ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಗ್ರಾಪಂ ಸದಸ್ಯೆ ಸಿಂಧು ಜಾಥಾಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ನಂತರ ಬಿಇಒ ಎಸ್.ಡಿ ಬೆನ್ನೂರ್ ಮಾತನಾಡಿ, ತಾಲೂಕಿನಾದ್ಯಂತ ಆಯ್ದ ಗ್ರಾಮಗಳಲ್ಲಿ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನ ನ.3 ರಿಂದ 19 ರವರೆಗೆ ನಡೆಯಲಿದೆ. ಕುಷ್ಠರೋಗವು ಚರ್ಮ ಮತ್ತು ನರಗಳಿಗೆ ಸಂಬಂದಪಟ್ಟ ಕಾಯಿಲೆ ಆಗಿದೆ. ದೇಹದ ಮೇಲೆ ಯಾವುದೇ ಮಚ್ಚೆ ಕುಷ್ಠರೋಗ ಆಗಿರಬಹುದು. ಹಾಗಾಗಿ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಕುಷ್ಠರೋಗ ನಿರ್ಮೂಲನೆಗೆ ಸಹಕರಿಸಬೇಕು ಎಂದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎನ್ ಕೃಷ್ಣೇಗೌಡ ಮಾತನಾಡಿ, ಆಂದೋಲನದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ತರಬೇತಿ ಹೊಂದಿದ ಸ್ವಯಂ ಸೇವಕರು ಸೇರಿದಂತೆ ತಂಡಗಳನ್ನು ರಚಿಸಲಾಗಿದೆ. ತಂಡದಲ್ಲಿ ಪುರುಷ ಹಾಗೂ ಮಹಿಳಾ ಸಿಬ್ಬಂದಿ ಇರುತ್ತಾರೆ ತಂಡದ ಸದಸ್ಯರು ಮನೆಗೆ ಬಂದಾಗ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.ಬಳಿಕ ಶಾಲಾ ಮಕ್ಕಳು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಕುಷ್ಟರೋಗದ ಬಗ್ಗೆ ಅರಿವು ಮೂಡಿಸಿದರು.