ಕನ್ನಡಪ್ರಭ ವಾರ್ತೆ ಉಡುಪಿ
ಅವರು ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಯುವ ಸಂಸತ್ತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಾಸಕ ಯಶ್‌ಪಾಲ್ ಎ ಸುವರ್ಣ ಮಾತನಾಡಿ, ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ ನಮ್ಮದು. 1.4 ಕೋಟಿ ಗೂ ಹೆಚ್ಚು ಜನರಿದ್ದರೂ ಸಹ ನೆಮ್ಮದಿಯ ಜೀವನ ನಡೆಸಲು ಸಂವಿಧಾನದ ಮೌಲ್ಯಗಳೇ ಕಾರಣ. ವಿಶ್ವದಲ್ಲಿಯೇ ಅತೀ ಹೆಚ್ಚು ಯುವ ಸಂಪತ್ತು ಹೊಂದಿರುವ ನಮ್ಮ ದೇಶದ ಯುವಜನತೆಯಲ್ಲಿ ಸಂವಿಧಾನದ ಬಗ್ಗೆ ಹೆಚ್ಚಿನ ತಿಳುವಳಿಕೆ ಪಡೆದು, ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ದೇಶ ಕಟ್ಟುವ ಕೆಲಸದಲ್ಲಿ ತೊಡಗಬೇಕು ಎಂದರು.ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸಂವಿಧಾನದ ಪೀಠಿಕೆ ಬೋಧಿಸಿದರು. ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರವೀಣ ಮೊಗವೀರ ಉಪನ್ಯಾಸ ನೀಡಿದರು. ಯುವ ಸಂಸತ್ತು ಕಾರ್ಯಕ್ರಮದ ಪೋಸ್ಟರ್ ಅನಾವರಣಗೊಳಿಸಲಾಯಿತು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ಮಡ್ಲೂರು ಸ್ವಾಗತಿಸಿ, ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿ, ವಂದಿಸಿದರು.