ಪ್ರತಾಪ್ ಸಿಂಹ ಗಡಿಪಾರಿಗೆ ಆಗ್ರಹಿಸಿ ಭಾವಚಿತ್ರದ ಮುಂದೆ ಚಪ್ಪಲಿ ಇಟ್ಟು ಪೂಜೆ ಮಾಡಿ ಸಮಿತಿ ಪ್ರತಿಭಟನೆ

KannadaprabhaNewsNetwork |  
Published : Sep 23, 2026, 01:45 AM IST
22ಎಚ್ಎಸ್ಎನ್18 :  | Kannada Prabha

ಸಾರಾಂಶ

ಇತ್ತೀಚೆಗೆ ಟಿ. ನರಸೀಪುರದಲ್ಲಿ ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ಉಂಟಾದ ವಿವಾದ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಅವರು ನೀಡಿರುವ ಹೇಳಿಕೆಗಳು ಸಾಮಾಜಿಕ ಸಾಮರಸ್ಯದ ದೃಷ್ಟಿಯಿಂದ ಆತಂಕ ಮೂಡಿಸುವಂತಿವೆ. ಧಾರ್ಮಿಕ ಆಚರಣೆಗಳು ವಿವಿಧ ಸಮುದಾಯಗಳ ನಡುವೆ ಸೌಹಾರ್ದತೆ ಬೆಳೆಸುವ ವೇದಿಕೆಯಾಗಬೇಕೇ ಹೊರತು, ಧರ್ಮ, ಜಾತಿ ಆಧಾರಿತ ಭಿನ್ನಾಭಿಪ್ರಾಯಗಳಿಗೆ ಕಾರಣವಾಗಬಾರದು ಎಂದು ಮುಖಂಡರು ಅಭಿಪ್ರಾಯಪಟ್ಟರು.

ಕನ್ನಡಪ್ರಭವಾರ್ತೆ, ಹಾಸನ

ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಅವರ ಭಾವಚಿತ್ರದ ಮುಂದೆ ಚಪ್ಪಲಿ ಇಟ್ಟು ಪೂಜೆ ಸಲ್ಲಿಸಿದ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಮುಖಂಡರು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ದಲಿತ ಸಮನ್ವಯ ಸಮಿತಿ ಮುಖಂಡ ಕೃಷ್ಣ ದಾಸ್ ಮಾತನಾಡಿ, ಇತ್ತೀಚೆಗೆ ಟಿ. ನರಸೀಪುರದಲ್ಲಿ ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ಉಂಟಾದ ವಿವಾದ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಅವರು ನೀಡಿರುವ ಹೇಳಿಕೆಗಳು ಸಾಮಾಜಿಕ ಸಾಮರಸ್ಯದ ದೃಷ್ಟಿಯಿಂದ ಆತಂಕ ಮೂಡಿಸುವಂತಿವೆ. ಧಾರ್ಮಿಕ ಆಚರಣೆಗಳು ವಿವಿಧ ಸಮುದಾಯಗಳ ನಡುವೆ ಸೌಹಾರ್ದತೆ ಬೆಳೆಸುವ ವೇದಿಕೆಯಾಗಬೇಕೇ ಹೊರತು, ಧರ್ಮ, ಜಾತಿ ಆಧಾರಿತ ಭಿನ್ನಾಭಿಪ್ರಾಯಗಳಿಗೆ ಕಾರಣವಾಗಬಾರದು ಎಂದು ಮುಖಂಡರು ಅಭಿಪ್ರಾಯಪಟ್ಟರು. ರಾಜಕೀಯ ವಿಚಾರಗಳಿಗಾಗಿ ಧಾರ್ಮಿಕ ಹಾಗೂ ಸಾಮಾಜಿಕ ಸೂಕ್ಷ್ಮ ವಿಚಾರಗಳನ್ನು ಬಳಸಿಕೊಳ್ಳುವುದರಿಂದ ಸಮಾಜದಲ್ಲಿ ಅನಗತ್ಯ ಸಂಘರ್ಷದ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ. ಆದ್ದರಿಂದ ಸಾರ್ವಜನಿಕ ಜೀವನದಲ್ಲಿರುವವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಐದು ದಶಕಗಳಿಗೂ ಹೆಚ್ಚು ಕಾಲ ದಲಿತರ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸಿಕೊಂಡು ಬಂದಿದೆ. ಸಂಘಟನೆ ಕಾರ್ಯಕರ್ತರನ್ನು ನಿಂದಿಸುವುದು ಹಾಗೂ ಅವರು ಧರಿಸುವ ನೀಲಿ ಶಾಲಿನ ಕುರಿತು ವ್ಯಂಗ್ಯವಾಡಿರುವುದು ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗೆ ಅಗೌರವ ತೋರಿದಂತಾಗಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಮುಖಂಡರಾದ ಎಚ್.ಕೆ. ಸಂದೇಶ್, ಡಿ. ಶಿವಮ್ಮ, ಹೆತ್ತೂರು ನಾಗರಾಜ್, ಸಂದೀಪ್, ವೆಂಕಟೇಶ್, ಸಂತೋಷ್, ಗೊರೂರು ರಾಜು, ಆರ್‌ಪಿಐ ಸತೀಶ್, ರಾಜೇಶ್, ನಲ್ಲಪ್ಪ, ಮಲ್ಲಿಗೆವಾಳ್ ದೇವಪ್ಪ, ಸಿದ್ದಪ್ಪ, ಅಂಬೂಗ ಮಲ್ಲೇಶ್ ಸೇರಿದಂತೆ ಹಲವು ದಲಿತ ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೂಡೇಹೊಸಹಳ್ಳಿ ಏತ ನೀರಾವರಿ ಯೋಜನೆ ಆದಷ್ಟು ಬೇಗ ಪೂರ್ಣಗೊಳಿಸಿ
ಪಡಿತರ ಪದಾರ್ಥ ಪಡೆಯಲು ದೂರದ ಊರಿಗೆ ಹೋಗಬೇಕಿಲ್ಲ: ಸಚ್ಚಿನ್ ಚಲುವರಾಯಸ್ವಾಮಿ