ಶಿಕ್ಷಕರ ಬೇಡಿಕೆ ಈಡೇರಿಸಲು ಪ್ರಮಾಣಿಕ ಪ್ರಯತ್ನ

KannadaprabhaNewsNetwork |  
Published : Sep 21, 2025, 02:00 AM IST
ಕನ್ನಡಪ್ರಭ ವಾರ್ತೆ  ಹನೂರುಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಶಿಕ್ಷಕರ  ಪಾತ್ರ ಪ್ರಮುಖವಾದದ್ದು ತಮ್ಮ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಂಆರ್ ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು....ಹನೂರು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು...  ಈ ಬಾರಿ ಶಿಕ್ಷಕರ ದಿನಾಚರಣೆ ನೋವಿನ ಸಂಗಾತಿ : ಅಕಾಲಿಕ ಮರಣ ಹೊಂದಿದ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಅವರು ಕ್ಷೇತ್ರದ ಶೈಕ್ಷಣಿಕ ವಲಯದ  ಶಿಕ್ಷಣಾಧಿಕಾರಿಯಾಗಿ ಹಗಲಿರುಳು ಉತ್ತಮ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಭರವಸೆ ನೀಡುವ ಮೂಲಕ ಈ ಬಾರಿ ಜಿಲ್ಲೆಯಲ್ಲಿಯೇ ಹನೂರು ತಾಲೂಕು  ಶೈಕ್ಷಣಿಕ ವಲಯವು ಮಕ್ಕಳನ್ನು ಉನ್ನತ ಶಿಕ್ಷಣ ನೀಡಲು ಶಿಕ್ಷಕರ ಸಹಕಾರದೊಂದಿಗೆ ಅವರ ಸೇವೆ ಅನನ್ಯವಾಗಿದೆ ಅಕಾಲಿಕ ಮರಣದಿಂದ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಹೀಗಾಗಿ ಅವರ ಕುಟುಂಬದವರು ಸಹ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಅವರಿಗೆ ಮಲೆ ಮಾದೇಶ್ವರ ಒಳಿತು ಮಾಡಲಿ ದುಃಖ ಭರಿಸುವ ಶಕ್ತಿ ನೀಡಲಿ ಮುಂದಿನ ದಿನಗಳಲ್ಲಿ ಹನೂರು ತಾಲೂಕಿನ ಶೈಕ್ಷಣಿಕ ವಲಯದ   ಶಾಲೆಗಳ ಶಿಕ್ಷಕರ ಜೊತೆ ಸಹ ಸಭೆ ನಡೆಸಿ ಶೈಕ್ಷಣಿಕ ಪ್ರಗತಿಗೆ ಮಕ್ಕಳ ಒಡನಾಟದ ಬಗ್ಗೆ ಮಾಹಿತಿಯನ್ನು ಸಹ ಪಡೆದುಕೊಂಡಿದ್ದೇನೆ ಹೀಗಾಗಿ ಶೈಕ್ಷಣಿಕ ವಲಯವನ್ನು ಪ್ರಗತಿ ಸಾಧಿಸಲು ಶಿಕ್ಷಕರು ಸಮವಹಿಸಬೇಕು ಗುಡ್ಡಗಾಡು ಪ್ರದೇಶ ಆಗಿರುವುದರಿಂದ ಶಿಕ್ಷಕರು ಸಾರ್ವಜನಿಕ ಶಿಕ್ಷಣ ಇಲಾಖೆಯ ಸವಲತ್ತುಗಳನ್ನು ಪಡೆದು ಉತ್ತಮ ಸೇವೆ ಸಲ್ಲಿಸುವ ಮೂಲಕ ಮುಂದಾಗಬೇಕು ಶೈಕ್ಷಣಿಕ ಪ್ರಗತಿಗೆ ಬೇಕಾಗಿರುವ ಹೆಚ್ಚಿನ ಪ್ರಮಾಣದಲ್ಲಿ ಶಾಸಕನಾಗಿ ನಾನು ಸಹ ಒತ್ತು ನೀಡುತ್ತೇನೆ ಎಂದು ತಿಳಿಸಿದರು...ಗೌರವ ಸಮರ್ಪಣೆ : ಇತ್ತೀಚೆಗೆ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಮಕಾಲಿಕ ಮರಣ ಹೊಂದಿದ ಹಿನ್ನೆಲೆಯಲ್ಲಿ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ  ದಿವಂಗತ ಗುರುಲಿಂಗಯ್ಯ ಅವರಿಗೆ ನಮನ ಸಲ್ಲಿಸಿ ಗೌರವಿಸಿದರು ಇದೇ ವೇಳೆಯಲ್ಲಿಯೂ ವೇದಿಕೆಯಲ್ಲಿದ್ದ ಗಣ್ಯರು ಸಹ ನಮ್ಮನ್ನು ಸಲ್ಲಿಸಿದರು.ನಿವೃತ್ತ ಶಿಕ್ಷಕರಿಗೆ ಸನ್ಮಾನ ಗೌರವ ಸಮರ್ಪಣೆ : ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಹಿರಿಯ ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ ಶಾಸಕ ಎಂಆರ್ ಮಂಜುನಾಥ್ ಹಾಗೂ ಶಿಕ್ಷಕರ ತಂಡ ಸನ್ಮಾನಿಸಿ ಗೌರವಿಸಿದರು...ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿಗಳಾದ ಚೈತ್ರ ಶಿಕ್ಷಣಾಧಿಕಾರಿ ಮಹೇಶ್ ಕುಮಾರ್ ಸಾಹಿತಿಗಳಾದ ಸಂಕಲ್ಪುರ ಮಹದೇವ್ ರಾಜ್ಯ ಸರ್ಕಾರಿ ನೌಕರರ ಸಂಘದ ಹನೂರು ಘಟಕದ ಅಧ್ಯಕ್ಷರಾದ ಗುರುಸ್ವಾಮಿ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಕೃಷ್ಣೆಗೌಡ ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಸವರಾಜ್ ಚಂದ್ರಶೇಖರ್ ಭರ್ತಿ ಶಿಕ್ಷಕರ ಸಂಘದ ಅಧ್ಯಕ್ಷ ಶಿವಮಲ್ಲು ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷರಾದ ಧರ್ಮಲಿಂಗ ಮಾದೇಶ್ ಶಿಕ್ಷಕ ವೃಂದದವರು ವಿವಿಧ ಭಾಗಗಳಿಂದ ಬಂದಿದ್ದ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು....Hnr,2news,2  ಹನೂರು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಎಂಆರ್ ಮಂಜುನಾಥ್  ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಿದರು....Hnr,3news,2.  ಹನೂರು ಸರ್ಕಾರಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅಕಾಲಿಕ ಮರಣ ಹೊಂದಿದ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಅವರಿಗೆ ಗೌರವ ಸಮರ್ಪಣೆ ಸಲ್ಲಿಸಿದ ಶಾಸಕ ಎಂಆರ್ ಮಂಜುನಾಥ್ | Kannada Prabha

ಸಾರಾಂಶ

ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದ್ದು ತಮ್ಮ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಂ.ಆರ್‌ .ಮಂಜುನಾಥ್ ಹೇಳಿದರು.ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ, ಹನೂರು

ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದ್ದು ತಮ್ಮ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಂ.ಆರ್‌ .ಮಂಜುನಾಥ್ ಹೇಳಿದರು.ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಕಾಲಿಕ ಮರಣ ಹೊಂದಿದ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಕ್ಷೇತ್ರದ ಶೈಕ್ಷಣಿಕ ವಲಯದ ಶಿಕ್ಷಣಾಧಿಕಾರಿಯಾಗಿ ಹಗಲಿರುಳು ಉತ್ತಮ ಸೇವೆ ಸಲ್ಲಿಸಿದ್ದಾರೆ. ಈ ಬಾರಿ ಜಿಲ್ಲೆಯಲ್ಲಿಯೇ ಹನೂರು ತಾಲೂಕು ಶೈಕ್ಷಣಿಕ ವಲಯವು ಮಕ್ಕಳನ್ನು ಉನ್ನತ ಶಿಕ್ಷಣ ನೀಡಲು ಶಿಕ್ಷಕರ ಸಹಕಾರದೊಂದಿಗೆ ಅವರ ಸೇವೆ ಅನನ್ಯವಾಗಿದೆ. ಅಕಾಲಿಕ ಮರಣದಿಂದ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.

ಹೀಗಾಗಿ ಅವರ ಕುಟುಂಬದವರು ಸಹ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಅವರಿಗೆ ಮಲೆ ಮಾದೇಶ್ವರ ಒಳಿತು ಮಾಡಲಿ. ದುಃಖ ಭರಿಸುವ ಶಕ್ತಿ ನೀಡಲಿ. ಮುಂದಿನ ದಿನಗಳಲ್ಲಿ ಹನೂರು ತಾಲೂಕಿನ ಶೈಕ್ಷಣಿಕ ವಲಯದ ಶಾಲೆಗಳ ಶಿಕ್ಷಕರ ಜೊತೆ ಸಹ ಸಭೆ ನಡೆಸಲಾಗುವುದು. ಶೈಕ್ಷಣಿಕ ಪ್ರಗತಿಗೆ ಮಕ್ಕಳ ಒಡನಾಟದ ಬಗ್ಗೆ ಮಾಹಿತಿಯನ್ನು ಸಹ ಪಡೆದುಕೊಂಡಿದ್ದೇನೆ.

ಶೈಕ್ಷಣಿಕ ವಲಯವನ್ನು ಪ್ರಗತಿ ಸಾಧಿಸಲು ಶಿಕ್ಷಕರು ಶ್ರಮವಹಿಸಬೇಕು. ಗುಡ್ಡಗಾಡು ಪ್ರದೇಶ ಆಗಿರುವುದರಿಂದ ಶಿಕ್ಷಕರು ಸಾರ್ವಜನಿಕ ಶಿಕ್ಷಣ ಇಲಾಖೆಯ ಸವಲತ್ತುಗಳನ್ನು ಪಡೆದು ಉತ್ತಮ ಸೇವೆ ಸಲ್ಲಿಸುವ ಮೂಲಕ ಮುಂದಾಗಬೇಕು. ಶೈಕ್ಷಣಿಕ ಪ್ರಗತಿಗೆ ಬೇಕಾಗಿರುವ ಹೆಚ್ಚಿನ ಪ್ರಮಾಣದಲ್ಲಿ ಶಾಸಕನಾಗಿ ನಾನು ಸಹ ಒತ್ತು ನೀಡುತ್ತೇನೆ ಎಂದು ತಿಳಿಸಿದರು.

ದಿವಂಗತ ಗುರುಲಿಂಗಯ್ಯ ಅವರಿಗೆ ನಮನ ಸಲ್ಲಿಸಲಾಯಿತು. ನಿವೃತ್ತ ಹಿರಿಯ ಶಿಕ್ಷಕರನ್ನು ಶಾಸಕ ಎಂ.ಆರ್‌. ಮಂಜುನಾಥ್ ಗೌರವಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿಗಳಾದ ಚೈತ್ರ, ಶಿಕ್ಷಣಾಧಿಕಾರಿ ಮಹೇಶ್ ಕುಮಾರ್, ಸಾಹಿತಿ ಮಹದೇವ್ , ರಾಜ್ಯ ಸರ್ಕಾರಿ ನೌಕರರ ಸಂಘದ ಹನೂರು ಘಟಕದ ಅಧ್ಯಕ್ಷ ಗುರುಸ್ವಾಮಿ, ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣೇಗೌಡ, ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್, ಚಂದ್ರಶೇಖರ್, ಬಡ್ತಿ ಶಿಕ್ಷಕರ ಸಂಘದ ಅಧ್ಯಕ್ಷ ಶಿವಮಲ್ಲು, ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಧರ್ಮಲಿಂಗ ಮಾದೇಶ್ ಭಾಗವಹಿಸಿದ್ದರು.

PREV

Recommended Stories

ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಟಾಕ್ಸಿಕ್‌ ಮುಂಬೈ ಶೂಟ್‌ ಮುಗಿಸಿ ಲಂಡನ್‌ಗೆ ಹಾರಿದ ಯಶ್‌