ಪರಮೇಶ್ವರ ಮೇಲಿನ ಇಡಿ ದಾಳಿಗೆ ಕಾಂಗ್ರೆಸ್ಸಿನ ಒಂದು ಗುಂಪು ಕಾರಣ: ಜೋಶಿ

KannadaprabhaNewsNetwork |  
Published : May 23, 2025, 12:18 AM ISTUpdated : May 23, 2025, 12:19 AM IST
ಪೋಟೋಇದೆ. | Kannada Prabha

ಸಾರಾಂಶ

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಸಂಬಂಧಿಸಿದ ಸಂಸ್ಥೆಗಳ ಮೇಲೆ ಇಡಿ ನಡೆಸಿದ ದಾಳಿಗೆ ಹೊರಗಿರುವ ವ್ಯಕ್ತಿಗಳು ಕಾರಣರಲ್ಲ, ಬದಲಾಗಿ ಕಾಂಗ್ರೆಸ್ಸಿನಲ್ಲಿಯೇ ಇರುವ ಒಂದು ಗುಂಪು ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗಂಭೀರ ಆರೋಪ ಮಾಡಿದರು.

ಗದಗ: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಸಂಬಂಧಿಸಿದ ಸಂಸ್ಥೆಗಳ ಮೇಲೆ ಇಡಿ ನಡೆಸಿದ ದಾಳಿಗೆ ಹೊರಗಿರುವ ವ್ಯಕ್ತಿಗಳು ಕಾರಣರಲ್ಲ, ಬದಲಾಗಿ ಕಾಂಗ್ರೆಸ್ಸಿನಲ್ಲಿಯೇ ಇರುವ ಒಂದು ಗುಂಪು ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗಂಭೀರ ಆರೋಪ ಮಾಡಿದರು.

ಗುರುವಾರ ನಗರದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಪರಮೇಶ್ವರ್ ವಿರುದ್ಧ ಇಡಿ‌ಗೆ ಮಾಹಿತಿ ನೀಡಿರುವವರು ಅವರದೇ ಪಕ್ಷದವರು. ಇದರಲ್ಲಿ ಕೇಂದ್ರ ಸರ್ಕಾರ ಅಥವಾ ಬಿಜೆಪಿ ಪಾತ್ರವಿದೆ ಎನ್ನುವ ಆರೋಪ ಕೇವಲ ರಾಜಕೀಯ ಡ್ರಾಮಾ ಆಗಿದೆ ಎಂದರು.

2013ರಲ್ಲಿ ಪರಮೇಶ್ವರರನ್ನು ಸೋಲಿಸಿದ್ದು ಸಿದ್ದರಾಮಯ್ಯ ಅವರೇ, ಇದನ್ನು ಜನ ಮರೆತಿಲ್ಲ. ಈಗ ದಲಿತ ನಾಯಕರನ್ನು ಗುರಿಯಾಗಿಸಿಕೊಂಡು ರಾಜಕೀಯ ನಾಟಕ ಮಾಡುತ್ತಿದ್ದಾರೆ ಎಂದು ತೀವ್ರವಾಗಿ ಟೀಕಿಸಿದರು. ಈಗಾಗಲೇ ಕೆಲವು ದೂರುಗಳು ಬಂದಿರುವ ಆಧಾರದಲ್ಲಿಯೇ ತನಿಖೆ ನಡೆಯುತ್ತಿದೆ. ಯಾರು ದೂರು ನೀಡಿದ್ದಾರೆ ಎಂಬುದು ಸಿದ್ದರಾಮಯ್ಯ ಅವರಿಗೆ ಗೊತ್ತಿದೆ ಎಂದ ಅವರು, ಪರಮೇಶ್ವರ ಅವರಿಗೆ ತೊಂದರೆ ನೀಡುವ ಉದ್ದೇಶ ಇಲ್ಲ. ಆದರೆ ಕಾನೂನು ಉಲ್ಲಂಘನೆ ಮಾಡಿಕೊಂಡಿದ್ದರೆ ಕ್ರಮ ಕೈಗೊಳ್ಳುವುದು ಸಹಜ ಎಂದರು.

ಪರಮೇಶ್ವರ ಅವರು ಗೃಹಮಂತ್ರಿಯಾದರೂ ಅಥವಾ ಕಾಂಗ್ರೆಸ್ ನಾಯಕರಾದರೂ, ಕಾನೂನು ಎಲ್ಲರಿಗೂ ಒಂದೇ ಅಲ್ಲವೇ? ತನಿಖೆಯು ನ್ಯಾಯೋಚಿತವಾಗಿ ನಡೆಯುತ್ತದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು
ಗ್ರಾಮೀಣ ಭಾಗದಲ್ಲೂ ವಸತಿ ಕಟ್ಟಡಗಳಿಗೆ ಒಸಿ-ಸಿಸಿ ಬೇಕಿಲ್ಲ