ಸಚಿವೆಯನ್ನೇ ಯಾಮಾರಿಸಿದ ಬುರ್ಖಾಧಾರಿ ಮಹಿಳೆ: ನೀತಾ ಪ್ರಭು

KannadaprabhaNewsNetwork |  
Published : May 18, 2026, 03:45 AM IST
17ಬಿಜೆಪಿ | Kannada Prabha

ಸಾರಾಂಶ

ಶನಿವಾರ ಉಡುಪಿಗೆ ಬಂದಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರ ನಿವಾಸಕ್ಕೆ ಹಿಂದು ವೃದ್ಧ ಮಹಿಳೆಯೊಬ್ಬರನ್ನು ಕರೆದುಕೊಂಡು ಬಂದ ಇಬ್ಬರು ಬುರ್ಖಾಧಾರಿ ಮಹಿಳೆಯರು, ತಾವು ಹಿಂದೂ ಮಹಿಳೆಯ ನೆರೆಮನೆಯವರು, ಬಡ ಮಹಿಳೆಗೆ ಮನೆ ನಿವೇಶನ ನೀಡುವಂತೆ ಮನವಿ ಮಾಡಿದ್ದರು.

ಉಡುಪಿ: ಶನಿವಾರ ಉಡುಪಿಗೆ ಬಂದಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರ ನಿವಾಸಕ್ಕೆ ಹಿಂದು ವೃದ್ಧ ಮಹಿಳೆಯೊಬ್ಬರನ್ನು ಕರೆದುಕೊಂಡು ಬಂದ ಇಬ್ಬರು ಬುರ್ಖಾಧಾರಿ ಮಹಿಳೆಯರು, ತಾವು ಹಿಂದೂ ಮಹಿಳೆಯ ನೆರೆಮನೆಯವರು, ಬಡ ಮಹಿಳೆಗೆ ಮನೆ ನಿವೇಶನ ನೀಡುವಂತೆ ಮನವಿ ಮಾಡಿದ್ದರು. ಈ ಸಂದರ್ಭದಲ್ಲಿ ಸಚಿವರು ಇದು ಹಿಂದೂ ಮುಸ್ಲಿಂ ಸೌಹಾರ್ದ, ಉಡುಪಿಯ ಬಿಜೆಪಿಯವರು ಇದರಿಂದ ಪಾಠ ಕಲಿಯಬೇಕು ಎಂದು ಹೇಳಿದ್ದರು.

ಆದರೆ ಉಸ್ತುವಾರಿ ಸಚಿವರನ್ನು ಭೇಟಿಯಾಗಲು ಬಂದ ಗಿರಿಜಾ ಶೆಟ್ಟಿಗಾರ್ ಅವರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಅವರ ಪುತ್ರಿಯೇ ಕರೆತಂದಿದ್ದು, ಸಚಿವರ ಮುಂದೆ ಮಾತ್ರ ತಾನು ಹಿಂದೂ ಮಹಿಳೆಯ ನೆರೆಮನೆಯವರು ಎಂದು ಸುಳ್ಳು ಹೇಳಿ ಉಸ್ತುವಾರಿ ಸಚಿವರನ್ನೇ ಯಾಮಾರಿಸಿದ್ದಾರೆ. ಆದರೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹಿಂದೆ ಮುಂದೆ ಯೋಚಿಸದೆ ಮಾಧ್ಯಮದ ಮುಂದೆ ಉಡುಪಿ ಬಿಜೆಪಿಗರಿಗೆ ಸೌಹಾರ್ದತೆಯ ಭಾಷಣ ಮಾಡಿ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ, ಉಡುಪಿಯ ಜನತೆ ಸೌಹಾರ್ದತೆಯ ಬಗ್ಗೆ ಬೆಳಗಾವಿಯಿಂದ ಬಂದ ಉಸ್ತುವಾರಿ ಸಚಿವರಿಂದ ಕಲಿಯುವ ಅಗತ್ಯವಿಲ್ಲ ಎಂದು ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಬೇಜವಾಬ್ದಾರಿ ಹೇಳಿಕೆ-ಸಂಧ್ಯಾ: ಉಡುಪಿ ಜಿಲ್ಲೆಗೆ ಅತಿಥಿಯಂತೆ ಆಗಮಿಸಿ, 3 ವರ್ಷಗಳಿಂದ ಜಿಲ್ಲೆಯ ಅಭಿವೃದ್ದಿಗೆ ಎಳ್ಳುನೀರು ಬಿಟ್ಟಿರುವ ಜಿಲ್ಲಾ ಉಸ್ತುವಾರಿ ಸಚಿವರು ಇಂತಹ ಅವಿವೇಕದ ಮಾತುಗಳ‍ು ಅಕ್ಷಮ್ಯ. ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷದ ನಾಯಕರು, ಜನಪ್ರತಿನಿಧಿಗಳ ವಿರುದ್ಧ ಬೇಜವಾಬ್ದಾರಿ ಹೇಳಿಕೆ ಮುಂದುವರಿಸಿದರೆ ಮಹಿಳಾ ಮೋರ್ಚಾದ ವತಿಯಿಂದ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಎಚ್ಚರಿಕೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನ ಪ್ರತಿಷ್ಠಾ ವರ್ಧಂತ್ಯುತ್ಸವ
ಕಾರ್ಕಳ: ಋಣಾನುಬಂಧ ವಧುವರರ ಸಮಾವೇಶ