ಮಗುವಿನ ಗಂಟಲಲ್ಲಿ ಸಿಲುಕಿದ ಮೀನು!: ಸರ್ಜಿ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಚಿಕಿತ್ಸೆ

KannadaprabhaNewsNetwork |  
Published : Feb 07, 2024, 01:47 AM IST
ಪೊಟೋ: 6ಎಸ್‌ಎಂಜಿಕೆಪಿ09: ಮೀನು ನುಂಗಿದ್ದ ಮಗುವಿನ ಗಂಟಲಿನಲ್ಲಿ ಗಂಟಲಲ್ಲಿ ಸಿಕ್ಕಿಕೊಂಡಿದ್ದ 11.3 ಸೆಂ.ಮೀ. ಉದ್ದದ ಮೀನನನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರು ಹೊರ ತೆಗೆದಿರುವುದು.  | Kannada Prabha

ಸಾರಾಂಶ

ಮನೆಯಲ್ಲಿ ಆಟವಾಡುವಾಗ ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳತಜ್ಞ ವೈದ್ಯರು ಜೀವಾಪಾಯದಿಂದ ಪಾರು ಮಾಡಿದ್ದಾರೆ. ಹೊನ್ನಾಳಿ ತಾಲೂಕಿನ ನ್ಯಾಮತಿ ಹತ್ತಿರದ ಗಂಜೇನಹಳ್ಳಿಯ ಯೋಗೀಶ್‌ ಮತ್ತು ರೋಜಾ ದಂಪತಿಯ 11 ತಿಂಗಳ ಮಗು ಪ್ರತೀಕ್‌ ಮನೆಯೊಳಗೆ ಆಟವಾಡುತ್ತಿತ್ತು. ಈ ವೇಳೆ ಮೀನನ್ನು ನುಂಗಿದೆ. ಇದನ್ನು ಗಮನಿಸಿದ ಪೋಷಕರು ತಕ್ಷಣವೇ ಮೀನನ್ನು ಹೊರತೆಗೆಯಲು ಪ್ರಯತ್ನ ನಡೆಸಿದ್ದಾರೆ. ಆದರೆ, ಯಶಸ್ವಿ ಆಗಿರಲಿಲ್ಲ. ಅಷ್ಟೊತ್ತಿಗಾಗಲೇ ಮಗುವಿನ ಸ್ಥಿತಿಯು ಗಂಭೀರವಾಗಿತ್ತು. ಬಳಿಕ ಪೋಷಕರು ಮಗುವನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ಕರೆ ತಂದಿದ್ದರು. ಕೂಡಲೇ ತಪಾಸಣೆ ನಡೆಸಿದ ತಜ್ಞವೈದ್ಯರು ತೀವ್ರ ನಿಗಾ ಘಟಕದಲ್ಲಿರಿಸಿ, ಗಂಟಲಲ್ಲಿ ಸಿಕ್ಕಿಕೊಂಡಿದ್ದ 11.3 ಸೆಂ.ಮೀ. ಉದ್ದದ ಮೀನನ್ನು ಹೊರತೆಗೆದು ಮಗುವಿನ ಜೀವ ಉಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಮನೆಯಲ್ಲಿ ಆಟವಾಡುವಾಗ ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳತಜ್ಞ ವೈದ್ಯರು ಜೀವಾಪಾಯದಿಂದ ಪಾರು ಮಾಡಿದ್ದಾರೆ.

ಹೊನ್ನಾಳಿ ತಾಲೂಕಿನ ನ್ಯಾಮತಿ ಹತ್ತಿರದ ಗಂಜೇನಹಳ್ಳಿಯ ಯೋಗೀಶ್‌ ಮತ್ತು ರೋಜಾ ದಂಪತಿಯ 11 ತಿಂಗಳ ಮಗು ಪ್ರತೀಕ್‌ ಮನೆಯೊಳಗೆ ಆಟವಾಡುತ್ತಿತ್ತು. ಈ ವೇಳೆ ಮೀನನ್ನು ನುಂಗಿದೆ. ಇದನ್ನು ಗಮನಿಸಿದ ಪೋಷಕರು ತಕ್ಷಣವೇ ಮೀನನ್ನು ಹೊರತೆಗೆಯಲು ಪ್ರಯತ್ನ ನಡೆಸಿದ್ದಾರೆ. ಆದರೆ, ಯಶಸ್ವಿ ಆಗಿರಲಿಲ್ಲ. ಅಷ್ಟೊತ್ತಿಗಾಗಲೇ ಮಗುವಿನ ಸ್ಥಿತಿಯು ಗಂಭೀರವಾಗಿತ್ತು. ಬಳಿಕ ಪೋಷಕರು ಮಗುವನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ಕರೆ ತಂದಿದ್ದರು. ಕೂಡಲೇ ತಪಾಸಣೆ ನಡೆಸಿದ ತಜ್ಞವೈದ್ಯರು ತೀವ್ರ ನಿಗಾ ಘಟಕದಲ್ಲಿರಿಸಿ, ಗಂಟಲಲ್ಲಿ ಸಿಕ್ಕಿಕೊಂಡಿದ್ದ 11.3 ಸೆಂ.ಮೀ. ಉದ್ದದ ಮೀನನ್ನು ಹೊರತೆಗೆದು ಮಗುವಿನ ಜೀವ ಉಳಿಸಿದ್ದಾರೆ.

ಇದೊಂದು ಅಪರೂಪದ ಪ್ರಕರಣವಾಗಿದೆ. ಈ ಪ್ರಕರಣದಲ್ಲಿ ಮಗುವಿಗೆ ಮಕ್ಕಳತಜ್ಞ ವೈದ್ಯ ಡಾ.ಪ್ರದೀಪ್‌ ಚಿಕಿತ್ಸೆ ಅವರು ನೀಡಿದ್ದು, ಮಗು ಪ್ರಾಣಾಪಾಯದಿಂದ ಪಾರಾಗಿದೆ.

ಚಿಕ್ಕಮಕ್ಕಳು ಈ ರೀತಿ ಆಹಾರ ಪದಾರ್ಥ, ಇಲ್ಲವೇ ಚಾಕೋಲೇಟ್‌, ಕಾಡಿಗೆ ಡಬ್ಬಿ, ಅಡಕೆ, ಗೋಲಿ, ಗಜಗ, ಶೇಂಗಾ ಬೀಜದಂತಹ ವಸ್ತುಗಳನ್ನು ಗಂಟಲಲ್ಲಿ ಸಿಕ್ಕಿಸಿಕೊಂಡು ಪ್ರಾಣಕ್ಕೆ ಎರವಾದಂತಹ ಘಟನೆಗಳು ಈ ಹಿಂದೆ ನಡೆದಿವೆ. ಪೋಷಕರು ಚಿಕ್ಕಮಕ್ಕಳ ಕೈಗೆ ಯಾವುದೇ ಘನ ವಸ್ತುಗಳನ್ನು ಸಿಗದಂತೆ ಇಡಬೇಕು ಎಂದು ತೀವ್ರ ನಿಗಾ ಘಟಕ ಹಾಗೂ ಶಸ್ತ್ರಚಿಕಿತ್ಸಾ ಘಟಕದ ತಜ್ಞ ವೈದ್ಯ ಡಾ.ವಿನೋದ್‌ ಸಲಹೆ ನೀಡಿದ್ದಾರೆ.

ವೈದ್ಯರ ಸೇವೆಯನ್ನು ಸರ್ಜಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಧನಂಜಯ ಸರ್ಜಿ ಹಾಗೂ ಮೆಡಿಕಲ್‌ ಸೂಪರಿಂಟೆಂಡೆಂಟ್‌ ಡಾ.ಪ್ರಶಾಂತ್‌ ಶ್ಲಾಘಿಸಿದ್ದಾರೆ.

- - - -6ಎಸ್‌ಎಂಜಿಕೆಪಿ09:

ಮಗುವಿನ ಗಂಟಲಲ್ಲಿ ಸಿಲುಕಿದ್ದ 11.3 ಸೆಂ.ಮೀ. ಉದ್ದದ ಮೀನನನ್ನು ಶಿವಮೊಗ್ಗದ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರು ಹೊರ ತೆಗೆದಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ!
ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಭರದ ಸಿದ್ಧತೆ