ಕನ್ನಡಪ್ರಭ ವಾರ್ತೆ ಪುತ್ತೂರುತಾಲೂಕಿನ ಯುವ ವಿಜ್ಞಾನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಎಂಬಲ್ಲಿ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕಲ್ಲರ್ಪೆ ನಿವಾಸಿ ಭರತ್ ಕಲ್ಲರ್ಪೆ (24) ಮೃತರು.
ಕಳೆದ ಒಂದು ವಾರದ ಹಿಂದೆ ಅವರು ಊರಿಗೆ ಆಗಮಿಸಿದ್ದರು. ಈ ನಡುವೆ ಸಂಸ್ಥೆಗೆ ರಾಜೀನಾಮೆ ಪತ್ರ ನೀಡಿದ್ದರೂ ರಾಜೀನಾಮೆ ಸ್ವೀಕಾರ ಮಾಡಿರಲಿಲ್ಲ ಎನ್ನಲಾಗಿದೆ. ಬುಧವಾರ ರಾತ್ರಿ ಇವರು ಕೆಲಸ ನಿರ್ವಹಿಸುತ್ತಿದ್ದ ಸಂಸ್ಥೆಯ ಕಚೇರಿಯಿಂದ ಅವರಿಗೆ ಫೋನ್ ಕರೆ ಬಂದಿತ್ತು. ಆ ಬಳಿಕ ಮಲಗಿದ್ದ ಭರತ್ ಅವರು ತಡರಾತ್ರಿ ಈ ಕೃತ್ಯ ಎಸಗಿಕೊಂಡಿದ್ದಾರೆ. ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅವರು ತಂದೆ, ಸಹೋದರ ಪತ್ರಕರ್ತ ಗಣೇಶ್ ಕಲ್ಲರ್ಪೆ ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ. ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.