ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂವಿಧಾನ ಭದ್ರ ಬುನಾದಿ

KannadaprabhaNewsNetwork | Published : Jan 27, 2024 1:16 AM

ಸಾರಾಂಶ

ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಗಣರಾಜ್ಯದ ಪರಿಕಲ್ಪನೆಯನ್ನು ತಂದುಕೊಂಡ ಸುದಿನ ಇದಾಗಿದೆ. ಅಂಬೇಡ್ಕರ್ ಅವರು ದೇಶದ ಅಭಿವೃದ್ಧಿ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಪೂರಕವಾಗಿ ಸಂವಿಧಾನವನ್ನು ನೀಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿ ಅವರಣದಲ್ಲಿ ನಡೆದ ೭೫ನೇ ಗಣರಾಜ್ಯೋತ್ಸವ ಕಾರ್ಯಕ್ರಮ

ಕನ್ನಡಪ್ರಭ ವಾರ್ತ ಚಾಮರಾಜನಗರ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಗಣರಾಜ್ಯದ ಪರಿಕಲ್ಪನೆಯನ್ನು ತಂದುಕೊಂಡ ಸುದಿನ ಇದಾಗಿದೆ. ಅಂಬೇಡ್ಕರ್ ಅವರು ದೇಶದ ಅಭಿವೃದ್ಧಿ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಪೂರಕವಾಗಿ ಸಂವಿಧಾನವನ್ನು ನೀಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಅವರಣದಲ್ಲಿ ಶುಕ್ರವಾರ ನಡೆದ ೭೫ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರ ನಾಯಕ ಮಹಾತ್ಮಗಾಂಧಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಗಾಂಧೀಜಿ, ಅಂಬೇಡ್ಕರ್ ಅಶಯದಂತೆ ದೇಶದ ಸಮಗ್ರ ಅಬಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷ ದುಡಿಯುತ್ತಿದೆ. ಅವರು ಸಂವಿಧಾನದಲ್ಲಿ ಆಳವಡಿಸಿರುವ ಎಲ್ಲಾ ಅಂಶಗಳನ್ನು ಜಾರಿಗೊಳಿಸಿ ಸಾಮಾಜಿಕ ನ್ಯಾಯದಡಿಯಲ್ಲಿ ಕಾರ್ಯನಿರ್ವಹಿಸಿದೆ. ಎಲ್ಲಾ ವರ್ಗದ ಜನರಿಗೆ ಸಂವಿಧಾನ ಆಶಯದಂತೆ ಸಲವತ್ತುಗಳ ದೊರೆಯುವಂತೆ ಮಾಡುವ ಉದ್ದೇಶವನ್ನುಟ್ಟುಕೊಂಡು ಸಿಎಂ ಸಿದ್ದರಾಮಯ್ಯನವರು ಆಡಳಿತ ನಡೆಸುತ್ತಿದ್ದಾರೆ ಎಂದರು. ರಾಜ್ಯ ಎಲ್ಲಾ ವರ್ಗದ ಜನರ ಅಭಿವೃದ್ದಿ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಐದು ಪ್ರಮುಖ ಗ್ಯಾರಂಟಿಗಳ ಘೋಷಣೆ ಕೇವಲ ೬ ತಿಂಗಳಲ್ಲಿ ಜಾರಿ ಮಾಡುವ ಮೂಲಕ ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ. ಶಕ್ತಿ ಯೋಜನೆ, ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನ ಭಾಗ್ಯ ಹಾಗೂ ಯುವ ನಿಧಿಯ ಜಾರಿ ಮೂಲಕ ಪ್ರತಿ ಮನೆಗೆ ಮನೆಗೆ ಸರ್ಕಾರದ ಯೋಜನೆಗಳು ತಲುಪಿದೆ. ಈ ಮೂಲಕ ಸಂವಿಧಾನ ಆಶಯ ಮತ್ತು ಅಂಬೇಡ್ಕರ್ ಕನಸು ಈಡೇರಿಸುವ ಕೆಲಸವನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ನೇತೃತ್ವದ ಸರ್ಕಾರ ಮಾಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ್, ಆರ್. ಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್, ಎಪಿಎಂಸಿ ಮಾಜಿ ಅಧ್ಯಕ್ಷ ನಾಗೇಂದ್ರ, ಸೈಯದ್ ರಫಿ, ಸುಹೇಲ್ ಆಲಿ ಖಾನ್, ಅಯೂಬ್ ಖಾನ್, ಕಾರ್ಮಿಕ ವಿಭಾಗದ ಅಧ್ಯಕ್ಷ ಎಸ್. ಮಹೇಶ್, ಕಾರ್ಯಾಧ್ಯಕ್ಷ ದೊಡ್ಡರಾಯಪೇಟೆ ಮೂರ್ತಿ, ಉಪಾಧ್ಯಕ್ಷ ರವಿಗೌಡ, ಶಿವಮೂರ್ತಿ, ಸಿ.ಕೆ. ರವಿಕುಮಾರ್, ಅಕ್ಷಯ್, ನಾಗು ಮೋಹನ್, ಪದ್ಮ ಪರುಷೋತ್ತಮ್, ಶ್ರೀನಿವಾಸ್‌ಶೆಟ್ಟಿ, ಬಿಸಲವಾಡಿ ರವಿ, ಕುಮಾರ್, ಪುಟ್ಟಸ್ವ್ವಾಮಿ, ಎಸ್. ರಾಜು, ಮಹದೇವಸ್ವಾಮಿ, ಕಾಗಲವಾಡಿ ಚಂದ್ರು, ಶಿವಮೂರ್ತಿ, ಎಎಚ್‌ಎನ್ ಖಾನ್, ರಮೇಶ್, ಸೋಮಣ್ಣ, ನಗರಸಭಾ ಸದಸ್ಯರಾದ ಚಿನ್ನಮ್ಮ, ಕಲಾವತಿ, ನೀಲಮ್ಮ, ಅರುಣ್, ಶ್ರೀನಿವಾಸ್ ಮೊದಲಾದವರು ಇದ್ದರು.

Share this article