಲೀಕರಣ ಕಾರ್ಯವೂ ಸಹ ನಡೆಯಲಿದೆ ಎಂದು ಹೇಳಿದ್ದಾರೆ. ಆನ್‌ಲೈನ್ ಮೂಲಕವೂ ಸಹ ಗಣತಿ ನಮೂನೆಯನ್ನು 952 ಮಂದಿ ಮತದಾರರು ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ 70 ಗೈರು, 2228 ಕುಟುಂಬಗಳು ಸ್ಥಳಾಂತರ, 1629 ಮರಣ, 274 ಡೂಪ್ಲಿಕೇಟ್, 14 ಇತರೆ ಒಟ್ಟು 4,215 ಮತದಾರರ ಸಂಖ್ಯೆಯನ್ನು ಹೊಂದಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದ್ದಾರೆ. ಜಿಲ್ಲೆಯಲ್ಲಿ ಎರಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 4,68,657 ಮತದಾರರು ಇದ್ದು, 4,68,657 ಗಣತಿ ನಮೂನೆ ಮುದ್ರಣವಾಗಿದ್ದು, ಇದರಲ್ಲಿ 4,63,301 ಗಣತಿ ನಮೂನೆಯನ್ನು ವಿತರಿಸಿ, 1,21,226 ಗಣತಿ ನಮೂನೆಯನ್ನು ಮತದಾರರಿಂದ ಸಂಗ್ರಹಿಸಿ ಡಿಜಿಟಲೀಕರಣ ಮಾಡಿ. ಗಣತಿ ನಮೂನೆ ವಿತರಣೆಯಲ್ಲಿ ಶೇ.98.86 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸೋಮಶೇಖರ್ ತಿಳಿಸಿದ್ದಾರೆ. ಮುಖ್ಯ ಚುನಾವಣಾಧಿಕಾರಿ ಅವರ ಕಚೇರಿಯಿಂದ ನೀಡಿರುವ ಸ್ಟಿಕ್ಕರ್‌ಗಳನ್ನು ಅಂಟಿಸಿರುವ ಬಗ್ಗೆ ಪರಿಶೀಲಿಸುವುದು, ಲಾಕ್ ಆಗಿರುವ ಮನೆಗಳಿಗೆ ಕನಿಷ್ಠ ಮೂರು ಬಾರಿ ಭೇಟಿ ನೀಡಿರುವ ಬಗ್ಗೆ ಪರಿಶೀಲಿಸುವುದು ಅಗತ್ಯ ಎಂದರು.ಬಿಎಲ್‌ಒ ಕೇಂದ್ರಗಳು ಹಾಗೂ ಮತದಾರರ ಕೇಂದ್ರಗಳಲ್ಲಿ ವಿಶೇಷ ಶಿಬಿರ ಏರ್ಪಡಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ರಾಜಕೀಯ ಪಕ್ಷಗಳ ಸಭೆ ಏರ್ಪಡಿಸಿ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಮಾಹಿತಿ ನೀಡುವುದು ಅತ್ಯಗತ್ಯ. ರಾಜಕೀಯ ಪಕ್ಷಗಳ ಸಹಕಾರ ಜೊತೆಗೆ ವಿಶೇಷವಾಗಿ ಹಾಡಿಗಳಲ್ಲಿ ವಿಶೇಷ ಕ್ಯಾಂಪ್ ಏರ್ಪಡಿಸಿ ಗಣತಿ ನಮೂನೆಗಳನ್ನು ಭರ್ತಿ ಮಾಡಲು ಹಾಗೂ ಡಿಜಿಟಲೀಕರಣ ಮಾಡಲು ಕ್ರಮವಹಿಸುವಂತೆ ಸೋಮಶೇಖರ್ ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧಿಸಿದಂತೆ ಹಲವು ನಿರ್ದೇಶನ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳು, ನೋಡಲ್ ಅಧಿಕಾರಿಗಳು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.