ಸಮ್ಮೇಳನದಲ್ಲಿ ಸಂಭ್ರಮದ ಸಾಂಸ್ಕೃತಿಕ ಕಾರ್ಯಕ್ರಮ

KannadaprabhaNewsNetwork |  
Published : May 30, 2026, 02:30 AM IST
 | Kannada Prabha

ಸಾರಾಂಶ

ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಸುಂಟಿಕೊಪ್ಪದ ಎಸ್ ಎಸ್ ಇಂಟರ್ ನ್ಯಾಷನಲ್ ಸಭಾಂಗಣದ ಕವಿಶಿಷ್ಯ ಪಂಜೆ ಮಂಗೇಶರಾಯರ ವೇದಿಕೆಯಲ್ಲಿ ಶುಕ್ರವಾರ ರಾತ್ರಿ ವಿವಿಧ ಕಲಾ ತಂಡಗಳಿಂದ ಕನ್ನಡ ನಾಡು ನುಡಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.

ಸುಂಟಿಕೊಪ್ಪ: ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಸುಂಟಿಕೊಪ್ಪದ ಎಸ್ ಎಸ್ ಇಂಟರ್ ನ್ಯಾಷನಲ್ ಸಭಾಂಗಣದ ಕವಿಶಿಷ್ಯ ಪಂಜೆ ಮಂಗೇಶರಾಯರ ವೇದಿಕೆಯಲ್ಲಿ ಶುಕ್ರವಾರ ರಾತ್ರಿ ವಿವಿಧ ಕಲಾ ತಂಡಗಳಿಂದ ಕನ್ನಡ ನಾಡು ನುಡಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.ಸಾಂಸ್ಕೃತಿಕ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ಉದ್ಘಾಟಿಸಿದರು. ಕಾಫಿ ಬೆಳೆಗಾರ ದಾಸಂಡ ರಮೇಶ್, ಸೋಮವಾರಪೇಟೆ ತಾಪಂ ಮಾಜಿ ಅಧ್ಯಕ್ಷೆ ಗೀತಾ ಬಸಪ್ಪ, ತಾಪಂ ಮಾಜಿ ಸದಸ್ಯ ಕೆ.ಎಸ್. ಮಂಜುನಾಥ್ ಮತ್ತಿತರರು ಪಾಲ್ಗೊಂಡಿದ್ದರು. ಪ್ರಚಾರ ಸಮಿತಿ ಸಂಚಾಲಕ ರಾಜು ರೈ, ಆರೋಗ್ಯ ಸಮಿತಿ ಸಂಚಾಲಕ ವಿ.ಜಿ. ಲೋಕೇಶ್, ಮೆರವಣಿಗೆ ಸಮಿತಿ ಸಂಚಾಲಕ ಆದಂ ರಫಿ, ದಾಸಂಡ ರಮೇಶ್, ಮಣಿ ಉತ್ತಪ್ಪ ಅವರನ್ನು ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುರಸಭೆ ನಿರ್ಲಕ್ಷ್ಯ ಧೋರಣೆ ಆರೋಪ: ಮಾಜಿ ಸದಸ್ಯ ಪ್ರತಿಭಟನೆ
ಕೊಡಗು ಜಿಲ್ಲೆಗೆ ಸಚಿವ ಸ್ಥಾನ ನಿರೀಕ್ಷೆ!