ಸ್ವಚ್ಛತೆಯಿಂದ ಆರೋಗ್ಯಯುತ ಸಮಾಜ: ಸುನಿಲ್‌ ಕುಮಾರ್‌

KannadaprabhaNewsNetwork |  
Published : Sep 03, 2024, 01:37 AM IST
ಕಾರ್ಕಳ  : ಕ್ರಿಯೇಟಿವ್ ಕಾಲೇಜಿನ ಸಹಕಾರದೊಂದಿಗೆ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮ | Kannada Prabha

ಸಾರಾಂಶ

ಜೋಡುರಸ್ತೆಯಿಂದ ಹಿರ್ಗಾನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಜೂರು ವರೆಗೆ, ಮಾವಿನಕಟ್ಟೆಯಿಂದ ಕಾನಂಗಿ ವೆಂಕಟೇಶ್ವರ ದೇವಸ್ಥಾನದ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ, ವಾಹನ ಸಂಚಾರಕ್ಕೆ ಅಡಚಣೆಯಾಗುವಂತಿದ್ದ ಗಿಡಗಂಟಿಗಳ ನಿರ್ಮೂಲನೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಕಾರ್ಕಳ

ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ರಾಷ್ಟ್ರೀಯ ಸೇವಾ ಯೋಜನೆ ಪ್ರಾಂತೀಯ ಕೇಂದ್ರ ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಾಷ್ಟ್ರೀಯ ಸೇವಾ ಯೋಜನೆ ಕೋಶ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನಾ ಘಟಕ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು.

ಕಾರ್ಯಕ್ರಮ ಉದ್ಘಾ ಟಿಸಿ ಮಾತನಾಡಿದ ಶಾಸಕ ಸುನಿಲ್ ಕುಮಾರ್, ಎಲ್ಲರೂ ಸ್ವಚ್ಛತೆ ಕಾಪಾಡುವುದರಿಂದ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಲು ಸಹಕಾರಿ. ಸ್ವಚ್ಛತೆ ಇರುವ ಕಡೆ ಸಾಂಕ್ರಾಮಿಕ ಕಾಯಿಲೆಗಳು ಹರಡದಂತೆ ತಡೆಗಟ್ಟಬಹುದು. ನಮ್ಮ ಮನೆ, ಗ್ರಾಮ, ತಾಲೂಕು, ಜಿಲ್ಲೆ, ರಾಜ್ಯಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿದಾಗಲೇ ಸ್ವಚ್ಛ ಭಾರತವಾಗಿ ಮೂಡಿ ಬರಲು ಸಾಧ್ಯ ಎಂದರು.ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಡಾ. ಬಿ.ಗಣನಾಥ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಡುವುದು ನಮ್ಮೆಲ್ಲರ ಕರ್ತವ್ಯ ಎಂದರು.ಕಾರ್ಯಕ್ರಮದಲ್ಲಿ ಹಿರ್ಗಾನ ಗ್ರಾಪಂ ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷ ಸತೀಶ್ ಪೂಜಾರಿ, ಸುಭಾಷ್, ಸಂಸ್ಥೆಯ ಸಂಸ್ಥಾಪಕ ಆದರ್ಶ ಎಂ.ಕೆ., ಪ್ರಾಂಶುಪಾಲ ವಿದ್ವಾನ್ ಗಣಪತಿ ಭಟ್, ರಾಷ್ಟ್ರೀಯ ಸೇವಾ ಯೋಜನಾ ಸಂಯೋಜನಾಧಿಕಾರಿ ಉಪನ್ಯಾಸಕ ಉಮೇಶ್, ಬೋಧಕ ಮತ್ತು ಬೋಧಕೇತರ ವೃಂದದವರು, ವಾಣಿಜ್ಯ ವಿಭಾಗದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಜೀವಶಾಸ್ತ್ರ ಉಪನ್ಯಾಸಕ ಲೋಹಿತ್ ಎಸ್.ಕೆ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.ಜೋಡುರಸ್ತೆಯಿಂದ ಹಿರ್ಗಾನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಜೂರು ವರೆಗೆ, ಮಾವಿನಕಟ್ಟೆಯಿಂದ ಕಾನಂಗಿ ವೆಂಕಟೇಶ್ವರ ದೇವಸ್ಥಾನದ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ, ವಾಹನ ಸಂಚಾರಕ್ಕೆ ಅಡಚಣೆಯಾಗುವಂತಿದ್ದ ಗಿಡಗಂಟಿಗಳ ನಿರ್ಮೂಲನೆ ಮಾಡಲಾಯಿತು.

PREV

Recommended Stories

ಆರೆಸ್ಸೆಸ್‌ ವಿಚಾರಕ್ಕೆ ಪ್ರಿಯಾಂಕ್‌ಗೆ ಬೆದರಿಕೆ ಕರೆ ಮಾಡಿದ್ದವನ ಬಂಧನ
2,350 ಕೋಟಿ ವೆಚ್ಚದಲ್ಲಿ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಕ್ಕೆ ಒಪ್ಪಿಗೆ