ಮಕ್ಕಳ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಅಗತ್ಯ

KannadaprabhaNewsNetwork |  
Published : Sep 09, 2024, 01:44 AM IST
ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ.ಕಾರ್ಯಕ್ರಮವನ್ನು ಉದ್ಘಾಟಿಸಿದ ದೃಶ್ಯ | Kannada Prabha

ಸಾರಾಂಶ

ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಬಿಇಒ ಕೆ.ಎಸ್ ಸುರೇಶ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಪರಶುರಾಮಪುರ

ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಬಿಇಒ ಕೆ.ಎಸ್ ಸುರೇಶ್ ತಿಳಿಸಿದರು.

ಗ್ರಾಮದ ಹೊರವಲಯದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪಠ್ಯ ಪುಸ್ತಕದೊಂದಿಗೆ ಪಠ್ಯೇತರ ಚಟುವಟಿಕೆ ಮಕ್ಕಳ ಭವಿಷ್ಯಕ್ಕೆ ಬುನಾದಿ ಹಾಕುತ್ತದೆ. ಅವರ ಪ್ರತಿಭೆ ಕೌಶಲ್ಯವನ್ನು ಗುರುತಿಸಲು ಪ್ರತಿಭಾ ಕಾರಂಜಿ ವೇದಿಕೆಯಾಗಿದೆ ಎಂದರು. ಪ್ರಾಂಶುಪಾಲ ಪ್ರಕಾಶ್ ಮಾತನಾಡಿ, ಪ್ರತಿಯೊಂದು ಮಗುವಿನಲ್ಲಿ ಒಂದಲ್ಲಾ ಒಂದು ಸಾಂಸ್ಕೃತಿಕ ಚಟುವಟಿಕೆ ಅಡಗಿರುತ್ತದೆ. ಅದನ್ನು ಗುರುತಿಸಿ ಅನಾವರಣ ಮಾಡುವ ಮೂಲಕ ಸರ್ವಾಂಗೀಣ ಬೆಳವಣಿಗೆಗೆ ಅವಕಾಶ ಕಲ್ಪಿಸಬೇಕು. ಸೋಲು ಗೆಲುವಿನ ಬಗ್ಗೆ ಯೋಚಿಸದೆ ಸ್ಪರ್ಧೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮಹಾಲಿಂಗಪ್ಪ ಮಾತನಾಡಿ, ಸ್ಥಳೀಯ ಜನಪದ, ನೃತ್ಯ, ಮತ್ತು ಗಾಯನ, ಚಿತ್ರಕಲೆ, ಪ್ರಬಂಧ, ಚರ್ಚಾ ಸ್ಪರ್ಧೆ, ಏಕಪಾತ್ರ ಅಭಿನಯ, ಸಾಮಾಜಿಕ ಮತ್ತು ಪೌರಾಣಿಕ ನಾಟಕಗಳು ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರ ಜತೆಗೆ ವಿದ್ಯಾರ್ಥಿಗಳಲ್ಲಿ ಕಲಾಭಿವೃದ್ಧಿಯ ಸಾಮರ್ಥ್ಯವನ್ನು ಸಾಬೀತು ಮಾಡಲು ಇದೊಂದು ಉತ್ತಮ ವೇದಿಕೆ ಎಂದು ಹೇಳಿದರು.

ಬಿ ಆರ್ ಪಿ ಶಿವಶಂಕರ್ ಮಾತನಾಡಿ, ಸರ್ಕಾರಿ ಶಾಲಾ ಮಕ್ಕಳು ಸರ್ವತೋಮುಖ ಅಭಿವೃದ್ಧಿಗೆ ಮಕ್ಕಳ ಕ್ರೀಡೆ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇಲ್ಲಿ ಮಕ್ಕಳು ತಮ್ಮಲ್ಲಿರುವ ಕಲೆ, ಸಾಹಿತ್ಯ ಜನಪದ ಪ್ರಕಾರದ ಪ್ರತಿಭೆಯನ್ನು ತೋರಿ ಸಾಂಸ್ಕೃತಿಕವಾಗಿ ಮುಂದೆ ಬರಬೇಕು ಎಂದರು.

ಪ್ರತಿಭಾ ಕಾರಂಜಿಯಲ್ಲಿ ಧಾರ್ಮಿಕ ಪಠಣ, ಸಂಸ್ಕೃತ ಮತ್ತು ಅರೇಬಿಕ್ (ಕನ್ನಡ, ಇಂಗ್ಲಿಷ್, ಸಂಸ್ಕೃತ, ಮತ್ತು ಹಿಂದಿ) ಕಂಠಪಾಠ ದೇಶ ಭಕ್ತಿ ಗೀತೆ, ಕಥೆ ಹೇಳುವುದು, ಚಿತ್ರಕಲೆ, ಅಭಿನಯ, ಭಕ್ತಿ ಗೀತೆ, ಆಶು ಭಾಷಣ, ಕವನ, ಪದ್ಯವಾಚನ, ಮಿಮಿಕ್ರಿ, ಸ್ಪರ್ಧೆಯಲ್ಲಿ ಮಕ್ಕಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಗ್ರಾಮ ಪಂಚಾಯತಿ ಸದಸ್ಯ ರುದ್ರೇಶ್ ಮಾತನಾಡಿ, ವಿದ್ಯಾರ್ಥಿಗಳು ಆಧುನಿಕ ಯುಗದಲ್ಲಿ ಸ್ಪರ್ಧೆ ಎದುರಿಸಿ ಬದುಕು ಕಟ್ಟಿಕೊಳ್ಳುವುದರ ಜತೆಗೆ ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.ವಿವಿಧ ಪ್ರಾಣಿಗಳು, ರಾಷ್ಟ್ರನಾಯಕರ ವೇಷದಲ್ಲಿ ಮಕ್ಕಳು ಮಿಂಚಿದರು. ವಿದ್ಯಾರ್ಥಿಗಳು ಪೋಷಕರು ಗ್ರಾಮಸ್ಥರು ಉಪಸ್ಥಿತರಿದ್ದರು.

PREV

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ