ಸಂಸದ ಸನಿಲ್‌ ಬೋಸ್‌ಗೆ ಹನೂರಿನಲ್ಲಿ ಅಭಿನಂದನಾ ಸಮಾರಂಭ

KannadaprabhaNewsNetwork |  
Published : Jul 09, 2024, 01:02 AM ISTUpdated : Jul 09, 2024, 05:25 AM IST
8ಸಿಎಚ್‌ಎನ್‌52ಹನೂರು ಪಟ್ಟಣ ಕಾಂಗ್ರೆಸ್ ಕಚೇರಿಯಲ್ಲಿ ಜುಲೈ 10ರಂದು ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಹಮ್ಮಿಕೊಂಡಿರುವ ನೂತನ ಸಂಸದರ ಕೃತಜ್ಞತಾ ಸಭೆ ಹಿನ್ನಲೆ ಹನೂರಿನಲ್ಲಿ ಮಾಜಿ ಶಾಸಕ ನರೇಂದ್ರ ರಾಜುಗೌಡ ಪೂರ್ವಭಾವಿ ಸಭೆ ನಡೆಸಿದರು. | Kannada Prabha

ಸಾರಾಂಶ

ಹೆಚ್ಚಿನ ಮತ ಕೊಡಿಸುವ ಮೂಲಕ ನೂತನ ಸಂಸದರನ್ನಾಗಿ ಸುನಿಲ್ ಬೋಸ್ ಅವರನ್ನು ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದು ಮಾಜಿ ಶಾಸಕ ಆರ್.ನರೇಂದ್ರ ರಾಜುಗೌಡ ತಿಳಿಸಿದರು. ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

 ಹನೂರು :  ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಿನ ಮತ ಕೊಡಿಸುವ ಮೂಲಕ ನೂತನ ಸಂಸದರನ್ನಾಗಿ ಸುನಿಲ್ ಬೋಸ್ ಅವರನ್ನು ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದು ಮಾಜಿ ಶಾಸಕ ಆರ್.ನರೇಂದ್ರ ರಾಜುಗೌಡ ತಿಳಿಸಿದರು.

ಹೆಚ್ಚಿನ ಮತ ಕೊಡಿಸುವ ಮೂಲಕ ನೂತನ ಸಂಸದರನ್ನಾಗಿ ಸುನಿಲ್ ಬೋಸ್ ಅವರನ್ನು ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದು ಮಾಜಿ ಶಾಸಕ ಆರ್.ನರೇಂದ್ರ ರಾಜುಗೌಡ ತಿಳಿಸಿದರು. ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಜು.10 ರಂದು ಚಾಮರಾಜನಗರದಲ್ಲಿ ಹಮ್ಮಿಕೊಂಡಿರುವ ಕೃತಜ್ಞತಾ ಸಭೆ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಜು.10 ರಂದು ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಕೃತಜ್ಞತಾ ಸಭೆ ಏರ್ಪಡಿಸಲಾಗಿದೆ. ಈ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹಾದೇವಪ್ಪ, ಗೃಹ ಸಚಿವ ಪರಮೇಶ್ವರ್ ಹಾಗೂ ವಿವಿಧ ಇಲಾಖೆಗಳ ಸಚಿವರು ಸ್ಥಳೀಯ ಶಾಸಕರು ಭಾಗವಹಿಸಲಿದ್ದಾರೆ. ನಮ್ಮ ಕ್ಷೇತ್ರದಿಂದ ಸುಮಾರು 3 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಮುಖಂಡರು ಈ ಸಭೆಗೆ ತೆರಳಲಿದ್ದಾರೆ ಎಂದು ತಿಳಿಸಿದರು.

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 34 ಗ್ರಾಮ ಪಂಚಾಯಿತಿ ಹಾಗೂ ಪಟ್ಟಣ ಪಂಚಾಯತಿ ಸೇರಿದಂತೆ ವಿವಿಧ ಗ್ರಾಮಗಳಿಗೆ 50 ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಕ್ರಮಕ್ಕೆ ಬರುವಂತಹ ಕಾರ್ಯಕರ್ತರು, ಮುಖಂಡರಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಕೃತಜ್ಞತಾ ಸಭೆ ಮುಗಿದ ನಂತರ ನೂತನ ಸಂಸದರಾದ ಸುನಿಲ್ ಬೋಸ್ ರವರನ್ನು ಕರೆತಂದು ಹನೂರು ವಿಧಾನಸಭಾ ಕ್ಷೇತ್ರದ ಹೋಬಳಿ ಮಟ್ಟದಲ್ಲಿ ಮುಖಂಡರು ಸಭೆ ನಡೆಸಿ ಮುಖಂಡರ ಪರಿಚಯ ಮಾಡಿಕೊಡಲಾಗುವುದು ಎಂದರು.

ವಿಧಾನಸಭಾ ಕ್ಷೇತ್ರದ‌ ವ್ಯಾಪ್ತಿಯಲ್ಲಿ ಕ್ಷೇತ್ರದ ಜನರಿಗೆ ಪೊಳ್ಳು ಭರವಸೆಗಳನ್ನು ನೀಡಿ, ಹಣದ ಆಮಿಷಗಳನ್ನು ಕೊಟ್ಟು ಜಯಗಳಿಸಿರುವ ಶಾಸಕರು ಕಳೆದ ಒಂದು ವರ್ಷದಿಂದ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ಆಗಿಲ್ಲ ಎಂದು ಶಾಸಕ ಎಂ.ಆರ್.ಮಂಜುನಾಥ್ ರವರ ಹೆಸರು ಹೇಳದೆ ವಾಗ್ದಾಳಿ ನಡೆಸಿದರು..

ಕಳೆದ 15 ವರ್ಷಗಳ ಅವಧಿಯಲ್ಲಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಲಾ, ಕಾಲೇಜು, ಸಮುದಾಯ ಭವನ, ಕಾಂಕ್ರೀಟ್ ರಸ್ತೆ, ಅಂಗನವಾಡಿ, ಮುಖ್ಯ ರಸ್ತೆಗಳು ಸೇರಿ ಎಷ್ಟು ಅಭಿವೃದ್ಧಿಯಾಗಿದೆ. ನಾನು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸೋತರೂ ಕ್ಷೇತ್ರದ ಕಾರ್ಯಕರ್ತರ ಕಷ್ಟ ಸುಖಗಳಿಗೆ ಸ್ಪಂದಿಸುತ್ತೇನೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಪಟ್ಟಣ ಪಂಚಾಯಿತಿ ಸದಸ್ಯ ಗಿರೀಶ್, ಸೋಮಶೇಖರ್, ಕೆಪಿಸಿಸಿ ಸದಸ್ಯ ಬಸವರಾಜು, ರಾಮಪುರ ಬ್ಲಾಕ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ರಾಮಲಿಂಗಂ, ಗ್ರಾಮ ಪಂಚಾಯಿತಿ ಅಧ್ಯಕ್ಷ ಇಗ್ನೇಶಿ ಮುತ್ತು, ಸದಸ್ಯರಾದ ಸುರೇಶ್ ರಂಗಸ್ವಾಮಿ, ಮುಖಂಡರಾದ ಮುರುಡೇಶ್ವರ ಸ್ವಾಮಿ, ಮಧುವನಹಳ್ಳಿ ಶಿವಕುಮಾರ್, ರಾಜು, ಮಾದೇಶ್, ಎಲ್.ರಾಜೇಂದ್ರ, ನಟರಾಜು ಹಾಜರಿದ್ದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಕಡಿಮೆ ಗುಣದ ಔಷಧಿ ಎರಡೇ ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ