ಕಾಲೇಜು ವಿದ್ಯಾರ್ಥಿನಿಗೆ ಬೆಂಕಿ ಹಚ್ಚಿ ಸುಟ್ಟು ಬರ್ಬರ ಹತ್ಯೆ

KannadaprabhaNewsNetwork |  
Published : Aug 21, 2025, 01:00 AM IST
ಚಿತ್ರದುರ್ಗ ಮೂರನೇ ಪುಟದ  ಲೀಡ್   | Kannada Prabha

ಸಾರಾಂಶ

ಚಿತ್ರದುರ್ಗ ಹೊರ ವಲಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ವಿದ್ಯಾರ್ಥಿನಿಯೋರ್ವಳ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಚಿತ್ರದುರ್ಗ: ಚಿತ್ರದುರ್ಗ ಹೊರ ವಲಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ವಿದ್ಯಾರ್ಥಿನಿಯೋರ್ವಳ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಂಗಳವಾರ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತಾದರೂ ಗುರುತು ಹಚ್ಚಲಾಗಿರಲಿಲ್ಲ. ಕೊಲೆಯಾದ ಯುವತಿ ಪದವಿ ವಿದ್ಯಾರ್ಥಿನಿ ವರ್ಷಿತಾ (19) ಎಂದು ಗ್ರಾಮಾಂತರ ಠಾಣೆ ಪೊಲೀಸರು ಗುರುತಿಸಿದ್ದು, ಈ ಸಂಬಂಧ ಶಂಕಿತ ಯುವಕನೋರ್ವನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.

ವರ್ಷಿತಾ ಹಿರಿಯೂರು ತಾಲೂಕಿನ ಕೋವೇರಹಟ್ಟಿ ಗ್ರಾಮದವಳಾಗಿದ್ದು, ಚಿತ್ರದುರ್ಗ ನಗರದಲ್ಲಿನ ಬಾಲಕಿಯರ ವಸತಿ ಶಾಲೆಯಲ್ಲಿ ಇದ್ದುಕೊಂಡು ಸರ್ಕಾರಿ ಪದವಿ ಕಾಲೇಜಿನ ಪ್ರಥಮ ವರ್ಷದ ಬಿಎ ಅಭ್ಯಾಸ ಮಾಡುತ್ತಿದ್ದಳು. ಆಗಸ್ಟ್ 14ರಂದು ರಜೆ ಕೋರಿ ಎಸ್ಸಿ, ಎಸ್ಟಿ ಬಾಲಕಿಯರ ಹಾಸ್ಟೆಲ್ ವಾರ್ಡನ್‌ಗೆ ಲೀವ್ ಲೆಟರ್ ನೀಡಿದ್ದಳು. ನಂತರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ವರ್ಷಿಣಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದ್ದು, ಮಳೆಯಿಂದಾಗಿ ಅರೆ ಬೆರೆ ಸುಟ್ಟ ಶವ ಪತ್ತೆಯಾಗಿದೆ.

ವಿದ್ಯಾರ್ಥಿನಿ ವರ್ಷಿತಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ತಾಯಿ ತಾಯಿ ಜ್ಯೋತಿ ತಿಪ್ಪೇಸ್ವಾಮಿ, ಮೊನ್ನೆ ರಾತ್ರಿ ಮಗಳು ಕರೆ ಮಾಡಿ ಅಮ್ಮಾ ಎಂದಷ್ಟೇ ಹೇಳಿದಳು. ನಂತರ ಮೊಬೈಲ್ ಸಂಪರ್ಕಕ್ಕೆ ಸಿಗಲಿಲ್ಲ. ಆತಂಕಗೊಂಡು ಮಂಗಳವಾರ ಬೆಳಿಗ್ಗೆ ಹಾಸ್ಟೆಲ್ ಬಳಿಗೆ ಹೋಗಿದ್ದೆ, ಮಗಳು ಕಾಣಲಿಲ್ಲ. ಬಳಿಕ ನೇರವಾಗಿ ಹಿರಿಯೂರಿನ ಐಮಂಗಲ ಠಾಣೆಗೆ ಹೋಗಿ ನಾಪತ್ತೆ ದೂರು ನೀಡಿದ್ದೆವು. ಸಂಜೆ ಆಕೆ ಕೊಲೆಯಾಗಿರುವ ಸಂಗತಿ ಕಿವಿಗೆ ಅಪ್ಪಳಿಸಿತು ಎಂದು ತಿಳಿಸಿದರು.

ಚಿತ್ರದುರ್ಗದ ಚೇತನ್ ಎಂಬ ಯುವಕ ನನ್ನ ಪುತ್ರಿಗೆ ಫೋನ್ ಮಾಡಿ ಕರೆದೊಯ್ದು ಕೊಂದು ಹಾಕಿದ್ದಾನೆಂದು ಗಂಭೀರ ಆರೋಪ ಮಾಡಿದರು. ನಮಗೆ ಗಂಡು ಮಕ್ಕಳಿಲ್ಲದ ಕಾರಣ ವರ್ಷಿತಾಳನ್ನು ಪ್ರೀತಿಯಿಂದ ಸಾಕಿ ಬೆಳೆಸಿದ್ದೆವು. ನನ್ನ ಬಳಿ ವರ್ಷಿತಾ ಯಾವ ವಿಚಾರ, ಏನು ಹೇಳುತ್ತಿರಲಿಲ್ಲ. ನನ್ನ ಮಗಳಿಗೆ ಆಗಿರುವ ಪರಿಸ್ಥಿತಿ ಬೇರೆಯವರಿಗೆ ಬಾರದಿರಲಿ ಎಂದರು.

ಮೃತ ವರ್ಷಿತಾಳ ತಂದೆ ತಿಪ್ಪೇಸ್ವಾಮಿ ಮಾತನಾಡಿ, ಮೊನ್ನೆ ಫೋನ್ ಸ್ವಿಚ್‌ಆಫ್ ಆದಾಗ ನಾಪತ್ತೆ ದೂರು ನೀಡಿದ್ದೆವು. ಹಾಸ್ಟೆಲ್ ಸಿಬ್ಬಂದಿ ನಮಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ಹಾಸ್ಟೆಲ್ ಸಿಬ್ಬಂದಿ ಕಾಳಜಿ ವಹಿಸಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ. ಚಿತ್ರದುರ್ಗದ ಕೆಳಗೋಟೆಯ ಚೇತನ್ ಫೋನ್‌ನಲ್ಲಿ ಮಾತಾಡುತ್ತಿದ್ದನು. ವರ್ಷಿತಾಳಿಗೆ ಚುಡಾಯಿಸುತ್ತಿದ್ದನು, ವರ್ಷಿತಾ ಜತೆ ಓಡಾಡುತ್ತಿದ್ದನೆಂದು ಹಾಸ್ಟೆಲ್ ವಿದ್ಯಾರ್ಥಿನಿಯರು ತಿಳಿಸಿದ್ದಾರೆ. ನಮಗೆ ವರ್ಷಿತಾಳ ಸಾವಿಗೆ ನ್ಯಾಯ ಬೇಕು ಎಂದರು.

ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ ಎಸ್ಪಿ ರಂಜಿತ್‌ಕುಮಾರ್ ಬಂಡಾರು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನ ವಶಕ್ಕೆ ಪಡೆದು ವಿಚಾರಣೆ ನಡಸಲಾಗುತ್ತಿದೆ. ವಿಚಾರಣೆ ಮುಗಿದ ಬಳಿಕವೇ ಸತ್ಯಾಂಶ ಹೊರಗೆ ಬರಲಿದೆ ಎಂದು ತಿಳಿಸಿದರು.

ವಿದ್ಯಾರ್ಥಿನಿ ಹತ್ಯೆ ಸಂಬಂಧಿಸಿದಂತೆ ಎಬಿವಿಪಿ, ದಲಿತ, ಕನ್ನಡಪರ ಸಂಘಟನೆಗಳು ಬುಧವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದವು. ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ್, ಉಸ್ತುವಾರಿ ಸಚಿವ ಡಿ.ಸುಧಾಕರ್ ಚಿತ್ರ ಪ್ರದರ್ಶನ ಮಾಡಿದರು.

PREV
Read more Articles on

Recommended Stories

ಗುತ್ತಲದಲ್ಲಿ ಸಂಭ್ರಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಹಳಿಯಾಳದ ಮೆಕ್ಕೆಜೋಳದಲ್ಲಿ ಕೀಟನಾಶಕಗಳ ಪ್ರಮಾಣ ಅಧಿಕ