ಗಂಗಾವತಿ: ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಚರಿಸುವ ಕನ್ನಡ ಜ್ಯೋತಿ ಯಾತ್ರೆಯನ್ನು ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಸಂಭ್ರಮದಿಂದ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಅಧ್ಯಕ್ಷ ಮೌಲಾಸಾಬ ಅವರು, ನಮ್ಮ ರಾಜ್ಯ ಕಲೆ, ಸಂಸ್ಕೃತಿಯ ಬೀಡು ಎನಿಸಿಕೊಂಡಿದೆ. ಇಂತಹ ನಾಡಿನಲ್ಲಿ ಕನ್ನಡ ಜ್ಯೋತಿ ರಥ ಯಾತ್ರೆಯನ್ನು ಎಲ್ಲರೂ ಸ್ವಾಗತಿಸಬೇಕು ಮತ್ತು ಸಮ್ಮೇಳನ ಯಶಸ್ಸಿಗೆ ಎಲ್ಲರೂ ಬೆಂಬಲಿಸಬೇಕು ಎಂದರು.
ತಹಸೀಲ್ದಾರ್ ನಾಗರಾಜ್ ಮಾತನಾಡಿ ಕಲೆ, ಸಂಸ್ಕೃತಿಯುಳ್ಳ ನಮ್ಮ ರಾಜ್ಯದಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಪ್ರತಿ ವರ್ಷ ಸಮ್ಮೇಳನ ನಡೆಯುತ್ತಿದ್ದು, ಇದರಲ್ಲಿ ಎಲ್ಲರೂ ಭಾಗವಹಿಸಬೇಕು ಎಂದರು.ನಗರಸಭೆ ಉಪಾಧ್ಯಕ್ಷೆ ಪಾರ್ವತಮ್ಮ ದುರ್ಗೇಶ್ ದೊಡ್ಮನಿ, ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಚೌಡಕಿ, ವಿರೋಧ ಪಕ್ಷದ ನಾಯಕ ಮನೋಹರಸ್ವಾಮಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಇಲಿಯಾಸ್ ಖಾದ್ರಿ, ನಗರಸಭಾ ಸದಸ್ಯ ವಾಸುದೇವ ನವಲಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶರಣೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕ ಕೋಟ್ರೋಶ್, ಕೃಷಿ ಇಲಾಖೆಯ ಉಪ ನಿರ್ದೇಶಕ ಸಂತೋಷ ಪಟ್ಟದಕಲ್ಲು, ಗ್ರೇಡ್- 1 ತಹಸೀಲ್ದಾರ್ ಮಹಾಂತಗೌಡ, ನಗರಸಭೆಯ ನಾಗರಾಜ್, ಕಂದಾಯ ಇಲಾಖೆಯ ರವಿಕುಮಾರ್, ಅಕ್ಕಿ ಚಂದ್ರು, ಕಟ್ಟಿಮನಿ ಹಾಗೂ ಕನ್ನಡಪರ ಸಂಘಟನೆಯ ಪದಾಧಿಕಾರಿಗಳು ಇದ್ದರು.