ಕಾಂಗ್ರೆಸ್ಸಿನ ಒಂದೂವರೆ ವರ್ಷದ ದುರಾಡಳಿತಕ್ಕೆ ಜನರಿಂದ ತಕ್ಕ ಉತ್ತರ - ಬಸವರಾಜ ಬೊಮ್ಮಾಯಿ

KannadaprabhaNewsNetwork |  
Published : Oct 27, 2024, 02:43 AM ISTUpdated : Oct 27, 2024, 11:06 AM IST
ಫೋಟೊ ಶೀರ್ಷಿಕೆ: 26ಹೆಚ್‌ವಿಆರ್2 ಬಸವರಾಜ ಬೊಮ್ಮಾಯಿ   | Kannada Prabha

ಸಾರಾಂಶ

ಕಳೆದ ಒಂದೂವರೆ ವರ್ಷದ ಕಾಂಗ್ರೆಸ್‌ನ ದುರಾಡಳಿತ ಮತ್ತು ದೌರ್ಜನ್ಯಕ್ಕೆ ಈ ಉಪಚುನಾವಣೆಯಲ್ಲಿ ಜನರು ತಕ್ಕ ಉತ್ತರ ಕೊಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿ: ಕಳೆದ ಒಂದೂವರೆ ವರ್ಷದ ಕಾಂಗ್ರೆಸ್‌ನ ದುರಾಡಳಿತ ಮತ್ತು ದೌರ್ಜನ್ಯಕ್ಕೆ ಈ ಉಪಚುನಾವಣೆಯಲ್ಲಿ ಜನರು ತಕ್ಕ ಉತ್ತರ ಕೊಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.ಶಿಗ್ಗಾಂವಿಯಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಕೈ ಹಿಡಿಯುತ್ತವೆ ಎಂದು ಕಾಂಗ್ರೆಸ್‌ನವರು ಕನಸು ಕಾಣುತ್ತಿದ್ದಾರೆ. 

ಅವರ ಕನಸು ನನಸಾಗುವುದಿಲ್ಲ. ಕಳೆದ ಲೋಕಸಭೆ ಚುನಾವಣೆಯಲ್ಲಿ ನಾನು ಹಾವೇರಿ, ಗದಗ ಜಿಲ್ಲೆಯ ಕಡೆಗೆ ಹೆಚ್ಚಿನ ಗಮನ ಹರಿಸಿದ್ದೆ. ಆಗ ಸ್ವಲ್ಪ ವ್ಯತ್ಯಾಸ ಆಗಿದೆ. ಆದರೆ, ನಮ್ಮ ಕಾರ್ಯಕರ್ತರಿಗೆ ಈಗಾಗಲೇ ಅದರ ಅರಿವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಯಾವ ರೀತಿ ಜನರು ಬೆಂಬಲ ಕೊಟ್ಟಿದ್ದರೋ ಅದೇ ರೀತಿ ಈಗ ಜನ ಬೆಂಬಲ ಸಿಗಲಿದೆ. ನಮ್ಮ ಕಾರ್ಯಕರ್ತರು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದರು.

ಕಾಂಗ್ರೆಸ್‌ನವರು ರೌಡಿ ಶೀಟರ್‌ಗೆ ಟಿಕೆಟ್ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್‌ನವರೇ ಆರೋಪ ಮಾಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕರು ಸ್ಪಷ್ಟೀಕರಣ ನೀಡಬೇಕು. ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಜ್ಜಂಪೀರ್ ಖಾದ್ರಿಯವರ ಮನವೊಲಿಕೆಯಿಂದ ನಮಗೇನು ಪರಿಣಾಮ ಬೀರುವುದಿಲ್ಲ. ಅದು ಕಾಂಗ್ರೆಸ್‌ಗೆ ಸಂಬಂಧಿಸಿದ ವಿಚಾರ ಎಂದರು. ಶಿಗ್ಗಾಂವಿ ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರ ನಡೆಯುತ್ತಿರುವ ಕುರಿತು ಪ್ರತಿಕ್ರಿಯಿಸಿ, ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ, ಎಲ್ಲ ಸಮುದಾಯದವರು ನಮಗೆ ಬೆಂಬಲ ಸೂಚಿಸಿದ್ದಾರೆ. 

ಈ ಚುನಾವಣೆಯಲ್ಲಿ ನನಗಿಂತ ಹೆಚ್ಚು ಬೆಂಬಲ ಭರತ್ ಬೊಮ್ಮಾಯಿಗೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಚಿವ ಜಮೀರ್ ಅಹಮದ್ ಅವರ ಸವಾಲಿನ ಕುರಿತು ಕೇಳಿದ ಪ್ರಶ್ನೆಗೆ ಅವರ ಸವಾಲು ಹಾಸ್ಯಾಸ್ಪದವಾಗಿದ್ದು, ಸತ್ಯಕ್ಕೆ ದೂರವಾಗಿದೆ ಎಂದರು.ಕಾಂಗ್ರೆಸ್‌ನವರು ಹೋಬಳಿಗೊಬ್ಬ ಸಚಿವರು ಬರಲಿದ್ದಾರೆ ಎಂಬ ಪ್ರಶ್ನೆಗೆ ಬರಲಿ ಅವರಿಗೆ ಸ್ವಾಗತ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ